ಬೆಳಗಾವಿ- ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಿಜೆಪಿ ಮುಖಂಡ,ಈ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ನಾಗೇಶ್ ಮುನ್ನೋಳಕರ ಕಾಲಿಗೆ ಚಕ್ರ ಕಟ್ಟಕೊಂಡು ಓಡಾಡುತ್ತಿದ್ದಾರೆ.ಬಿಜೆಪಿ ಟಿಕೆಟ್ ಗಾಗಿ ಬೆಳಗಾವಿಯಿಂದ ಬೆಂಗಳೂರು, ಬೆಂಗಳೂರಿನಿಂದ ದೆಹಲಿ, ದೆಹಲಿಯಿಂದ ನಾಗಪೂರದವರೆಗೆ ಪ್ರಯಾಣ ಮಾಡಿ ಬಿಜೆಪಿಯ ಹಿರಿಯ ನಾಯಕರನ್ನು ಭೇಟಿ ಮಾಡಿದ್ದಾರೆ.
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಜೊತೆ ರಾಜ್ಯ ಬಿಜೆಪಿ ಅಧ್ತಕ್ಷ ನಳೀನಕುಮಾರ್ ಕಟೀಲ್,ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರನ್ನು ಭೇಟಿಯಾಗಿ ಈ ಬಾರಿ ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಮರಾಠಾ ಸಮುದಾಯದ ನಾಯಕನಿಗೆ ಟಿಕೆಟ್ ಕೊಡಬೇಕೆಂದು ಮನವಿ ಮಾಡಿಕೊಂಡಿರುವ ನಾಗೇಶ್ ಮನ್ನೋಳಕರ್ ದೆಹಲಿಯಲ್ಲಿ ಬಿಜೆಪಿಯ ಹಿರಿಯ ನಾಯಕ ಸಂತೋಷ್ ಜೀ ಅವರನ್ನು ಭೇಟಿ ಮಾಡಿ ಟಿಕೆಟ್ ಗಾಗಿ ಭರ್ಜರಿ ಲಾಭಿ ನಡೆಸಿದ್ದಾರೆ.
ಬೆಂಗಳೂರು ದೆಹಲಿಯಲ್ಲಿ ಬಿಜೆಪಿ ನಾಯಕರನ್ನು ಭೇಟಿ ಮಾಡಿದ ಬಳಿಕ ನಾಗಪೂರಕ್ಕೆ ತೆರಳಿದ ನಾಗೇಶ್ ಮನ್ನೋಳಕರ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಬಿಜೆಪಿ ಪಾರ್ಲಿಮೇಂಟ್ರಿ ಬೋರ್ಡಿನ ಸದಸ್ಯರಾದ ದೇವೇಂದ್ರ ಫಡ್ನವೀಸ್ ಅವರನ್ನು ರಮೇಶ್ ಜಾರಕಿಹೊಳಿ ಅವರ ಸಮ್ಮುಖದಲ್ಲಿ ಭೇಟಿ ಮಾಡಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮರಾಠಾ ಸಮುದಾಯದ ಮತಗಳು ಹೆಚ್ಚಿದ್ದು ಈ ಕ್ಷೇತ್ರದಲ್ಲಿ ಮರಾಠಾ ಸಮುದಾಯವೇ ನಿರ್ಣಾಯಕವಾಗಿದ್ದು ಈ ಬಾರಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಟಿಕೆಟ್ ಮರಾಠಾ ಸಮುದಾಯಕ್ಕೆ ಕೊಡಬೇಕೆಂದು ವಿನಂತಿಸಿದ್ದಾರೆ ಎಂದು ತಿಳಿದು ಬಂದಿದೆ.
ಬಿಜೆಪಿ ಮುಖಂಡ ಕಿರಣ ಜಾಧವ ಅವರು ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿಂಡಲಗಾ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿರುವ ನಾಗೇಶ್ ಮನ್ನೋಳಕರ ಹಲವಾರು ದಶಕಗಳಿಂದ ಹಿಂಡಲಗಾ ಗ್ರಾಮದ ಮನ್ನೋಳಕರ ಕುಟುಂಬ ಬಿಜೆಪಿಯಲ್ಲಿ ಸಕ್ರೀಯವಾಗಿ ಸೇವೆ ಸಲ್ಲಿಸುತ್ತ ಬಂದಿದೆ.