ಬೆಳಗಾವಿ:
ಮಕ್ಕಳ ಕಲ್ಲೇಟಿಗೆ ಆಯತಪ್ಪಿ ಬಾವಿಗೆ ಬಿದ್ದ ಬೀದಿ ನಾಯಿಯನ್ನು ಸತತ ಮೂರು ಗಂಟೆಗಳ ಕಾಲ ಕಾರ್ಯಾಚರಣೆ ಮೂಲಕ ರಕ್ಷಣೆ ಮಾಡಲಾಗಿದೆ.
ಎಸ್‌ಡಿಆರ್‌ಎಫ್ ಸಿಬ್ಬಂದಿ ಬಾವಿಗೆ ಬಿದ್ದ ನಾಯಿಯನ್ನು ಹೊರತೆಗೆದಿದ್ದಾರೆ.
ಬೆಳಗಾವಿಯ ಕಚೇರಿ ಗಲ್ಲಿಯಲ್ಲಿ ಈ ಘಟನೆ ನಡೆದಿದೆ. ಎಸ್‌ಡಿಆರ್‌ಎಫ್ ಆಪರೇಷನ್ ಡಾಗ್ ಕಾರ್ಯಾಚರಣೆ ಯಶಸ್ವಿಯಾಗಿಷೆ.
ರಕ್ಷಣಾ ಕಾರ್ಯಾಚರಣೆ ವೇಳೆ ನಾಯಿ ಕಚ್ಚಿದರೂ ಛಲಬಿಡದೇ ರಕ್ಷಣೆ ಮಾಡಲಾಗಿದೆ. ಬೀದಿನಾಯಿ ರಕ್ಷಣಾ ಕಾರ್ಯಾಚರಣೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸೊಂಟಕ್ಕೆ ಹಗ್ಗ ಕಟ್ಟಿಕೊಂಡು ಬಾವಿಗೀಳಿದ ಎಸ್‌ಡಿಆರ್‌ಎಫ್ ಸಿಬ್ಬಂದಿ ವಿಠ್ಠಲ್ ಜೇಟ್ಲಿ ಬೀದಿನಾಯಿ ರಕ್ಷಿಸಿದ್ದಾರೆ. ಎಸ್‌ಡಿಆರ್‌ಎಫ್ ಸಿಬ್ಬಂದಿ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ