ಬೆಳಗಾವಿ: ಪ್ರಪ್ರಥಮ ಕನ್ನಡದ ಮೇಯರ್ ಹಿರಿಯ ಕನ್ನಡಪರ ಹೋರಾಟಗಾರರು,ಬೆಳಗಾವಿಯ ಕನ್ನಡದ ಹೋರಾಟಕ್ಕೆ ಮಾರ್ಗದರ್ಶಕರೂ ಆಗಿದ್ದ, ಮಾಜಿ ಮಹಾಪೌರ, ಸಿದ್ದನಗೌಡ ಪಾಟೀಲ ನಿಧನಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾದ್ಯಕ್ಷ ಟ.ಎ ನಾರಾಯಣಗೌಡರು ಶೋಕ ಸಂತಾಪ ವ್ಯಕ್ತಪಡಿಸಿದ್ದಾರೆ. ಹಲವಾರು ದಶಕಗಳಿಂದ ಗಡಿಭಾಗದಲ್ಲಿ ಮರಾಠಿ ಪ್ರಾಬಲ್ಯದ ಮದ್ಯೆಯೂ ಸಿದ್ಧನಗೌಡರು ಕನ್ನಡದ ಪರವಾಗಿ ಹೋರಾಟ ಮಾಡಿ,ಗಡಿಯಲ್ಲಿ ಕನ್ನಡವನ್ನು ಗಟ್ಟಿಗೊಳಿಸಿದ ಮಹಾನ್ ಹೋರಾಟಗಾರರು ಸಿದ್ಧನಗೌಡ ಪಾಟೀಲ ಅವರ ಅಗಲಿಕೆಯಿಂದ ಹೋರಾಟ ಧ್ವನಿ ಕಳೆದುಕೊಂಡಂತಾಗಿದೆ.ಎಂದು ಟಿ.ಎ ನಾರಾಯಣಗೌಡರು ಶೋಕ …
Read More »ಶೇ 44.25 ರಷ್ಟು ಪಿಯುಸಿ ಫಲಿತಾಂಶ 28 ನೇಯ ಸ್ಥಾನಕ್ಕೆ ಕುಸಿದ ಬೆಳಗಾವಿ
ಬೆಳಗಾವಿ- ಕಳೆದ ವರ್ಷ ಶೇ 62.,02 ಫಲಿತಾಂಶ ಗಿಟ್ಟಿಸಿಕೊಂಡು ರಾಜ್ಯದಲ್ಲಿಯೇ 16 ನೇಯ ಸ್ಥಾನ ಪಡೆದಿದ್ದ ಬೆಳಗಾವಿ ಜಿಲ…
ಸಂವಿಧಾನ ಶಿಲ್ಪಿಯ ಮೂರ್ತಿ ಉದ್ಘಾಟನೆಗೆ ಸಿಎಂ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನ ಶಿಲ್ಪಿ,ಭಾರತ ರತ್ನ,ಮಹಾ ಮಾನವತಾ ವಾದಿ,ಡಾ…
ಬೆಳಗಾವಿ bel- track ಯೋಜನೆಯ ಅನುಷ್ಠಾನಕ್ಕೆ ಎರಡು ಕೋಟಿ ಮಂಜೂರು
ಬೆಳಗಾವಿ- ಬೆಳಗಾವಿಯ ಟ್ರಾಫಿಕ್ ವ್ಯೆವಸ್ಥೆಯನ್ನು ಸುಧಾರಿಸಲು ಸರ್ಕಾರ ಹಸಿರು ನಿಶಾನೆ ತೋರಿಸಿ ನಗರದಲ್ಲಿ ಬೆಲ್ ಟ್ರ್ಯಾಕ…
ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…
ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮ…
ಜಿಲ್ಲೆಯ ಎರಡು ಕಡೆ SSLC ಹಿಂದಿ ಪ್ರಶ್ನೆ ಪತ್ರಿಕೆ ಸೋರಿಕೆ
ಬೆಳಗಾವಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಮತ್ತು ಗೋಕಾಕ ತಾಲ್ಲೂಕಿನ ಮೂಡಲಗಿಯಲ್ಲಿ SSLC ಪರೀಕ್ಷೆಯ ಹಿ…
9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ
‘ಓಡಿಸ್ಸಿ -17’ ಅದ್ದೂರಿ ಸಮಾರೋಪ ಬೆಳಗಾವಿ- 9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ ನಗರದ ಜೈನ ಸಮೂಹ ಸಂ…
ತಂದೆಯ ದೇಹದಾನ ಮಾಡಿದ ಶಾಲಿನಿ ರಜನೀಶ್..
ಬೆಳಗಾವಿ- ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರ ತಂದೆ ನಿವೃತ್ತ IAS ಅಧಿಕಾರಿಯಾಗಿದ್ದ ಪಿ…
ಬೆಳಗಾವಿ ಕೆಎಲ್ಇ ಆಸ್ಪತ್ರೆಯಲ್ಲಿ ಹೃದಯ ಕಸಿ ಮಾಡುವ ಚಿಕಿತ್ಸೆ…..
ಬೆಳಗಾವಿ- ಬೆಳಗಾವಿಯ ಕೆಎಲ್ಇ ಆಸ್ಪತ್ರೆ ದಿನದಿಂದ ದಿನಕ್ಕೆ ಹೈಟೆಕ್ ಆಗುತ್ತ ಹೊರಟಿದೆ ಅನೇಕ ಅತ್ಯಾಧುನಿಕ ವೈದ್ಯ…
ಉತ್ತರ ವಲಯದ ವ್ಯಾಪ್ತಿಯ ಜಿಲ್ಲೆಗಳಲ್ಲಿ ೧೧ ಹೊಸ ಪೋಲೀಸ್ ಠಾಣೆಗಳ ಮಂಜೂರು
ಬೆಳಗಾವಿ-ರಾಜ್ಯದಲ್ಲಿ ಕಾನೂನು ಸುವ್ಯೆವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ತರ ವಲಯದ ಜಿಲ್ಲೆಗಳಾದ ಬೆಳಗಾ…
ಏಣಗಿ ಬಾಳಪ್ಪನವರ ಮನೆಗೆ ಬಂದ ಡಾಕ್ಟರೇಟ್…!!
ಬೆಳಗಾವಿ- ಹಿರಿಯ ರಂಗಭೂಮಿ ಕಲಾವಿಧ , ಚಿತ್ರನಟ, ನಾಟಕ ರಚಣೆಕಾರ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಡಾಕ್ಟರೇಟ್ ಪ್ರಧಾನ ಮಾ…
LOCAL NEWS
ಸರ್ವ ಸಂಕಷ್ಟಗಳಿಗೆ ಇಲ್ಲಿದೆ ಪರಿಹಾರ- ಸಂಪರ್ಕ ಮಾಡಿ
ಶ್ರೀ ಗುರು ರಾಘವೇಂದ್ರ ಸ್ವಾಮಿಗಳನ್ನು ಭಕ್ತರು ರಾಯರು, ಗುರುರಾಯರು, ಗುರುರಾಜರು ಎಂದು ಭಕ್ತಿಯಿಂದ ಕರೆಯುತ್ತಾರೆ. ಇವರ ಮೂಲ ಬೃಂದಾವನವು (ಸಶರೀರ) ತುಂಗಭದ್ರಾ ನದಿ ತಟದಲ್ಲಿರುವ ಮಂತ್ರಾಲಯದಲ್ಲಿದೆ. ಇಲ್ಲಿಗೆ ನಿತ್ಯವು ಸಾವಿರಾರು ಭಕ್ತರು ಭೇಟಿ ಕೊಡುತ್ತಾರೆ. ಪ್ರತಿ ವರ್ಷ ಶ್ರಾವಣ ಕೃಷ್ಣ ಪಕ್ಷ ಪಾಡ್ಯದಿಂದ ಶ್ರಾವಣ ಕೃಷ್ಣ ಪಕ್ಷ ತದಗಿವರೆಗೂ ಭವ್ಯ ಆರಾಧನೆ ನಡೆಯುತ್ತದೆ. ಗುರು ರಾಘವೇಂದ್ರನನ್ನು ನೆನೆಯುತ್ತಾ ಈ ದಿನದ ರಾಶಿ ಭವಿಷ್ಯವನ್ನು ತಿಳಿಯೋಣ ನಿಮ್ಮ ಸರ್ವ ಸಂಕಷ್ಟಗಳಿಗೆ ಪರಿಹಾರವನ್ನು …
Read More »ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ: ಗುರುವಾರ ಸಭೆ ನಿಗದಿ
ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ: ಗುರುವಾರ ಸಭೆ ನಿಗದಿ ————————————————————- ಸಮಾಜದ ಮುಖಂಡರ ಜತೆ ಚರ್ಚಿಸಿ ನಿರ್ಧಾರ- ಸಚಿವ ರಮೇಶ್ ಜಾರಕಿಹೊಳಿ ಬೆಳಗಾವಿ,-ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪಿಸುವುದಕ್ಕೆ ಸಂಬಂಧಿಸಿದಂತೆ ಹಾಲುಮತ ಸಮಾಜದ ಮುಖಂಡರು ಹಾಗೂ ಪದಾಧಿಕಾರಿಗಳ ಸಭೆಯನ್ನು ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ಸಂಜೆ ಜಿಲ್ಲಾಧಿಕಾರಿಗಳು ಸೇರಿದಂತೆ ಹಿರಿಯ …
Read More »ಅಭಿಮಾನಿಗಳು ಗುರುತಿಸಿದ ಸ್ಥಳದಲ್ಲೇ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ- ಸಿಎಂ ಭರವಸೆ
ಬೆಂಗಳೂರು- ಬೆಳಗಾವಿ– ಪೀರನವಾಡಿಯ ರಾಯಣ್ಣನ ಮೂರ್ತಿ ವಿವಾದ ಈಗ ಮುಖ್ಯಮಂತ್ರಿಗಳ ಸಚಿವಾಲಯಕ್ಕೂ ತಲುಪಿದ್ದು ಅಭಿಮಾನಿಗಳು ಸೂಚಿಸಿರುವ ಸ್ಥಳದಲ್ಲೇ ರಾಯಣ್ಣನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗುವದು ಎಂದು ಮುಖ್ಯಂಂತ್ರಿ ಬಿ.ಎಸ್ ಯಡಿಯೂರಪ್ಪ ಭರವಸೆ ನೀಡಿದ್ದಾರೆ. ನಿರಜನಾನಂದ ಶ್ರೀಗಳ ನೇತ್ರತ್ವದಲ್ಲಿ ನಿಯೋಗವೊಂದು ಮುಖ್ಯಮಂತ್ರಿಗಳನ್ನು ಇಂದು ಗೃಹ ಕಚೇರಿಯಲ್ಲಿ ಭೇಟಿ ಮಾಡಿತು. ಬೆಳಗಾವಿ ಪಕ್ಕದ ಪೀರನವಾಡಿಯಲ್ಲಿ ಅಭಿಮಾನಿಗಳು ಗುರುತಿಸಿರುವ ಸ್ಥಳದಲ್ಲೇ ಮೂರ್ತಿ ಪ್ರತಿಷ್ಠಾಪನೆ ಮಾಡುವದಾಗಿ ಸಿಎಂ ಯಡಿಯೂರಪ್ಪ ನಿಯೋಗಕ್ಕೆ ಭರವಸೆ ನೀಡಿದ್ದಾರೆ ಪೀರನವಾಡಿ ಮೂರ್ತಿ …
Read More »ಲೇಡಿ ಸಿಂಗಮ್, ಡಿಸಿಪಿ ಸೀಮಾ ಲಾಟ್ಕರ್ ವರ್ಗಾವಣೆ
ಬೆಳಗಾವಿ- ಬೆಳಗಾವಿಯ ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಸೀಮಾ ಲಾಟ್ಕರ್ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಬೆಳಗಾವಿ ನಗರದಲ್ಲಿ ಹಲವಾರು ವರ್ಷಗಳಿಂದ ಕರ್ತವ್ಯ ನಿಭಾಯಿಸಿದ ಸೀಮಾ ಲಾಟ್ಕರ್ ಲೇಡಿ ಸಿಂಗಮ್ ಎಂದೇ ಪರಿಚಿತರಾಗಿದ್ದರು. ಅವರ ವರ್ಗಾವಣೆಯಿಂದ ತೆರವಾದ. ಸ್ಥಾನಕ್ಕೆ ಸರ್ಕಾರ ಇನ್ನೂ ಯಾರೊಬ್ಬರನ್ನು ನೇಮಿಸಿಲ್ಲ.
Read More »ಸಚಿವ ರಮೇಶ್ ಜಾರಕಿಹೊಳಿ ಸಂಧಾನ ಸಕ್ಸೆಸ್,ರಾಮದುರ್ಗ ಸಂತ್ರಸ್ತರ ಪ್ರತಿಭಟನೆ ವಾಪಸ್….!
ಬೆಳಗಾವಿ- ನೆರೆ ಪರಿಹಾರಕ್ಕಾಗಿ ಆಗ್ರಹಿಸಿ ನೆರೆ ಸಂತ್ರಸ್ತರು ಅಹೋರಾತ್ರಿ ಪ್ರತಿಭಟನೆ ನಡೆಸಿದ್ದರು.ಇಂದು ಸಚಿವ ರಮೇಶ್ ಜಾರಕಿಹೊಳಿ ಮನವೊಲಿಕೆ ಹಿನ್ನಲೆಯಲ್ಲಿ ರೈತರು ಪ್ರತಿಭಟನೆ ವಾಪಸ್ ಪಡೆದುಕೊಂಡಿದ್ದು ಜಾರಕಿಹೊಳಿ ಸಂಧಾನ ಸಕ್ಸೇಸ್ ಆಗಿದೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ತಹಶಿಲ್ದಾರ ಕಚೇರಿ ಮುಂದೆ ನಡೆಯುತ್ತಿದ್ದ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಇಂದು ಭೇಟಿ ನೀಡಿದ ಸಚಿವ ರಮೇಶ್ ಜಾರಕಿಹೊಳಿ,ಸಿಎಂ ಸೂಚನೆ ಹಿನ್ನಲೆ ಪ್ರತಿಭಟನಾ ಸ್ಥಳಕ್ಕೆ ಬಂದು ಸಮಸ್ಯೆ ಆಲಿಸುತ್ತಿದ್ದೇನೆ.ಸಿಎಂ ಭೇಟಿಯಾಗಿ ಪರಿಹಾರಕ್ಕೆ ಮನವಿ ಮಾಡಿ ನೆರೆ …
Read More »ಬೆಳಗಾವಿ ರಾಯಣ್ಣನ ಮೂರ್ತಿ ವಿವಾದ,ಹೊಸ ಬಾಂಬ್ ಸಿಡಿಸಿದ ಹೆಚ್ ವಿಶ್ವನಾಥ
ಬೆಳಗಾವಿಯ ಸುವರ್ಣ ವಿಧಾನಸೌಧದ ಎದುರು ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ಮಾಡಿ ಬೆಳಗಾವಿ-ವೀರ ಸಂಗೊಳ್ಳಿ ರಾಯಣ್ಣನ ಕ್ರಾಂತಿಕಾರಿ ಹೋರಾಟ,ಮತ್ತು ಅವರ ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದ್ದು,ಕ್ರಾಂತಿ ಪುರುಷನ ಪ್ರತಿಮೆಯನ್ನು ಬೆಳಗಾವಿಯ ಸುವರ್ಣ ವಿಧಾನಸೌಧದ ಎದುರು ಪ್ರತಿಷ್ಠಾಪನೆ ಮಾಡಬೇಕೆಂದು ಬಿಜೆಪಿ ವಿಧಾನ ಪರಿಷತ್ತ ಸದಸ್ಯ ಹೆಚ್ ವಿಶ್ವನಾಥ ಒತ್ತಾಯಿಸಿದ್ದಾರೆ. ಬೆಂಗಳೂರಿನ ವಿಧಾನಸೌಧದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು ಸಂಗೊಳ್ಳಿ ರಾಯಣ್ಣ,ವೀರ,ಶೂರ ಅವರ ತ್ಯಾಗ ಮತ್ತು ಬಲಿದಾನದಿಂದಾಗಿ ನಮಗೆ ಸ್ವಾತಂತ್ರ್ಯ ಸಿಕಿದೆ,ರಾಯಣ್ಣನ ಹಾಗೆ ಟಿಪ್ಪು …
Read More »ಬೆಳಗಾವಿಯ ಪ್ರಥಮ ಕನ್ನಡದ ಮಹಾಪೌರ ಸಿದ್ಧನಗೌಡ ಪಾಟೀಲ ಇನ್ನಿಲ್ಲ.
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆ ಪ್ರಪ್ರಥಮ ಕನ್ನಡದ ಮೇಯರ್ ಸಿದ್ಧನಗೌಡ ಪಾಟೀಲ ಇಂದು ನಿಧನರಾಗಿದ್ದಾರೆ. ಬೆಳಗಾವಿಯ ಹಿರಿಯ ಕನ್ನಡಪರ ಹೋರಾಟಗಾರರು ಆಗಿದ್ದ ಸಿದ್ಧನಗೌಡ ಪಾಟೀಲರು ಇಂದು ಬೆಳಿಗ್ಗೆ ನಿಧನರಾಗಿದ್ದು ಪ್ರಥಮ ಕನ್ನಡದ ಮೇಯರ್ ಆಗುವ ಮೂಲಕ ಸಿದ್ಧನಗೌಡ ಪಾಟೀಲರು ಬೆಳಗಾವಿ ಪಾಲಿಕೆಯಲ್ಲಿ ಕನ್ನಡದ ಪತಾಕೆ ಹಾರಿಸಿದ್ದರು
Read More »ನಾಳೆ ಬೆಳಗಾವಿಗೆ ಮುತ್ತಿಗೆ ಹಾಕಲಿರುವ ಸಾವಿರಾರು ರಾಯಣ್ಣನ ಅಭಿಮಾನಿಗಳು…..!
ಬೆಳಗಾವಿ- ಪೀರನವಾಡಿಯಲ್ಲಿ ಕ್ರಾಂತಿವೀರ ,ಶೂರ ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ಮಾಡುವ ವಿಷಯವನ್ನು ಬೆಳಗಾವಿ ಜಿಲ್ಲಾಡಳಿತ ತಿಳಿದುಕೊಂಡಷ್ಟು ಹಗುರವಾಗಿಲ್ಲ,ಯಾಕಂದ್ರೆ ದಿನಕಳೆದಂತೆ ಈ ಸಮಸ್ಯೆ ಜಟಿಲವಾಗುತ್ತಿದ್ದು ನಾಳೆ ರಾಜ್ಯದ ಮೂಲೆ ಮೂಲೆಗಳಿಂದ ಸಾವಿರಾರು ಅಭಿಮಾನಿಗಳು ಬೆಳಗಾವಿಗೆ ಮುತ್ತಿಗೆ ಹಾಕಲಿದ್ದಾರೆ. ರಾಜ್ಯದ ಎಲ್ಲ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಬೆಳಗಾವಿಗೆ ಬರುತ್ತಿರುವ ರಾಯಣ್ಣನ ಅಭಿಮಾನಿಗಳು ಬೆಳಗಾವಿಯ ಸುವರ್ಣ ವಿಧಾನಸೌಧ ದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪಾದಯಾತ್ರೆ ನಡೆಸಿ ಪೀರನವಾಡಿಯಲ್ಲಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ಮಾಡುವಂತೆ ಆಗ್ರಹ …
Read More »ಗಡಿಯಲ್ಲಿ ಮತ್ತೆ ಶಿವಸೇನೆಯ ಪುಂಡಾಟಿಕೆ,
ಬೆಳಗಾವಿ:ಕಾಲು ಕೆದರಿ ಜಗಳ ತೆಗೆಯೋದು ಶಿವಸೇನೆಯ ಹುಟ್ಟುಗುಣ,ಮನಗುತ್ತಿಯ ಹಿರಿಯರು ಕೂಡಿಕೊಂಡು ಶಿವಾಜಿ ಮೂರ್ತಿಯ ವಿವಾದವನ್ನು ಅತ್ಯಂತ ಸೌಹಾರ್ದಯುತವಾಗಿ ಬಗೆಹರಿಸಿಕೊಂಡರೂ ಶಿವಸೇನೆಗೆ ಇದನ್ನು ಸಹಿಸಲು ಸಾದ್ಯವಾಗುತ್ತಿಲ್ಲ,ಕೊಲ್ಹಾಪುರ ಶಿವಸೇನೆಯ ಪ್ರಮುಖರು ಇಂದು ಕರ್ನಾಟಕದ ಗಡಿಯೊಳಗೆ ನುಗ್ಗಿ ಮತ್ತೆ ಕ್ಯಾತೆ ತೆಗೆದು,ತೆರವು ಗೊಳಿಸಿದ ಸ್ಥಳದಲ್ಲೇ ಶಿವಾಜಿ ಮೂರ್ತಿ ಮುರು ಪ್ರತಿಷ್ಠಾಪನೆ ಮಾಡಬೇಕೆಂದು ಪುಂಡಾಟಿಕೆ ಪ್ರದರ್ಶಿಸಿದ್ದಾರೆ ಇತ್ತೀಚಿಗೆ ರಾಜ್ಯಾದ್ಯಂತ ಗಮನ ಸೆಳೆದು, ತಣ್ಣಗಾಗಿದ್ದ ಮನಗುತ್ತಿ ಗ್ರಾಮದಲ್ಲಿನ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ವಿಚಾರ ಗಡಿಯಲ್ಲಿ ಮತ್ತೆ …
Read More »ಮಲಪ್ರಭಾ ಒತ್ತುವರಿ,ಆದಷ್ಟು ಬೇಗನೆ ಸರ್ವೇ- ರಮೇಶ್ ಜಾರಕಿಹೊಳಿ
ಬೆಳಗಾವಿ- ಮಲಪ್ರಭಾ ನದಿ ಒತ್ತುವರಿ ಆಗಿದ್ದು ಆದಷ್ಟು ಬೇಗ ಸರ್ವೆ ಮಾಡಲಾಗುವುದು ಎಂದು ಬೆಳಗಾವಿಯಲ್ಲಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಬೆಳಗಾವಿ ಮತ್ತು ಆಲಮಟ್ಟಿಯಲ್ಲಿ ಸಿಎಂ ಸ್ಥಳೀಯ ಜನಪ್ರತಿನಿಧಿ ಅಭಿಪ್ರಾಯ ಸಂಗ್ರಹ ಮಾಡಿದ್ದಾರೆ, ಬೆಂಗಳೂರಿಗೆ ಹೋಗಿ ಮತ್ತೊಮ್ಮೆ ಸಭೆ ಮಾಡಿ ಜಿಲ್ಲಾವಾರು ಪರಿಹಾರ ನೀಡಲು ತೀರ್ಮಾನ ಕೈಗೊಳ್ಳುತ್ತಾರೆ ಎಂದು ರಮೇಶ್ ಜಾರಕಿಹೊಳಿ ಹೇಳಿದರು. ಮಳೆಯಿಂದಾಗಿ ಹಾನಿಯಾಗಿದೆ ಪ್ರವಾಹದಿಂದ …
Read More »ನೇಸಲ್ ಕೆನೂಲಾ ಆಕ್ಸಿಜನ್ ಉಪಕರಣ ಬಿಮ್ಸ್ ಗೆ ಸಮರ್ಪಿಸಿದ ಸಿಎಂ ಯಡಿಯೂರಪ್ಪ
ಬೆಳಗಾವಿ-: ಕೋವಿಡ್-೧೯ ಸೋಂಕಿತರಿಗೆ ವೆಂಟಿಲೇಟರ್ ಬದಲಾಗಿ ಸುಲಭ ಚಿಕಿತ್ಸೆ ನೀಡಬಹುದಾದ ನಾಲ್ಕು ಹೈ ಫ್ಲೋ ನೇಸಲ್ ಕೆನೂಲಾ ಆಕ್ಸಿಜನ್ ಉಪಕರಣಗಳನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಬಿಮ್ಸ್ ಆಸ್ಪತ್ರೆಗೆ ಸಮರ್ಪಿಸಿದರು. ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ್ ಪಾಟೀಲರು ಕೊಡಮಾಡಿದ ಈ ಉಪಕರಣಗಳನ್ನು ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ನಡೆದ ಜನಪ್ರತಿನಿಧಿಗಳ ಸಭೆಯ ಬಳಿಕ ಈ ಉಪಕರಣಗಳನ್ನು ಮುಖ್ಯಮಂತ್ರಿಗಳು ಆಸ್ಪತ್ರೆಗೆ ನೀಡಿದರು. ರಾಜ್ಯದಲ್ಲಿ ಮೊದಲ ಬಾರಿ ಶಾಸಕ ಪಾಟೀಲ ಅವರು ನೀಡಿದ್ದಾರೆ. …
Read More »ಅತಿವೃಷ್ಟಿ: ಹೆಚ್ಚಿನ ಪರಿಹಾರ ಕೋರಲು ಮುಂದಿನ ವಾರ ದೆಹಲಿಗೆ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
– ಬೆಳಗಾವಿ, -: ಶೀಘ್ರ ಎಲ್ಲ ಶಾಸಕರ ಸಭೆ ಕರೆದು ಅತಿವೃಷ್ಟಿಯಿಂದ ಆಗಿರುವ ಹಾನಿಗೆ ಸಮರ್ಪಕ ಪರಿಹಾರ ನೀಡಲು ಯೋಜನೆ ರೂಪಿಸಲಾಗುವುದು. ಎಲ್ಲ ಮಾಹಿತಿಯನ್ನು ಕೇಂದ್ರ ಸರ್ಕಾರಕ್ಕೆ ಕಳಿಸಲಾಗುವುದು. ಮುಂದಿನ ವಾರ ದೆಹಲಿಗೆ ಹೋಗಿ ಹೆಚ್ವಿನ ಪರಿಹಾರ ಬಿಡುಗಡೆಗೆ ಮನವಿ ಮಾಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಅತಿವೃಷ್ಟಿಗೆ ಸಂಬಂಧಿಸಿದಂತೆ ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಂಗಳವಾರ(ಆ.25) ನಡೆದ ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳ ಜನಪ್ರತಿನಿಧಿಗಳ ಹಾಗೂ ಹಿರಿಯ ಅಧಿಕಾರಿಗಳ …
Read More »ಅತಿವೃಷ್ಟಿ: ಜಿಲ್ಲೆಯಲ್ಲಿ 972 ಕೋಟಿ ಹಾನಿ: ಸಚಿವ ಜಾರಕಿಹೊಳಿ
ಬೆಳಗಾವಿ,-ಇತ್ತೀಚೆಗೆ ಸುರಿದ ಮಳೆಯಿಂದಾಗಿ ಜಿಲ್ಲೆಯಲ್ಲಿ ಉಂಟಾಗಿರುವ ಬೆಳೆ, ಮನೆಗಳು ಹಾಗೂ ಮೂಲಸೌಕರ್ಯಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 972 ಕೋಟಿ ರೂಪಾಯಿ ಹಾನಿಯಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ತಿಳಿಸಿದರು. ಮುಖ್ಯಮಂತ್ರಿಗಳ ಭೇಟಿ ಹಿನ್ನೆಲೆಯಲ್ಲಿ ಹಿಡಕಲ್ ಜಲಾಶಯದ ಬಳಿಯ ಸಭಾಭವನದಲ್ಲಿ ಸೋಮವಾರ (ಆ.24) ನಡೆದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಪ್ರವಾಹ ಪರಿಸ್ಥಿತಿ ನಿಯಂತ್ರಣಕ್ಕೆ …
Read More »ಸಂಗೊಳ್ಳಿ ರಾಯಣ್ಣನ ಮೂರ್ತಿ ಸಮಸ್ಯೆ ಇತ್ಯರ್ಥಕ್ಕೆ,ಡಿಸಿ ಮುತವರ್ಜಿ ವಹಿಸಲಿ
ಬೆಳಗಾವಿ- ಪೀರನವಾಡಿಯಲ್ಲಿ ಕ್ರಾಂತಿವೀರ,ಶೂರ ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ವಿವಾದ ಬಗೆ ಹರಿಸಲು ಜಿಲ್ಲಾಧಿಕಾರಿಗಳು ಮದ್ಯಸ್ಥಿಕೆ ವಹಿಸಲು ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿದೆ. ಕರವೇ ಜಿಲ್ಲಾದ್ಯಕ್ಷ ದೀಪಕ ಗುಡಗನಟ್ಟಿ ನೇತ್ರತ್ವದಲ್ಲಿ ಜಿಲ್ಲಾಧಿಕಾರಿಗಳನ್ನು ಭೇಟಿಯಾದ ಕರವೇ ಪದಾಧಿಕಾರಿಗಳು, ಐತಿಹಾಸಿಕ ಬೆಳಗಾವಿ ಜಿಲ್ಲೆಯಲ್ಲಿ ಮೊಟ್ಟ ಮೊದಲ ಬಾರಿಗೆ ಬ್ರಿಟಿಷರ ವಿರುದ್ಧ ಹೋರಾಡಿ ಬ್ರಿಟಿಷ್ ಅಧಿಕಾರಿಗಳನ್ನೇ ನಡುಗಿಸಿದ ಕ್ರಾಂತಿವೀರ,ಶೂರ,ಸಂಗೊಳ್ಳಿ ರಾಯಣ್ಣ ಮೂರ್ತಿಯನ್ನು ಪೀರನವಾಡಿಯ ಮುಖ್ಯ ಸರ್ಕಲ್ ನಲ್ಲಿ ಪ್ರತಿಷ್ಠಾಪನೆ ಮಾಡುವ ಕುರಿತು ರಾಯಣ್ಣನ ಅಭಿಮಾನಿಗಳು …
Read More »