Breaking News

LOCAL NEWS

ಬೆಳಗಾವಿ ಪೋಲೀಸ್ ಕಮಿಷ್ನರ್ ಕಚೇರಿಯಲ್ಲಿ ಹೋಮ್ ಮಿನಿಸ್ಟರ್ ಪರಮೇಶ್ವರ್…

ಸುಳ್ಳುಸುದ್ದಿ, ಸಾಮಾಜಿಕ ಜಾಲತಾಣಗಳ ಮೇಲೆ ನಿಗಾವಹಿಸಲು ಗೃಹಸಚಿವ ಪರಮೇಶ್ವರ್ ಸೂಚನೆ ಬೆಳಗಾವಿ: ಸಮಾಜದಲ್ಲಿ ಅಶಾಂತಿ ಮೂಡಿಸುವಂತಹ ಸುಳ್ಳುಸುದ್ದಿಗಳು, ಪ್ರಚೋದನಾಕಾರಿ ಹೇಳಿಕೆ ಅಥವಾ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಆಗಿರುವುದು ಕಂಡುಬಂದರೆ ತಕ್ಷಣವೇ ಕಾರ್ಯಪ್ರವೃತ್ತರಾಗಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಗೃಹಸಚಿವ ಜಿ.ಪರಮೇಶ್ವರ್ ಕಟ್ಟುನಿಟ್ಟಿನ ಸೂಚನೆ ನೀಡಿದರು. ನಗರದ ಪೊಲೀಸ್ ಆಯುಕ್ತಾಲಯಕ್ಕೆ ಸೋಮವಾರ(ನ.20) ಭೇಟಿ ನೀಡಿದ ಅವರು, ಸಾಮಾಜಿಕ ಜಾಲತಾಣ ನಿಗಾ ಘಟಕ, ನಿಯಂತ್ರಣ ಕೊಠಡಿಗಳನ್ನು ಖುದ್ದಾಗಿ ವೀಕ್ಷಿಸಿ ಸಲಹೆ-ಸೂಚನೆಗಳನ್ನು ನೀಡಿದರು. …

Read More »

ಟೀಂ ಇಂಡಿಯಾಗೆ ಶುಭ ಕೋರಿದ , ಬಾಲಚಂದ್ರ ಜಾರಕಿಹೊಳಿ

ಗೋಕಾಕ್- ಗುಜರಾತ್ ನ ಅಹ್ಮದಾಬಾದ್ ನಲ್ಲಿಂದು ನಡೆಯುವ ವಿಶ್ವಕಪ್ ಅಂತಿಮ‌ ಪಂದ್ಯದಲ್ಲಿ ಟೀಂ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಲಿದೆ ಎಂದು ಕ್ರಿಕೆಟ್ ಪ್ರೇಮಿಯೂ ಆಗಿರುವ ಶಾಸಕ, ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇಂದಿನ ಭಾನುವಾರದ ಹೈ ವೋಲ್ಟೇಜ್ ಪಂದ್ಯದಲ್ಲಿ ಟೀಂ ಇಂಡಿಯಾ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದ್ದು, ಆಡಿರುವ ಎಲ್ಲ ೧೦ ಪಂದ್ಯಗಳನ್ನು ಗೆದ್ದು ಅಜೇಯ ವಾಗಿರುವ ನಮ್ಮ ಟೀಂ ಇಂಡಿಯಾ ೧೩ನೇ ಆವೃತ್ತಿಯ ವಿಶ್ವಕಪ್ ಟ್ರೋಫಿ …

Read More »

ಚಲಿಸುತ್ತಿದ್ದ ಬಸ್ ಗೆ ಆಕಸ್ಮಿಕ ಬೆಂಕಿ: ಹೊತ್ತಿ ಉರಿಸ ಬಸ್..

ಬೆಳಗಾವಿ: ಆಕಸ್ಮಿಕ ಬೆಂಕಿ ತಗುಲಿ ನಡು ರಸ್ತೆಯಲ್ಲೇ ಸಾರಿಗೆ ಬಸ್ ಹೊತ್ತಿ ಉರಿದಿರುವ ಘಟನೆ ಬೆಳಗಾವಿ ಜಿಲ್ಲೆಯಹು ಕ್ಕೇರಿ ತಾಲೂಕಿನ ನರಸಿಂಗಪೂರ‌ ಬಳಿ ಘಟನೆ ನಡೆದಿದೆ. ಬಸ್ ಗೆ ಬೆಂಕಿ ತಗಲುತ್ತಿದ್ದಂತೆಯೇ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಸುಮಾರು 20 ಕ್ಕೂ ಹೆಚ್ಚು ಪ್ರಯಾಣಿಕರು ಗಾಬರಿಯಿಂದ ಕೆಳಗಿಳಿದಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಪಾಯ ಸಂಭವಿಸಿಲ್ಲ. ಯಮಕನಮರಡಿ ಪೋಲಿಸ್ ಠಾಣೆ‌ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ಪೋಲಿಸರು ದೌಡಾಯಿಸಿದ್ದಾರೆ

Read More »

ಬೆಳಗಾವಿಯಲ್ಲಿ ಏಕಾಏಕಿ ಸಿಬಿಐ ದಾಳಿ….!!

ಬೆಳಗಾವಿ ದಂಡು ಮಂಡಳಿ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮದ ವಾಸನೆ; ಸಿಬಿಐ ಅಧಿಕಾರಿಗಳ ಏಕಾಏಕಿ ದಾಳಿ..! ಬೆಳಗಾವಿ: ಬೆಳಗಾವಿ ದಂಡು ಮಂಡಳಿಯ ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮದ ವಾಸನೆ ಆರೋಪ ಹಿನ್ನೆಲೆ ಕಂಟೋನ್ಮೆಂಟ್ ಬೋರ್ಡ್ ಕಚೇರಿ ಮೇಲೆ ಸಿಬಿಐ ಅಧಿಕಾರಿಗಳ ಏಕಾಏಕಿ ದಾಳಿ ನಡೆಸಿದ್ದಾರೆ. ಬೆಳಗಾವಿಯ ಕ್ಯಾಂಪ್ ಪ್ರದೇಶದಲ್ಲಿರುವ ದಂಡು ಮಂಡಳಿ ಕಚೇರಿಗೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದು ದಂಡು ಮಂಡಳಿ ಸಿಇಒ ಕೆ. ಆನಂದ ಸೇರಿ ಹಿರಿಯ ಅಧಿಕಾರಿಗಳ …

Read More »

ಬೆಳಗಾವಿಯಲ್ಲಿ ಹಾಲಿನ ವಾಹನ ಪಲ್ಟಿ ಇಬ್ಬರಿಗೆ ಗಾಯ

ಬೆಳಗಾವಿ- ಕಾಂಗ್ರೆಸ್ ರಸ್ತೆ ಮಿಲಿಟರಿ ‌ಮಹಾದೇವ ಎದುರಿಗೆ. ಹಾಲಿನ ವಾಹನ ತೀರ ಚಲಾವಣೆಯೇ ಅಪಘಾತಕ್ಕೆ ಕಾರಣ. ವಾಹನ ಖಾನಾಪೂರ ಮಾರ್ಗವಾಗಿ ತೆರಳುವಾಗ ಎದುರಿಗಿದ್ದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ವೇಗ ನಿಯಂತ್ರಣ ಸಾಧ್ಯವಾಗದೇ ರಸ್ತೆ ಮಧ್ಯ ಪಲ್ಟಿ ಆಗಿದೆ. ದ್ವಿಚಕ್ರ ವಾಹನದಲ್ಲಿದ್ದ ಮಹಿಳೆಗೆ ಹಾಗು ಮಗುವಿಗೆ ತೀವ್ರಗಾಯಗಳಾಗಿವೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ. ವಿಷಯ ತಿಳಿದ ಟ್ರಾಫಿಕ್ ಪೋಲಿಸ್ ರು ಸ್ಥಳಕ್ಕೆ ಆಗಮಿಸಿ ವಾಹನ ತೆರವುಗೊಳಿಸಿ ಸಂಚಾರಕ್ಕೆ …

Read More »

ಚಿಂದಿಚೋರನ ತಂದು,ಆ ಹುಲಿ ಈ ಹುಲಿ ಅನ್ನಬ್ಯಾಡ್ರಿ…!!

ಬೆಂಗಳೂರು- ಪತ್ರಕರ್ತರು ಏನ್ ಕೇಳಬೇಕೋ ಅದನ್ನ ಕೇಳಬೇಕು,ಯಾವುದೋ ಚಿಂದಿಚೋರನ ತಂದೂ ಆ ಹುಲಿ,ಈ ಹುಲಿ ಅನ್ನಬ್ಯಾಡ್ರಿ ನೀವ್ ಹಂಗ್ ಅಂದ್ರ ಜನ ತಿಳ್ಕೋತಾರ್ ನೀವೆಲ್ಲ ಯಾರ್ಯಾರ್ ಕಡೆದವರು ಅಂತ ಗೊತ್ತಿಲ್ಲ.ಅದಕ್ಕೆಲ್ಲ ನಾನು ಉತ್ತರ ಕೊಡೋದಿಲ್ಲ ಅಂತ ಬಸನಗೌಡ ಯತ್ನಾಳ್ ಮಾದ್ಯಮಗಳ ವಿರುದ್ಧ ಗರಂ ಆಗಿದ್ದಾರೆ. ಬೆಂಗಳೂರಿನಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು,ವಿಜಯೇಂದ್ರ ಅಧ್ಯಕ್ಷರಾದಬಳಿಕ ಯಡಿಯೂರಪ್ಪ ನಿಮ್ಮ ಜೊತೆ ಮಾತಾಡಿದ್ರಾ.? ಎಂದು ಮಾದ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು ಅರಿಗೆ ಬೇಕಾದಾಗ ಮಾತಾಡ್ತಾರೆ,ಯಾವಾಗ …

Read More »

ತೆಲಂಗಾಣದಲ್ಲಿ ರಾಜುಸೇಠ ಭರ್ಜರಿ ಪ್ರಚಾರ…!

ಬೆಳಗಾವಿ- ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ರಾಜು ಸೇಠ ಅವರು ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಭರ್ಜರಿ ಪ್ರಚಾರ ನಡೆಸಿದ್ದಾರೆ. ತೆಲಂಗಾಣದ ಭೊಧಾನ್ ವಿಧಾನಸಭಾ ಕ್ಷೇತ್ರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಂಚರಿಸಿ ಸ್ಥಳೀಯ ನಾಯಕರ ಜೊತೆ ಚರ್ಚಿಸಿ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳಿಂದ ಜನರಿಗೆ ಆಗಿರುವ ಲಾಭಗಳ ಬಗ್ಗೆ ತಿಳಿಸಿ ರಾಜು ಸೇಠ ಕಾಂಗ್ರೆಸ್ ಪರವಾಗಿ ಮತಯಾಚಿಸಿದರು. ಮೂರು ದಿನಗಳ ಕಾಲ ತೆಲಂಗಾಣದಲ್ಲಿ …

Read More »

ಬೆಳಗಾವಿ ಅಧಿವೇಶನದಲ್ಲಿ ವಿರೋಧಪಕ್ಷದ ನಾಯಕನ ವರಸೆ….

ಬೆಂಗಳೂರು: ಪದ್ಮನಾಭನಗರ ಬಿಜೆಪಿ ಶಾಸಕ ಆರ್ ಅಶೋಕ್ ಅವರನ್ನು ವಿಪಕ್ಷ ನಾಯಕನಾಗಿ ಆಯ್ಕೆ ಮಾಡಲಾಗಿದೆ.ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಇವರ ವರಸೆ ಶುರುವಾಗಲಿದೆ.good ವಿಪಕ್ಷ ನಾಯಕನ ಆಯ್ಕೆ ವಿಚಾರವಾಗಿ ಪಕ್ಷದೊಳಗೆ ಅಸಮಾಧಾನ ಉಂಟಾಗಿರುವ ಹಿನ್ನೆಲೆಯಲ್ಲಿ ಇಂದು ಸಂಜೆ ನಡೆದ ಶಾಸಕಾಂಗ ಪಕ್ಷದ ಸಭೆಗೆ ವೀಕ್ಷಕರಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಶ್ಯಂತ್ ಕುಮಾರ್ ಗೌತಮ್ ಆಗಮಿಸಿದ್ದರು. ಶಾಸಕರ ಅಭಿಪ್ರಾಯಗಳನ್ನು ಆಲಿಸಿದ ವೀಕ್ಷಕರು ವಿರೋಧದ …

Read More »

ಪ್ರತಿ ಗ್ರಾಮ ಪಂಚಾಯಿತಿಯವರು ಟ್ಯಾಂಕರ್ ಖರೀಧಿ ಮಾಡಲೇಬೇಕು..

ಬರ ನಿರ್ವಹಣೆ: ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಸಭೆ ಬೆಳಗಾವಿ, -ಜಿಲ್ಲೆಯಲ್ಲಿ ಕುಡಿಯುವ ನೀರು ಸಮಸ್ಯೆ ಕಂಡುಬಂದ ತಕ್ಷಣವೇ ಟ್ಯಾಂಕರ್ ಮೂಲಕ ನೀರು ಪೂರೈಸಬೇಕು. ಕುಡಿಯುವ ನೀರು ಸಮಸ್ಯೆ ನಿವಾರಣೆಗೆ ಅನುಕೂಲವಾಗುವಂತೆ ಜಿಲ್ಲೆಯ ಪ್ರತಿಯೊಂದು ಪಂಚಾಯಿತಿಗಳು ಕೂಡಲೇ ಸ್ವಂತ ಟ್ಯಾಂಕರ್ ಖರೀದಿಸಲು ಕ್ರಮ ಕೈಗೊಳ್ಳಬೇಕು ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಸೂಚನೆ ನೀಡಿದರು. ಬರ ನಿರ್ವಹಣೆ ಕುರಿತು ಸುವರ್ಣ ವಿಧಾನಸೌಧದಲ್ಲಿ ಶುಕ್ರವಾರ(ನ.17) ನಡೆದ …

Read More »

ಪಾಲಿಕೆ ನೌಕರರ ನಾಯಕ, ಅರ್ಜುನ್ ದೇಮಟ್ಟಿ ಇನ್ನಿಲ್ಲ…

.ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ನೌಕರರ ಅಚ್ಚುಮೆಚ್ಚಿನ ನಾಯಕ ಅರ್ಜುನ್ ದೇಮಟ್ಟಿ ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಹಲವಾರು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಅವರ ನಿವಾಸದಲ್ಲಿ ನಿಧನರಾಗಿದ್ದಾರೆ.ಅರ್ಜುನ್ ದೇಮಟ್ಟಿ ಅವರು ಪಾಲಿಕೆಯ ನೌಕರರ ಸಂಘದ ಅಧ್ಯಕ್ಷರಾಗಿ ಹಲವಾರು ವರ್ಷಗಳ ಕಾಲ ಸೇವೆ ಮಾಡಿದ್ದರು.ಡಾ.ಬಾಬಾಸಾಹೇಬ ಅಂಬೇಡ್ಕರ್ ಉತ್ಸವ ಸಮೀತಿಯ ಅಧ್ಯಕ್ಷರಾಗಿ ಸೇವೆ ಮಾಡಿದ ಅವರು ಅಪಾರ ಜನಮೆಚ್ಚುಗೆ ಗಳಿಸಿದ್ದರು.

Read More »

ಅನ್ಯತಾ ಭಾವಿಸಬೇಡಿ, ನೋವಾಗಿದ್ದರೆ ವಿಷಾಧಿಸುತ್ತೇನೆ…

ಸಕಾರಾತ್ಮಕ ದೃಷ್ಟಿಕೋನದಿಂದ ಮಾತನಾಡಿದ್ದೇನೆ, ಅನ್ಯಥಾ ಭಾವಿಸಬೇಡಿ – ಸಚಿವ ಲಕ್ಷ್ಮೀ ಹೆಬ್ಬಾಳಕರ್ ಮನವಿ ಬೆಳಗಾವಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ನವೆಂಬರ್ 11ರಂದು ಬೆಳಗಾವಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಾನು ಆಡಿದ ಮಾತಿನಿಂದ ಬೆಳಗಾವಿಯ ಪತ್ರಕರ್ತ ಸಹೋದರರಿಗೆ ನೋವಾಗಿದ್ದರೆ ನಾನು ವಿಷಾಧಿಸುತ್ತೇನೆ. ಅಲ್ಲಿ ನಾನು ಸಕಾರಾತ್ಮಕ ದೃಷ್ಟಿಕೋನದಿಂದ ಮಾತನಾಡಿದ್ದೇನೆಯೇ ಹೊರತು ಬೇರೆ ಯಾವುದೇ ಉದ್ದೇಶದಿಂದಲ್ಲ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ಈ ಕುರಿತು …

Read More »

ಲಕ್ಷ್ಮೀ ಹೆಬ್ಬಾಳಕರ್ ವಿರುದ್ಧ ಎಐಸಿಸಿ,ಕೆಪಿಸಿಸಿ ಗೆ ದೂರು ನೀಡಲು,ಬೆಳಗಾವಿ ಪತ್ರಕರ್ತರ ನಿರ್ಧಾರ.

‌ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಬೆಳಗಾವಿ ಪತ್ರಕರ್ತರು ಅಪ್ರಭುದ್ಧರು ಎನ್ನುವ ಅರ್ಥದಲ್ಲಿ ನೀಡಿದ್ದ ಹೇಳಿಕೆಯನ್ನ ಖಂಡಿಸಿ ಇವತ್ತು ಕನ್ನಡ ಸಾಹಿತ್ಯ ಭವನದಲ್ಲಿ ಪತ್ರಕರ್ತರಿಂದ ಖಂಡನಾ ಸಭೆ ನಡೆಸಲಾಯಿತು. ಸಭೆಯಲ್ಲಿ 42 ಕ್ಕೂ ಅಧಿಕ ಹಿರಿಯ ಪತ್ರಕರ್ತರು ಭಾಗಿಯಾಗಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಹೇಳಿಕೆಯನ್ನ ತೀವ್ರವಾಗಿ ಖಂಡಿಸಲಾಯಿತು. ಸಚಿವೆ ಹೆಬ್ಬಾಳ್ಕರ ಅವರು ಇತ್ತೀಚೆಗೆ ಪತ್ರಕರ್ತರ ಜೊತೆ ನಡೆದುಕೊಳ್ಳುತ್ತಿರುವ ನಡುವಳಿಕೆ ಬಗ್ಗೆ ಹಿರಿಯ ಪತ್ರಕರ್ತರು …

Read More »

ಹತ್ತು ದಿನ ಬೆಳಗಾವಿ ಮಹಾನಗರದಲ್ಲಿ ರಾಜ ಕಳೆ..!!

ಬೆಳಗಾವಿ-ಡಿಸೆಂಬರ್ 4 ರಿಂದ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಹತ್ತು ದಿನಗಳ ಕಾಲ ಚಳಿಗಾಲದ ಅಧಿವೇಶನ ನಡೆಯಲಿದೆ.ಗಂಟು ಮೂಟೆ ಕಟ್ಟಿಕೊಂಡು ಸರ್ಕಾರ ಹತ್ತು ದಿನ ಬೆಳಗಾವಿಯಲ್ಲಿ ಠಿಖಾನಿ ಹೂಡಲಿದೆ. ಬೆಳಗಾವಿಯ ಸುವರ್ಣವಿಧಾನಸೌಧಕ್ಕೆ ಈಗ ರಾಜಕಳೆ,ಯಾಕಂದ್ರೆ ಅಧಿವೇಶನಕ್ಕೆ ಭರ್ಜರಿ ತಯಾರಿ ನಡೆದಿದೆ.ಅಧಿವೇಶನಕ್ಕೆ ಬರುವ ಗಣ್ಯರಿಗೆ ಅಧಿಕಾರಿಗಳಿಗೆ,ಬೆಂಗಳೂರಿನಿಂದ ಬರುವ ಪತ್ರಕರ್ತರಿಗೆ ಊಟ,ವಸತಿ,ವಾಹನ ಸೇರಿದಂತೆ ಎಲ್ಲ ರೀತಿಯ ಸವಲತ್ತುಗಳನ್ನು ಒದಗಿಸುವ ಕಾರ್ಯ ಭರದಿಂದ ಸಾಗಿದೆ.ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಪ್ರತಿದಿನ ತಮ್ಮ ಕಚೇರಿಯಲ್ಲಿ ಅಧಿಕಾರಿಗಳ ಸಭೆ …

Read More »

ಜಮೀನು ಕಳೆದುಕೊಂಡ ರೈತರಿಗೆ ಲಕ್ಷ್ಮೀ ಕೃಪೆ….!!

ಬೆಳಗಾವಿ-ಬೆಳಗಾವಿಯ ಹಲಗಾ ಬಳಿ ಕೊಳಚೆ ನೀರು ಸಂಸ್ಕರಣಾ ಘಟಕ ನಿರ್ಮಾಣಕ್ಕೆ ಜಮೀನು ನೀಡಿರುವ ರೈತರಿಗೆ ಪರಿಹಾರ ಸಿಕ್ಕಿಲ್ಲ.ಹೆಚ್ಚಿನ ಪರಿಹಾರಕ್ಕೆ ಕಳೆದ ಆರು ವರ್ಷಗಳಿಂದ ರೈತರು ಅಲೆದಾಡುತ್ತಿದ್ದು ಅವರಿಗೆ ಪರಿಹಾರ ಕೊಡಿಸಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಇಂದು ಡಿಸಿ ಕಚೇರಿಯಲ್ಲಿ ತುರ್ತು ಸಭೆ ನಡೆಸಿದರು. ಹಲಗಾ ಗ್ರಾಮದಲ್ಲಿ ಕೊಳಚೆ ನೀರು ಸಂಸ್ಕರಣಾ ಘಟಕ(STP ಪ್ಲಾಂಟ್) ನಿರ್ಮಾಣಕ್ಕೆ 2019ರಲ್ಲಿ ಕಾಮಗಾರಿ ಆರಂಭಿಸಲಾಗಿದೆ.ಬೆಳಗಾವಿ ನಗರದ ಅಮೃತ್ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗೆ2019ರಲ್ಲಿ ಭೂ ಸ್ವಾಧೀನ ಆಗಿತ್ತು,ಎಕರೆ …

Read More »

ಬೆಳಗಾವಿ ಮಂದಿಗೆ ದೀಪಾವಳಿ ಹಬ್ಬದ ಖುಷಾಲಿ. ಗುಡ್ ನ್ಯುಸ್……!!!

ಬೆಳಗಾವಿ: ಬೆಳಗಾವಿ ಸಂಸದೆ ಮಂಗಲಾ ಅಂಗಡಿ ಹಾಗೂ  ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಅತ್ಯಂತ ಕ್ರೀಯಾಶೀಲರಾಗಿದ್ದು ದೀಪಾವಳಿ ಹಬ್ಬದ ದಿನ ಬೆಳಗಾವಿ ಮಂದಿಗೆ ವಿಶೇಷ ಗೀಫ್ಟ್ ಕೊಟ್ಟಿದ್ದಾರೆ. ಬೆಳಗಾವಿಯಿಂದ ಬೆಂಗಳೂರಿಗೆ ವಂದೇ ಭಾರತ ರೈಲು ಮಂಜೂರು ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜಿಲ್ಲೆಯ ಜನರ ಬಹು ದಿನಗಳ ಬೇಡಿಕೆಯಾದ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲನ್ನು ಬೆಂಗಳೂರು- ಧಾರವಾಡದಿಂದ ಬೆಳಗಾವಿಯವರೆಗೆ ವಿಸ್ತರಣೆ ಮಾಡಿ ರೈಲ್ವೆ ಸಚಿವಾಲಯ ಆದೇಶ ನೀಡಿದೆ ಎಂದು ರಾಜ್ಯಸಭಾ ಸಂಸದ …

Read More »