ಬೆಳಗಾವಿ : ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ ಯುವಕನೋರ್ವನನ್ನು ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಖಾನಾಪುರ ತಾಲೂಕಿನ ಹಲಸಿ ಬೇಕವಾಡ ಗ್ರಾಮದ ನಡುವೆ ನಡೆದಿದೆ. ರವಿವಾರ ತಡರಾತ್ರಿ ಹಲಸಿ – ಬೇಕವಾಡ ರಸ್ತೆಯ ನರಸೇವಾಡಿ ಬೀಜ ಬಳಿ ತಡರಾತ್ರಿ 3 ಗಂಟೆ ಸುಮಾರಿಗೆ ನಡೆದ ಗುಂಡಿನದಾಳಿಯಲ್ಲಿ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಅಲ್ತಾಫ್ ಮಕಾನದಾರ್ (27) ಗುಂಡಿನ ದಾಳಿಯಲ್ಲಿ ಬಲಿಯಾಗಿದ್ದಾನೆ. ಗುಂಡಿನ ದಾಳಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಕೂಡಲೇ …
Read More »ಶೇ 44.25 ರಷ್ಟು ಪಿಯುಸಿ ಫಲಿತಾಂಶ 28 ನೇಯ ಸ್ಥಾನಕ್ಕೆ ಕುಸಿದ ಬೆಳಗಾವಿ
ಬೆಳಗಾವಿ- ಕಳೆದ ವರ್ಷ ಶೇ 62.,02 ಫಲಿತಾಂಶ ಗಿಟ್ಟಿಸಿಕೊಂಡು ರಾಜ್ಯದಲ್ಲಿಯೇ 16 ನೇಯ ಸ್ಥಾನ ಪಡೆದಿದ್ದ ಬೆಳಗಾವಿ ಜಿಲ…
ಸಂವಿಧಾನ ಶಿಲ್ಪಿಯ ಮೂರ್ತಿ ಉದ್ಘಾಟನೆಗೆ ಸಿಎಂ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನ ಶಿಲ್ಪಿ,ಭಾರತ ರತ್ನ,ಮಹಾ ಮಾನವತಾ ವಾದಿ,ಡಾ…
ಬೆಳಗಾವಿ bel- track ಯೋಜನೆಯ ಅನುಷ್ಠಾನಕ್ಕೆ ಎರಡು ಕೋಟಿ ಮಂಜೂರು
ಬೆಳಗಾವಿ- ಬೆಳಗಾವಿಯ ಟ್ರಾಫಿಕ್ ವ್ಯೆವಸ್ಥೆಯನ್ನು ಸುಧಾರಿಸಲು ಸರ್ಕಾರ ಹಸಿರು ನಿಶಾನೆ ತೋರಿಸಿ ನಗರದಲ್ಲಿ ಬೆಲ್ ಟ್ರ್ಯಾಕ…
ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…
ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮ…
ಜಿಲ್ಲೆಯ ಎರಡು ಕಡೆ SSLC ಹಿಂದಿ ಪ್ರಶ್ನೆ ಪತ್ರಿಕೆ ಸೋರಿಕೆ
ಬೆಳಗಾವಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಮತ್ತು ಗೋಕಾಕ ತಾಲ್ಲೂಕಿನ ಮೂಡಲಗಿಯಲ್ಲಿ SSLC ಪರೀಕ್ಷೆಯ ಹಿ…
9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ
‘ಓಡಿಸ್ಸಿ -17’ ಅದ್ದೂರಿ ಸಮಾರೋಪ ಬೆಳಗಾವಿ- 9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ ನಗರದ ಜೈನ ಸಮೂಹ ಸಂ…
ತಂದೆಯ ದೇಹದಾನ ಮಾಡಿದ ಶಾಲಿನಿ ರಜನೀಶ್..
ಬೆಳಗಾವಿ- ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರ ತಂದೆ ನಿವೃತ್ತ IAS ಅಧಿಕಾರಿಯಾಗಿದ್ದ ಪಿ…
ಬೆಳಗಾವಿ ಕೆಎಲ್ಇ ಆಸ್ಪತ್ರೆಯಲ್ಲಿ ಹೃದಯ ಕಸಿ ಮಾಡುವ ಚಿಕಿತ್ಸೆ…..
ಬೆಳಗಾವಿ- ಬೆಳಗಾವಿಯ ಕೆಎಲ್ಇ ಆಸ್ಪತ್ರೆ ದಿನದಿಂದ ದಿನಕ್ಕೆ ಹೈಟೆಕ್ ಆಗುತ್ತ ಹೊರಟಿದೆ ಅನೇಕ ಅತ್ಯಾಧುನಿಕ ವೈದ್ಯ…
ಉತ್ತರ ವಲಯದ ವ್ಯಾಪ್ತಿಯ ಜಿಲ್ಲೆಗಳಲ್ಲಿ ೧೧ ಹೊಸ ಪೋಲೀಸ್ ಠಾಣೆಗಳ ಮಂಜೂರು
ಬೆಳಗಾವಿ-ರಾಜ್ಯದಲ್ಲಿ ಕಾನೂನು ಸುವ್ಯೆವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ತರ ವಲಯದ ಜಿಲ್ಲೆಗಳಾದ ಬೆಳಗಾ…
ಏಣಗಿ ಬಾಳಪ್ಪನವರ ಮನೆಗೆ ಬಂದ ಡಾಕ್ಟರೇಟ್…!!
ಬೆಳಗಾವಿ- ಹಿರಿಯ ರಂಗಭೂಮಿ ಕಲಾವಿಧ , ಚಿತ್ರನಟ, ನಾಟಕ ರಚಣೆಕಾರ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಡಾಕ್ಟರೇಟ್ ಪ್ರಧಾನ ಮಾ…
LOCAL NEWS
ಮನವಿಪತ್ರದ ಸಹಿಗಳ ದುರ್ಬಳಕೆ, ಶಿವಪ್ರಿಯಾ ಸ್ಪಷ್ಟನೆ..
ಬೆಳಗಾವಿ, -ಇಲಾಖೆಯ ಸಿಬ್ಬಂದಿಗೆ ಕಿರುಕುಳ ನೀಡಲಾಗುತ್ತಿದೆ ಎಂಬ ಆರೋಪವು ಸತ್ಯಕ್ಕೆ ದೂರವಾಗಿದ್ದು, ದೂರುಪತ್ರವೊಂದಕ್ಕೆ ಬಳಸಲಾಗಿರುವ ಸಹಿಗಳು ಕೂಡ ಇದಕ್ಕೆ ಸಂಬಂಧಿಸಿರುವುದಿಲ್ಲ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಶಿವಪ್ರಿಯಾ ಕಡೇಚೂರ ಅವರು ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ದಿನಾಂಕ 5-11-2024 ರಂದು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸಭೆ ಆಯೋಜಿಸಲಾಗಿತ್ತು. ಆ ಸಂದರ್ಭದಲ್ಲಿ ಇಲಾಖೆಯ ವಸತಿನಿಲಯಗಳ ಮೆನು ಹಾಗೂ ಡಯಟ್ ಬದಲಾವಣೆಗೆ ಸಂಬಂಧಿಸಿದಂತೆ ಮಾನ್ಯ …
Read More »ಅಂಗನವಾಡಿ ಕಟ್ಟಡಗಳಿಗೆ 1.40 ಕೋಟಿ ರೂ ಅನುದಾನ….
ಗೋಕಾಕ- ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ೧.೪೦ ಕೋಟಿ ರೂಪಾಯಿಗಳು ಮಂಜೂರಾಗಿದ್ದು, ಕಟ್ಟಡ ಕಾಮಗಾರಿಗಳನ್ನು ಗುಣಮಟ್ಟದಿಂದ ಕೈಗೊಳ್ಳಲು ಈಗಾಗಲೇ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅರಭಾವಿ ಕ್ಷೇತ್ರದ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಕಳೆದ ಶುಕ್ರವಾರದಂದು ತಾಲ್ಲೂಕಿನ ಖಂಡ್ರಟ್ಟಿ ಗ್ರಾಮದಲ್ಲಿ ೨೦ ಲಕ್ಷ ರೂಪಾಯಿಗಳ ವೆಚ್ಚದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಅಂಗನವಾಡಿ ಕಟ್ಟಡಕ್ಕೆ ಗುದ್ದಲಿ ಪೂಜೆಯನ್ನು ನೆರವೇರಿಸಿ ಮಾತನಾಡಿದ ಅವರು, ಇದಕ್ಕಾಗಿ ನರೇಗಾ ಯೋಜನೆಯಡಿ ಅನುದಾನವನ್ನು ನೀಡಲಾಗಿದೆ …
Read More »ಬಾಲಚಂದ್ರ ಜಾರಕಿಹೊಳಿ ಆಧುನಿಕ ಕರ್ಣ….
ಕಪರಟ್ಟಿಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರಿಂದ ಶ್ರೀದೇವಿ ಮತ್ತು ಭರಮ ದೇವರ ದೇವಸ್ಥಾನಗಳ ಉದ್ಘಾಟನೆ ಈ ಜಗತ್ತು ನಿಂತಿರುವುದೇ ದೇವರಿಂದ* *ದೇವರ ನಾಮ- ಸ್ಮರಣೆ ಮಾಡಿದರೆ ಕಷ್ಟ- ಕಾರ್ಪಣ್ಯಗಳು ದೂರ- ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ-ನಮ್ಮ ಹೆತ್ತವರೇ ನಮಗೆ ನಿಜವಾದ ದೇವರು. ದೇವರ ಸ್ವರೂಪಿಯಾಗಿರುವ ತಂದೆ- ತಾಯಿಯವರಿಗೆ ಗೌರವ ನೀಡುವ ಮೂಲಕ ತಮ್ಮ ಜೀವನವನ್ನು ಸಾರ್ಥಕಗೊಳಿಸುವಂತೆ ಅರಭಾವಿ ಶಾಸಕ ಮತ್ತು ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ …
Read More »ಚನ್ನಮ್ಮಾಜಿಯ ಮೂರ್ತಿ ತೆರವು ವಿವಾದ, ಸಂಧಾನ ಸಫಲ
ಬೆಳಗಾವಿ ವೀರರಾಣಿ ಕಿತ್ತೂರು ಚನ್ನಮ್ಮನ ಅಶ್ವಾರೂಢ ಪ್ರತಿಮೆ ತೆರವಿಗೆ ಪೊಲೀಸ್‌ರು ಮತ್ತು ಬೆಳಗಾವಿ ಮಹಾನಗರ ಪಾಲಿಕೆ ಅಧಿಕಾರಿಗಳು ಮುಂದಾದ ವೇಳೆ ಅದಕ್ಕೆ ಕಣಬರ್ಗಿ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿ, ಶುಕ್ರವಾರ ರಾತ್ರಿಯಿಡೀ ಪ್ರತಿಭಟನೆ ನಡೆಸಿದರು. ಯಾವುದೇ ಕಾರಣಕ್ಕೂ ಚನ್ನಮ್ಮನ ಪ್ರತಿಮೆಯನ್ನು ತೆರವುಗೊಳಿಸದಂತೆ ಗ್ರಾಮಸ್ಥರು ಪಟ್ಟು ಹಿಡಿದರು. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ತೀವ್ರ ಮಾತಿನ ಚಕಮಕಿಯೂ ನಡೆಯಿತು. ಶನಿವಾರ ಬೆಳಗಿನ ಜಾವ 4.30ರ ಸುಮಾರಿಗೆ ಸೇರಿದ್ದ ಜನರ …
Read More »ಬೆಳಗಾವಿ ಬೆಂಗಳೂರು ನಡುವೆ ವಿಮಾನ ಹಾರಾಟ ಪುನರಾರಂಭ- ಶೆಟ್ಟರ್
ಬೆಳಗಾವಿ-ಇಂಡಿಗೋ ಸಂಸ್ಥೆಯು ದಿನಾಂಕ 20-12-2024 ರಿಂದ ಬೆಂಗಳೂರು ಬೆಳಗಾವಿ ಬೆಂಗಳೂರು ನಡುವೆ ವಿಮಾನ ಹಾರಾಟವನ್ನು ಪುನಃ ಆರಂಭಿಸಲಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಕರ್ನಾಟಕ ಸರ್ಕಾರ ಹಾಗೂ ಬೆಳಗಾವಿ ಲೋಕಸಭಾ ಸದಸ್ಯರಾದ ಜಗದೀಶ್ ಶೆಟ್ಟರ್ ಇವರು ವಿಷಯ ತಿಳಿಸುತ್ತಾ ಸಂತಸ ವ್ಯಕ್ತಪಡಿಸಿದರು. ಇಂಡಿಗೋ ಸಂಸ್ಥೆಯ ಹಿರಿಯ ಅಧಿಕಾರಿಗಳು ಈ ಬಗ್ಗೆ ದೂರವಾಣಿಯಲ್ಲಿ ವಿಷಯ ತಿಳಿಸಿದ್ದಾಗಿ, ದಿನಾಂಕ 20-12-2024 ರಂದು ಬೆಂಗಳೂರಿನಿಂದ ಬೆಳಗಾವಿಗೆ ಬೆಳಗ್ಗೆ 6:30ಕ್ಕೆ ಮತ್ತು ಬೆಳಗಾವಿಯಿಂದ ಬೆಂಗಳೂರಿಗೆ ಬೆಳಿಗ್ಗೆ 8:30ಕ್ಕೆ …
Read More »ಬೆಳಗಾವಿಯ ಥಾಣೇಧಾರ್ ಅಮೇರಿಕಾದ ಸಂಸತ್ ಪ್ರತಿನಿಧಿ.
ಬೆಳಗಾವಿ- ಬೆಳಗಾವಿಯ ಚಿಂತಾಮನ್ ರಾವ್ ಸರ್ಕಾರಿ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಮತ್ತು ಪ್ರೌಢಶಿಕ್ಷಣ ಮುಗಿಸಿದ ಶ್ರೀ ಥಾಣೇಧಾರ್ ಎರಡನೇಯ ಬಾರಿಗೆ ಅಮೇರಿಕಾದ ಸಂಸತ್ ಪ್ರತಿನಿಧಿಯಾಗಿ ಆಯ್ಕೆಯಾಗಿದ್ದು ಬೆಳಗಾವಿಗೆ ಹೆಮ್ಮೆಯ ವಿಚಾರವಾಗಿದೆ. ಅಮೆರಿಕ ಸಂಸತ್‌ನಲ್ಲಿ ಎರಡನೇ ಬಾರಿಗೆ ಕುಂದಾನಗರಿ ಮೂಲದ ವ್ಯಕ್ತಿಯ ಹೆಜ್ಜೆ ಗುರುತುಮೂಡಿವೆ.ಬೆಳಗಾವಿಯ ಸರ್ಕಾರಿ ಶಾಲೆಯಲ್ಲಿ ಓದಿದ ವ್ಯಕ್ತಿ ಅಮೆರಿಕ ಚುನಾವಣೆಯಲ್ಲಿ ವಿಜಯಶಾಲಿಯಾಗಿದ್ದು ಸಂತಸದ ಸುದ್ದಿಯಾಗಿದೆ. ಅಮೆರಿಕದ ಸಂಸತ್ ಪ್ರತಿನಿಧಿಯಾಗಿ ಬೆಳಗಾವಿಯ ಶ್ರೀ ಥಾಣೇಧಾರ್ ಎರಡನೇಯ ಬಾರಿಗೆ …
Read More »ರುದ್ರಣ್ಣ ಆತ್ಮಹತ್ಯೆ ಪ್ರಕರಣ: ಮೂವರು ಆರೋಪಿಗಳು ಪರಾರಿ…..!!!
ಬೆಳಗಾವಿ- ಬೆಳಗಾವಿ ತಹಶೀಲ್ದಾರ್ ಕಚೇರಿಯ FDC ರುದ್ರಣ್ಣ ಯಡವಣ್ಣವರ ಆತ್ಮಹತ್ಯೆ ಪ್ರಕರಣದ ಕುರಿತು ಬೆಳಗಾವಿಯ ಖಡೇಬಝಾರ್ ಪೋಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು ಮೂವರು ಜನ ಆರೋಪಿಗಳು ತಮ್ಮ ಮೋಬೈಲ್ ಗಳನ್ನು ಸ್ವೀಚ್ ಆಫ್ ಮಾಡಿಕೊಂಡು ಪರಾರಿಯಾಗಿದ್ದು ಪೋಲೀಸರು ಶೋಧಕಾರ್ಯವನ್ನು ಆರಂಭಿಸಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿರುವ ರುದ್ರಣ್ಣನ ತಾಯಿ ಕೊಟ್ಟ ದೂರಿನ ಮೇರೆಗೆ ಖಡೇಬಝಾರ್ ಪೋಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಶುರು ಮಾಡಿದ್ದು ಆತ್ಮಹತ್ಯೆಗೆ ಕಾರಣರಾದ ಬೆಳಗಾವಿ ತಹಶೀಲ್ದಾರ್ ಬಸವರಾಜ್ ನಾಗರಾಳ್ ,ಅಶೋಕ್ …
Read More »ಇಂದು ಬೆಳಗಾವಿ ನಗರದಲ್ಲಿ ಬಿಜೆಪಿಯ ಬೃಹತ್ ಪ್ರತಿಭಟನೆ
ಬೆಳಗಾವಿ- ರಾಜ್ಯದಲ್ಲಿ ಉಪ ಚುನಾವಣೆ ಪಕ್ಕದ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿರುವ ಸಂಧರ್ಭದಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಪ್ರಕರಣಗಳು ಪ್ರತಿಭಟನೆಗಳಿಗೆ ಆಹಾರವಾಗಿವೆ.ಬೆಳಗಾವಿಯ ತಹಶೀಲ್ದಾರ್ ಕಚೇರಿಯ ತಹಶೀಲ್ದಾರ್ ಅವರ ಚೇಂಬರ್ ನಲ್ಲೇ ಕ್ಲಾರ್ಕ್ ನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣವನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಿದೆ. ಸರಕಾರಿ ನೌಕರನ ಆತ್ಮಹತ್ಯೆ ಹಿನ್ನೆಲೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ರಾಜಿನಾಮೆ ಆಗ್ರಹಿಸಿ ಬಿಜೆಪಿ ಇಂದು ಗುರುವಾರ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದೆ. ಜಿಲ್ಲಾಧಿಕಾರಿಗಳು ಮತ್ತು ನಗರ …
Read More »ನಗರದ ಹೊರವಲಯದ ಮನೆಯಲ್ಲಿ ಕೊಳೆತ ಎರಡು ಶವ ಪತ್ತೆ….
ಅಥಣಿ- ಮನೆಯಲ್ಲಿಯೇ ಕೊಳೆತ ಸ್ಥಿತಿಯಲ್ಲಿ ದಂಪತಿಗಳ ಶವಗಳು ಪತ್ತೆಯಾಗಿವೆ.ಅಥಣಿ ಪಟ್ಟಣದ ಮದಭಾವಿ ರಸ್ತೆ ಚೌವ್ಹಾಣ್ ತೋಟದಲ್ಲಿ ಜೋಡಿ ಶವಗಳು ಪತ್ತೆಯಾಗಿವೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಚೌಹಾಣ್ ತೋಟದಲ್ಲಿ,ನಾನಾ ಸಾಹೇಬ್ ಬಾಬು ಚೌವ್ಹಾಣ್ (58) ಜಯಶ್ರೀ ನಾನಾ ಸಾಹೇಬ್ ಚೌವ್ಹಾಣ್ (50) ಎಂಬಾತರ ಮೃತದೇಹಗಳು ಸಿಕ್ಕಿವೆ.ನಾಲ್ಕು ದಿನದ ಹಿಂದೆ ಸಾವು ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ. ಮನೆಯ ಸುತ್ತಲೂ ದುರ್ವಾಸನೆ ಬರುತ್ತಿದ್ದ ಹಿನ್ನಲೆಯಲ್ಲಿ,ಪಕ್ಕದ ಮನೆಯವರು ಗಮನಿಸಿ ಅಥಣಿ ಪೊಲೀಸರಿಗೆ ಮಾಹಿತಿ ನೀಡಿದ …
Read More »ಮನೆ,ಮನೆಗೆ ತೆರಳಿ ಜಾನುವಾರಗಳ ನಿಖರವಾದ ಗಣತಿ ಮಾಡಿ
ಗೋಕಾಕ- ಪ್ರತಿ ಮನೆ-ಮನೆಗೆ ಭೇಟಿ ನೀಡಿ ಜಾನುವಾರುಗಳ ನಿಖರವಾದ ಮಾಹಿತಿಯನ್ನು ಸಂಗ್ರಹಿಸಿ ಗಣತಿ ಕಾರ್ಯವನ್ನು ಯಶಸ್ವಿಗೊಳಿಸುವಂತೆ ಶಾಸಕ ಮತ್ತು ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ (ಬೆಮ್ಯುಲ್) ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಇಲ್ಲಿಯ ಎನ್‌ಎಸ್‌ಎಫ್ ಕಾರ್ಯಾಲಯದಲ್ಲಿ ಕಳೆದ ಸೋಮವಾರದಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಿಂದ ನಡೆಯುತ್ತಿರುವ ೨೧ ನೇ ರಾಷ್ಟೀಯ ಜಾನುವಾರು ಗಣತಿ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, …
Read More »ಕುಡಚಿ ರೈಲು ನಿಲ್ದಾಣದಲ್ಲಿ ʻವಂದೇ ಭಾರತ ರೈಲುʼ ನಿಲುಗಡೆಗೆ ಸಂಸದೆ ಪ್ರಿಯಾಂಕಾ ಮನವಿ
ಬೆಳಗಾವಿ: ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಕುಡಚಿ ರೈಲು ನಿಲ್ದಾಣದಲ್ಲಿ ವಂದೇ ಭಾರತ್ ರೈಲನ್ನು (ನಂ.20669) ನಿಲುಗಡೆ ಮಾಡಬೇಕೆಂದು ಕೇಂದ್ರ ರಾಜ್ಯ ರೈಲ್ವೆ ಸಚಿವ ವಿ.ಸೋಮಣ್ಣ ಅವರಿಗೆ ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಮನವಿ ರವಾನಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ತಿಳಿಸಿದ ಅವರು, ಹುಬ್ಭಳ್ಳಿಯಿಂದ ಪುಣೆಗೆ ತೆರಳುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು (ನಂ.20669) ರಾಯಬಾಗ ತಾಲೂಕು ಕುಡಚಿ ರೈಲು ನಿಲ್ದಾಣದಲ್ಲಿ ನಿಲುಗಡೆ ನೀಡಿದರೆ ಪ್ರಯಾಣಿಕರಿಗೆ …
Read More »ಯಡವಣ್ಣವರ ಸಾವಿಗೆ ಕಾರಣ ಯಾರು ? ವ್ಯಾಟ್ಸಪ್ ಗ್ರೂಪ್ ನಲ್ಲಿ ಆತ ಮೆಸ್ಸೇಜ್ ಮಾಡಿದ್ದೇನು ???
ಬೆಳಗಾವಿ: ಬೆಳಗಾವಿ ತಹಶೀಲ್ದಾರ ಕಚೇರಿಯಲ್ಲಿ ಎಸ್.ಡಿ.ಎ. ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆತ್ಮಹತ್ಯೆಗೆ ಮೇಲಾಧಿಕಾರಿಗಳ ಕಿರುಕುಳ ಆರೋಪ ಕೇಳಿ ಬಂದಿದ್ದು, ವಾಟ್ಸಪ್ ಗ್ರುಪ್ ನಲ್ಲಿ ಈ ಬಗ್ಗೆ ಬರೆದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ರುದ್ರಣ್ಣ ಯಡವಣ್ಣವರ (35) ಆತ್ಮಹತ್ಯೆಗೆ ಶರಣಾದ ದ್ವಿತೀಯ ದರ್ಜೆ ನೌಕರ. ತಹಶೀಲ್ದಾರ ಬಸವರಾಜ ನಾಗರಾಳ ಅವರ ಕೊಠಡಿಯಲ್ಲೇ ಇಂದು ಬೆಳಿಗ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ನಿನ್ನೆಯಷ್ಟೆ ಸವದತ್ತಿ ತಹಶೀಲ್ದಾರ ಕಚೇರಿಗೆ ರುದ್ರಣ್ಣ …
Read More »ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಸಂಸದೆ ಪ್ರಿಯಂಕಾ ಜಾರಕಿಹೊಳಿ ಭೇಟಿ-ಪರಿಶೀಲನೆ
ಬೆಳಗಾವಿ – ಬೆಳಗಾವಿಯ. ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರು ಭೇಟಿ ನೀಡಿ, ವಿಮಾನ ನಿಲ್ದಾಣ ವಿಕ್ಷೀಸಿ, ನೂತನ ನಿರ್ಮಾಣವಾಗುತ್ತಿರುವ ಟರ್ಮಿನಲ್ ಅಭಿವೃದ್ಧಿ ಕಾಮಗಾರಿಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಟರ್ಮಿನಲ್ ಕಟ್ಟಡ, ರನ್‌ವೇ, ಟ್ಯಾಕ್ಸಿ ವೇ, ಬ್ಯಾಗೇಜ್ ಹ್ಯಾಂಡಲಿಂಗ್ ವ್ಯವಸ್ಥೆ, ಸೆಕ್ಯುರಿಟಿ ಸ್ಕ್ಯಾನರ್ ಸೇರಿದಂತೆ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿ, ಭದ್ರತಾ ಉಪಕರಣಗಳೂ ಸೇರಿದಂತೆ ಬಾಕಿ ಕಾಮಗಾರಿಗಳ ಕುರಿತು ಅಧಿಕಾರಿಗಳಿಂದ ಮಾಹಿತಿ …
Read More »ರಾಣಿ ಚನ್ನಮ್ಮ ಪ್ರಾಣಿ ಸಂಗ್ರಾಹಲಯಕ್ಕೆ ಸಂಸದೆ ಪ್ರಿಯಂಕಾ ಜಾರಕಿಹೊಳಿ ಭೇಟಿ
ಬೆಳಗಾವಿ: ತಾಲೂಕಿನ ಭೂತ ರಾಮನ ಹಟ್ಟಿಯ ಕಿತ್ತೂರು ರಾಣಿ ಚನ್ನಮ್ಮ ಮಿನಿ ಪ್ರಾಣಿ ಸಂಗ್ರಹಾಲಯಕ್ಕೆ ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರು ಭೇಟಿ ನೀಡಿ, ಪ್ರಾಣಿಗಳನ್ನು ವೀಕ್ಷಿಸಿ, ಪರಿಶೀಲನೆ ನಡೆಸಿದರು. ಬಳಿಕ, ಪ್ರಾಣಿಗಳ ಪಾಲನೆ- ಪೋಷಣೆ ಹಾಗೂ ಸಂಗ್ರಾಹಲಯದ ಅಭಿವೃದ್ದಿ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು. ಆರಂಭವಾದಿಂದ ಇಲ್ಲಿವರೆಗೂ ಕ್ಷೇತ್ರದ ಶಾಸಕರ ಪ್ರಯತ್ನದಿಂದ ಪ್ರಾಣಿ ಸಂಗ್ರಾಹಲಯ ಬಹಳಷ್ಟು ಅಭಿವೃದ್ಧಿಯಾಗಿದೆ. ಸದ್ಯ ಕರಡಿ, ನವಿಲು, ಜಿಂಕೆ, ಆಮೆ, ಕೃಷ್ಣಮೃಗ, ಹುಲಿ, ಸಿಂಹ ಸೇರಿದಂತೆ ಕೆಲ …
Read More »