ಬೆಳಗಾವಿ- ಬೆಳಗಾವಿ ರೈಲು ಪ್ರಯಾಣಿಕರಿಗೆ ರೈಲು ನಿಲ್ದಾಣವನ್ನು ಸುಂದರೀಕರಣ ಹಾಗೂ ವಿಸ್ತಾರಗೊಳಿಸುವ ನಿಟ್ಟಿನಲ್ಲಿ ಅಧ್ಯಯನ ಮಾಡಲು ಬಂದಿದ್ದೇನೆ. ಅದರಂತೆ ವಿಜಯಪುರದ ರೈಲು ನಿಲ್ದಾಣವನ್ನು ಮೆಲ್ದರ್ಜೆಗೆ ಏರಿಸುವ ಚಿಂತನೆಯನ್ನು ಪ್ರಧಾನಿ ಮೋದಿ ಸರಕಾರ ಮಾಡುವ ಗುರಿಯನ್ನು ಹೊಂದಲಾಗಿದೆ ಎಂದು ಕೇಂದ್ರ ರೆಲ್ವೆ ಸಚಿವ ಪಿಯುಶ್ ಗೋಯಲ್ ತಿಳಿಸಿದ್ದಾರೆ
ಬೆಳಗಾವಿಯಲ್ಲಿ ಈಗಾಗಲೇ ಕೆಲ ರೈಲ್ವೆ ಮೇಲ್ಸೇತುವೆಯನ್ನು ನಿರ್ಮಾಣ ಮಾಡಲಾಗುತ್ತಿದೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಬೆಳಗಾವಿಗೆ ವಿಶೇಷ ಪ್ರಾಮುಖ್ಯತೆ ನೀಡಲಾಗುವುದು ಎಂದರು.
ಬೆಳಗಾವಿ
ರಾಜ್ಯ ಸರಕಾರ ಭ್ರಷ್ಟಾಚಾರದ ಆಡಳಿತದಿಂದ ಕರ್ನಾಟಕದ ಜನತೆಗೆ ಹಾಗೂ ರೈತರೊಂದಿಗೆ ಚಲ್ಲಾಟವಾಡಿದೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಟೆಂಪಲ್ ರನ್ ಮಾಡುವ ನಾಟಕಮಾಡುತ್ತಿದ್ದಾರೆ ಎಂದು
ಕೇಂದ್ರ ರೈಲ್ವೆ ಸಚಿವ ಪಿಯೂಷ ಗೋಯಲ ಆರೋಪಿಸಿದರು.
ಶನಿವಾರ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದರು. ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಭ್ರಷ್ಟಾಚಾರದ ಆಡಳಿತದಿಂದ ಜನರು ಹಾಗೂ ರೈತರಿಗೆ ಅನ್ಯಾಯಮಾಡಿದೆ. ರಾಹುಲ್ ಗಾಂಧಿ ನಾಟಕವಾಡಲು ಕರ್ನಾಟಕದಲ್ಲಿ ಟೆಂಪಲ್ ರನ್ ಮಾಡುತ್ತಿದ್ದಾರೆ. ಇಲ್ಲಿನ ಜನತೆಗೆ ಎಲ್ಲ ತಿಳಿದಿದೆ. ವಿಧಾನ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ