ಬೆಳಗಾವಿ -ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬದಲಾವಣೆ ಆಗಬೇಕು ಎನ್ನುವ ಬೇಡಿಕೆ ಕಾಂಗ್ರೆಸ್ ನಲ್ಲಿಯೇ ಹೆಚ್ಚಾಗಿದೆ.ಜೊತೆಗೆ ಅಭ್ಯರ್ಥಿ ಬದಲಿಸಿ ಎನ್ನುವದು ಪಬ್ಲಿಕ್ ಡಿಮ್ಯಾಂಡ್ ಕೂಡಾ ಇದೆ. ಧಾರವಾಡ ಅಭ್ಯರ್ಥಿ ಬದಲಾದ್ರೆ ಬೆಳಗಾವಿಗೆ ಏನು ಸಂಬಂಧ ? ಎಂದು ಎಲ್ಲರೂ ವಿಚಾರ ಮಾಡಬಹುದು ಧಾರವಾಡ ಅಭ್ಯರ್ಥಿ ಬದಲಾದ್ರೆ ಅದರ ಎಫೆಕ್ಟ್ ಬೆಳಗಾವಿ ಜಿಲ್ಲೆಗೂ ಆಗುವ ಎಲ್ಲ ಸಾಧ್ಯತೆಗಳಿವೆ.
ಕಾಂಗ್ರೆಸ್ ಪಕ್ಷ ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದಿಂದ ಹಾಲುಮತ ಸಮಾಜದ ಅಸೂಟಿ ಅವರಿಗೆ ಟಿಕೆಟ್ ಘೋಷಣೆ ಮಾಡಿದೆ.ರಾಜ್ಯದಲ್ಲಿ ಒಂದೇ ಒಂದು ಕ್ಷೇತ್ರದಿಂದ ಕುರುಬ ಸಮಾಜದ ಯುವ ನಾಯಕನಿಗೆ ಕಾಂಗ್ರೆಸ್ ಟಿಕೆಟ್ ಕೊಟ್ಟಿದೆ.ಈಗ ಕಾಂಗ್ರೆಸ್ ಹೈಕಮಾಂಡ್ ಏನಾದರೂ ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನು ಬದಲಾಯಿಸಿ ಅಲ್ಲಿ ಲಿಂಗಾಯತ ಸಮಾಜಕ್ಕೆ ಟಿಕೆಟ್ ಕೊಟ್ರೆ,ಹಾಲುಮತ ಸಮಾಜಕ್ಕೆ ಬೇರೆ ಕ್ಷೇತ್ರದಲ್ಲಿ ಟಿಕೆಟ್ ಕೊಡಲೇಬೇಕಾದ ಅನಿವಾರ್ಯತೆ ಕಾಂಗ್ರೆಸ್ ಎದುರಿಗೆ ಇದೆ.ಹಾಗಾದ್ರೆ ಕಾಂಗ್ರೆಸ್ ಈ ವಿಚಾರದಲ್ಲಿ ಬೆಳಗಾವಿ ಜಿಲ್ಲೆಯ ಕಡೆ ಮುಖ ಮಾಡುವ ಸಾಧ್ಯತೆ ಇದೆ.
ಈ ಹಿಂದೆ ಬೆಳಗಾವಿಯಲ್ಲಿ ನಡೆದ ಹಾಲುಮತ ಸಮಾಜದ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ರಾಮಯ್ಯ ಬೆಳಗಾವಿ ಅಥವಾ ಚಿಕ್ಕೋಡಿ ಎರಡು ಕ್ಷೇತ್ರಗಳಲ್ಲಿ ಒಂದನ್ನು ಕುರುಬ ಸಮಾಜಕ್ಕೆ ಟಿಕೆಟ್ ಕೊಡುತ್ತೇವೆ ಎಂದು ಹೇಳಿದ್ದರು. ಆದ್ರೆ ಇದು ಕಾಂಗ್ರೆಸ್ ಹೈಕಮಾಂಡ್ ಗೆ ಸಾಧ್ಯವಾಗದೇ ಹಾಲುಮತ ಸಮಾಜಕ್ಕೆ ಧಾರವಾಡ ಕ್ಷೇತ್ರದಲ್ಲಿ ಅಸೂಟಿ ಅವರಿಗೆ ಟಿಕೆಟ್ ಘೋಷಣೆ ಮಾಡಿದ್ದರು.
ಈಗ ದಾರವಾಡ ಜಿಲ್ಲೆಯಲ್ಲಿ ಶಾಸಕ ವಿನಯ ಕುಲಕರ್ಣಿ ಸೇರಿದಂತೆ ಅಲ್ಲಿಯ ಹಲವಾರು ಜನನಾಯಕರು ಟಿಕೆಟ್ ಬದಲಾಯಿಸಿ ಎಂದು ಕಾಂಗ್ರೆಸ್ ಹೈ-ಕಮಾಂಡ್ ನಲ್ಲಿ ಮನವಿ ಮಾಡಿಕೊಂಡಿದ್ದಾರೆ.ಈ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಮಾದ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಧಾರವಾಡ ಜಿಲ್ಲೆಯ ನಾಯಕರ ಜೊತೆ ಮಾತಾಡ್ತೀನಿ ಎಂದು ಹೇಳಿದ್ದಾರೆ. ಕೊನೆಯ ಕ್ಷಣದಲ್ಲಿ ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ಬದಲಾದ್ರೆ ಬೆಳಗಾವಿ ಜಿಲ್ಲೆಯ ಮೇಲೂ ಇದರ ಎಫೆಕ್ಟ್ ಆಗುವದರಲ್ಲಿ ಸಂಶಯವೇ ಇಲ್ಲ.