ಬೆಂಗಳೂರು: ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಎದುರಿಸುತ್ತಿರುವ, ಸದ್ಯಕ್ಕೆ ವಿದೇಶದಲ್ಲಿ ಅಜ್ಞಾತರಾಗಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಒಂದು ತಿಂಗಳ ಬಳಿಕ ಕೊನೆಗೂ ಪ್ರತ್ಯಕ್ಷರಾಗಿದ್ದಾರೆ.
ವಿದೇಶದಲ್ಲಿದ್ದುಕೊಂಡೇ ವಿಡಿಯೋ ಬಿಡುಗಡೆ ಮಾಡಿರುವ ಪ್ರಜ್ವಲ್ ರೇವಣ್ಣ, “ನಾನು ವಿದೇಶಕ್ಕೆ ತೆರಳುವುದು ಏ.26 ರಂದೇ ಪೂರ್ವನಿಗದಿಯಾಗಿತ್ತು” ಎಂದು ಹೇಳಿದ್ದಾರೆ.
ಇದೇ ವೇಳೆ ಮೇ.31 ಕ್ಕೆ ಎಸ್ ಐ ಟಿ ಎದುರು ಹಾಜರಾಗುತ್ತೇನೆ ಎಂದು ಪ್ರಜ್ವಲ್ ರೇವಣ್ಣ ಹೇಳಿದ್ದಾರೆ.
ಇದೇ ವೇಳೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಪತ್ರ, ಕುಮಾರಸ್ವಾಮಿ ಅವರ ಮನವಿಯ ಬಗ್ಗೆಯೂ ಪ್ರತಿಕ್ರಿಯೆ ನೀಡಿರುವ ಪ್ರಜ್ವಲ್ ರೇವಣ್ಣ, ತಂದೆ-ತಾಯಿ, ತಾತನಿಗೆ ಕ್ಷಮೆಕೋರುತ್ತೇನೆ, ಜನತೆ, ಜೆಡಿಎಸ್ ಕಾರ್ಯಕರ್ತರಿಗೂ ಕ್ಷಮೆ ಕೋರುತ್ತೇನೆ ಎಂದು ಹೇಳಿದ್ದಾರೆ.
ನನಗೆ ನ್ಯಾಯಾಲಯದ ಮೇಲೆ ನಂಬಿಕೆ ಇದೆ. ನ್ಯಾಯಾಂಗದ ಮೂಲಕ ನನ್ನ ವಿರುದ್ಧದ ಸುಳ್ಳು ಆರೋಪಗಳಿಂದ ಮುಕ್ತನಾಗುತ್ತೇನೆ ಎಂದು ಪ್ರಜ್ವಲ್ ರೇವಣ್ಣ ವಿಡಿಯೋ ಸಂದೇಶದಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.