ಬೆಳಗಾವಿ- ವಿಧಾನ ಪರಿಷತ್ತಿನ ಚುನಾವಣೆಯ ದಿನಾಂಕ ಘೋಷಣೆ ಆಗಿಲ್ಲ,ಜಿಪಂ,ತಾಪಂ ಚುನಾವಣೆಯ ನಂತರ ಪರಿಷತ್ತಿನ ಚುನಾವಣೆ ನಡೆಯಲಿದ್ದು ಈಗಿನಿಂದಲೇ ಚುನಾವಣೆಯ ತಯಾರಿ ಶುರುವಾಗಿದೆ.
ಮಾಜಿ ಸಚಿವ,ಮಾಜಿ ಸಂಸದ ಹಿರಿಯ ಕಾಂಗ್ರೆಸ್ ಮುಖಂಡ ಪ್ರಕಾಶ ಹುಕ್ಕೇರಿ ಅವರು ವಿಧಾನ ಪರಿಷತ್ತಿನ ಚುನಾವಣೆಗೆ ಸ್ಪರ್ಧೆ ಮಾಡಲು ಕಾಂಗ್ರೆಸ್ ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.
ಕಾಂಗ್ರೆಸ್ ಟಿಕೆಟ್ ಗಾಗಿ ಪ್ರಕಾಶ ಹುಕ್ಕೇರಿ,ಮತ್ತು ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಸಹೋದರ ಚನ್ನರಾಜ್ ಹಟ್ಟಿಹೊಳಿ ಅವರೂ ಕಾಂಗ್ರೆಸ್ ಟಿಕೆಟ್ ಗಾಗಿ ಲಾಭಿ ನಡೆಸಿದ್ದಾರೆ. ಜೊತೆಗೆ ಕಿರಣ ಸಾಧುನವರ,ವೀರಕುಮಾರ ಪಾಟೀಲ,ವಿನಯ ನಾವಲಗಟ್ಟಿ ಅವರೂ ಕಾಂಗ್ರೆಸ್ ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿದ್ದಾರೆ.
ಹಾಲಿ ವಿಧಾನ ಪರಿಷತ್ತಿನ ಸದಸ್ಯ,ಸರ್ಕಾರದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಅವರು ಈ ಬಾರಿಯೂ ಬಜೆಪಿ ಅಭ್ಯರ್ಥಿಯಾಗಿ ಪರಿಷತ್ತಿನ ಚುನಾವಣೆಗೆ ಸ್ಪರ್ದಿಸಲಿದ್ದು,ಅವರು ಈಗಾಗಲೇ ಕ್ಷೇತ್ರದಲ್ಲಿ ಸಂಚಾರ ಮಾಡಿ ಐದು ವರ್ಷಗಳ ಅವಧಿಯಲ್ಲಿ ತಾವು ಮಾಡಿರುವ ಕೆಲಸಗಳ ಬಗ್ಗೆ ಪ್ರಚಾರ ನಡೆಸಿದ್ದಾರೆ.
ಪರಿಷತ್ತಿನ ಚುನಾವಣೆಗೆ ಬೆಳಗಾವಿ ಜಿಲ್ಲೆಯ ಪ್ರಭಾವಿ ಜಾರಕಿಹೊಳಿ ಕುಟುಂಬವೂ ಈ ಬಾರಿ ಎಂ ಎಲ್ ಸಿ ಚುನಾವಣೆಗೆ ಸ್ಪರ್ದಿಸುವ ಸಾಧ್ಯತೆ ಇದ್ದು ಲಖನ್ ಜಾರಕಿಹೊಳಿ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿವ ನಿರ್ಧಾರ ಮಾಡಿದ್ದಾರೆ ಎಂದು ಅವರ ಅಭಿಮಾನಿಗಳ ಮೂಲದಿಂದ ತಿಳಿದು ಬಂದಿದೆ.