ಬೆಳಗಾವಿ-ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಹಿರಿಯ ನಾಯಕ,ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ್ ಹುಕ್ಕೇರಿ ಅವರನ್ನು ದೆಹಲಿಯ ಕರ್ನಾಟಕದ ಪ್ರತಿನಿಧಿ-2 ಆಗಿ ಸಂಪುಟ ದರ್ಜೆ ಸಚಿವರ ಸ್ಥಾನಮಾನದೊಂದಿಗೆ ನೇಮಕ ಮಾಡಲಾಗಿದೆ.
ರಾಜ್ಯಸಭೆಯ ಮಾಜಿ ಸದಸ್ಯ ಪ್ರೊ. ರಾಜೀವ್ ಗೌಡ ಅವರು ರಾಜ್ಯ ಯೋಜನಾ ಮಂಡಳಿಯ ಉಪಾಧ್ಯಕ್ಷರಾಗಿ ಸಂಪುಟ ದರ್ಜೆ ಸಚಿವರ ಸ್ಥಾನಮಾನದೊಂದಿಗೆ ನೇಮಕಗೊಳಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಹಿರಿಯ ಕಾಂಗ್ರೆಸ್ ನಾಯಕ ಪ್ರಕಾಶ್ ಹುಕ್ಕೇರಿ ಅವರಿಗೆ ಕೊನೆಗೂ ಸ್ಥಾನಮಾನ ಸಿಕ್ಕಿರುವದು ಸಂತಸದ ಸಂಗತಿಯಾಗಿದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ