Breaking News

ಜನತಾ ದರ್ಶನದಲ್ಲಿ ಊಟದ ವ್ಯವಸ್ಥೆ ಮಾಡಿದ ಕಾಕಾ…!!

ಬೆಳಗಾವಿ-ಒಬ್ಬ ನಾಯಕ ಹೇಗಿರಬೇಕು,ಆತನ ಜವಾಬ್ದಾರಿಗಳೇನು ಅನ್ನೋದನ್ನು ಮಾಜಿ ಸಚಿವ ಪ್ರಕಾಶ್ ಹುಕ್ಕೇರಿಯವರನ್ನು ನೋಡಿ ಕಲಿಯಬೇಕು, ಯಾಕಂದ್ರೆ ಅವರಲ್ಲಿರುವ ಸಾಮಾಜಿಕ ಕಳಕಳಿ ಎಲ್ಲರಿಗೂ ಮಾದರಿ.

ಇಂದು ಬೆಳಗಾವಿಯ ಕೆಪಿಟಿಸಿಎಲ್ ಹಾಲ್ ನಲ್ಲಿ ಜನತಾ ದರ್ಶನ ನಡೆಯಿತು,ಬೆಳಗಾವಿ ಜಿಲ್ಲೆಯ ಮೂಲೆ ಮೂಲೆಗಳಿಂದ ಸಾರ್ವಜನಿಕರು ತಮ್ಮ ಅಹವಾಲು ಹೇಳಿಕೊಳ್ಳಲು ಬೆಳಗಾವಿಗೆ ಆಗಮಿಸಿದ್ದರು .ಸರ್ಕಾರದ ದೆಹಲಿಯ ವಿಶೇಷ ಪ್ರತಿನಿಧಿಯಾಗಿರುವ ಪ್ರಕಾಶ್ ಹುಕ್ಕೇರಿ ಅವರು ಜನತಾ ದರ್ಶನದಲ್ಲಿ ಸುಮಾರು ಎರಡು ಸಾವಿರಕ್ಕೂ ಹೆಚ್ಚು ಜನರಿಗೆ ಸ್ವಂತ ಖರ್ಚಿನಲ್ಲಿ ಊಟದ ವ್ಯವಸ್ಥೆ ಮಾಡುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾದರು‌.

ಬೆಳಗಾವಿ ಜಿಲ್ಲೆಯ ಎಲ್ಲ ತಾಲೂಕುಗಳಿಂದ ಜನತಾ ದರ್ಶನಕ್ಕೆ ಬಂದಿದ್ದ ಎರಡು ಸಾವಿರಕ್ಕೂ ಹೆಚ್ಚು ಜನ ಕೆಪಿಟಿಸಿಎಲ್ ಹಾಲ್ ನಲ್ಲಿಯೇ ಊಟ ಮಾಡಿದ್ರು,ಎಲ್ಲರೂ ಅತ್ಯಂತ ಅಕ್ಕರೆಯಿಂದ ಪ್ರೀತಿಯಿಂದ ಮೇಸೆ ಮಾವ ಎಂದೇ ಕರೆಯುವ ಪ್ರಕಾಶ್ ಹುಕ್ಕೇರಿ ಕಾಕಾ ಅವರ ದಾಸೋಹ ನಿಜಕ್ಕೂ ಪ್ರಶಂಸನೀಯ.

Check Also

ರಾತ್ರಿ ಮಠದಲ್ಲಿ ಲೇಡಿ……..ಗ್ರಾಮಸ್ಥರಿಂದ ಮುತ್ತಿಗೆ ಮಠದಿಂದ ಸ್ವಾಮೀಜಿ ಉಚ್ಛಾಟನೆ

ಮೂಡಲಗಿ : ತಾಲೂಕಿನ ಶಿವಾಪೂರ(ಹ) ಗ್ರಾಮದ ಅಡವಿ ಸಿದ್ದೇಶ್ವರ ಮಠದ ಅಡವಿಸಿದ್ದರಾಮ ಸ್ವಾಮೀಜಿಯ ಅಕ್ರಮ ಸಂಭಂದದ ಆರೋಪದ ಹಿನ್ನಲೆ ಇಡೀ …

Leave a Reply

Your email address will not be published. Required fields are marked *