ಬೆಳಗಾವಿ- ಬೆಳಗಾವಿಯಲ್ಲಿ ಶತಮಾನದ ಇತಿಹಾಸ ಹೊಂದಿರುವ ಮಿಲಿಟರಿ ಡೈರಿ ಬಂದ್ ಮಾಡುವಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದ್ದು ಕೂಡಲೇ ಆದೇಶವನ್ನು ವಾಪಸ್ ಪಡೆಯ ಬೇಕೆಂದು ಶ್ರೀರಾಮ ಸೇನೆಯ ಕಾರ್ಯಕರ್ತರು ಒತ್ತಾಯಿಸಿದರು
ಪ್ರಮೋದ ಮುತಾಲಿಕ ಅವರ ನೇತ್ರತ್ವದಲ್ಲಿ ಪ್ರತಿಭಟನೆ ನಡೆಸಿದ ಶ್ರೀರಾಮ ಸೇನೆಯ ಕಾರ್ಯಕರ್ತರು ಮಿಲಿಟರಿ ಡೈರಿಯನ್ನು ಯಾವುದೇ ಕಾರಣಕ್ಕೂ ಬಂದ್ ಮಾಡದಂತೆ ಜಿಲ್ಲಾಧಿಕಾರಿಗಳ ಮೂಲಕ ರಕ್ಷಣಾ ಸಚಿವರಿಗೆ ಮತ್ತು ಪ್ರಧಾನಿ ನರೇಂದ್ರ ಮೋದಿಗೆ ಮನವಿ ಅರ್ಪಿಸಿದರು
ಈ ಸಂಧರ್ಭದಲ್ಲಿ ಮಾತನಾಡಿದ ಪ್ರಮೋದ ಮುತಾಲಿಕ ಬೆಳಗಾವಿಯ ಮಿಲಿಟರಿ ಡೈರಿ ನೂರಕ್ಕೂ ಹೆಚ್ಚು ವರ್ಷಗಳ ಇತಿಹಾಸ ಹೊಂದಿದೆ ಮೂರು ತಲೆಮಾರಿನಿಂದ ಮೂರು ನೂರಕ್ಕು ಹೆಚ್ಚು ಕುಟುಂಬಗಳು ಈ ಡೈರಿಯಲ್ಲಿ ಕೆಲಸ ಮಾಡಿ ಬದುಕು ಸಾಗಿಸುತ್ತಾರೆ ಮಿಲಿಟರಿ ಗೋ ಶಾಲೆಯಲ್ಲಿ 700 ಕ್ಕೂ ಹೆಚ್ಚು ಆಕಳುಗಳಿವೆ ಪ್ರತಿದಿನ ಮೂರು ಸಾವಿರಕ್ಕೂ ಹೆಚ್ಚು ಲೀಟರ್ ಹಾಲನ್ನು ಕೊಡುತ್ತವೆ ಶತಮಾನದ ಇತಿಹಾಸ ಹೊಂದಿರುವ ಈ ಡೈರಿಯನ್ನು ಮುಚ್ಚಲು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ ಈ ಆದೇಶವನ್ನು ಕೂಡಲೇ ವಾಪಸ್ ಪಡೆಯದಿದ್ದರೆ ಉಗ್ರ ಹೋರಾಟ ಮಾಡಲಾಗುವದು ಎಂದು ಪ್ರಮೋದ ಮುತಾಲಿಕ ಎಚ್ಚರಿಕೆ ನೀಡಿದರು