Breaking News

ಸಮಸ್ಯೆಗೆ ಸ್ಪಂದಿಸುವ ಮೂಲಕ ,ಸಂಸದೆ ಪ್ರಿಯಾಂಕಾ ಪರ್ವ ಆರಂಭ..

ಹಂತ, ಹಂತವಾಗಿ ಜನರ ಸಮಸ್ಯೆ ಈಡೇರಿಸಲು ಪ್ರಯತ್ನ: ಸಂಸದೆ ಪ್ರಿಯಂಕಾ ಜಾರಕಿಹೊಳಿ

ಚಿಕ್ಕೋಡಿ: ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಜನರ ಸಮಸ್ಯೆಗಳನ್ನು ಹಂತ, ಹಂತವಾಗಿ ಈಡೇರಿಸಲಾಗುವುದು ಎಂದು ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರು ಭರವಸೆ ನೀಡಿದರು.

ಕವಟಗಿಮಠ ನಗರದ ಸ್ವ-ಗ್ರಹದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚಿಕ್ಕೋಡಿ ಲೋಕಸಭೆ ಕ್ಷೇತ್ರದಿಂದ ಜಯಗಳಿಸಿದ ಬಳಿಕ ಮೊದಲ ಬಾರಿಗೆ ನಾನು ಚಿಕ್ಕೋಡಿಯ ನಗರದ ಸ್ವ-ಗ್ರಹದಲ್ಲಿ ಜನತೆಯ ಸಮಸ್ಯೆಗಳನ್ನು ಆಲಿಸಿ, ಮನವಿಗಳನ್ನು ಸ್ವೀಕರಿಸಿದ್ದೇನೆಂದು ತಿಳಿಸಿದರು.

ಚಿಕ್ಕೋಡಿ ಕ್ಷೇತ್ರದ ವಿವಿಧಡೆಯಿಂದ ಜನರು ಇಂದು ತಮ್ಮ ಸಮಸ್ಯೆಗಳನ್ನು ನಿವಾರಿಸಲು ಮನವಿಗಳನ್ನು ಸಲ್ಲಿಸಿದ್ದಾರೆ. ಕಾರಣ ಜನತೆಯ ಸಮಸ್ಯೆಗಳನ್ನು ಹಂತ, ಹಂತವಾಗಿ ಈಡೇರಿಸುತ್ತೇನೆ. ಚಿಕ್ಕೋಡಿ ಜಿಲ್ಲಾ ಕೇಂದ್ರವನ್ನಾಗಿ ಘೋಷಿಸಬೇಕೆಂದು ಈ ಭಾಗದ ಜನತೆಯ ಬೇಡಿಕೆ ಇದೆ. ಈ ಕುರಿತು ಎಲ್ಲಾ ಮುಖಂಡರೊಂದಿಗೆ ಚರ್ಚೆ ನಡೆಸುತ್ತೇವೆ. ಚಿಕ್ಕೋಡಿ ಜಿಲ್ಲಾ ಕೇಂದ್ರವನ್ನಾಗಿ ಘೋಷಿಸುವಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್‌ ಜಾರಕಿಹೊಳಿ ಅವರು ನಿರ್ಧರಿಸುತ್ತಾರೆಂದರು.

ಚಿಕ್ಕೋಡಿ ಭಾಗದ ಸೈನಿಕರ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸುತ್ತೇನೆ. ಅದೇ ರೀತಿ ಈ ಭಾಗದ ಗಂಭೀರ ಸಮಸ್ಯೆಗಳಾದ ಕುಡಿಯುವ ನೀರಿನ ಸಮಸ್ಯೆ, ನೀರಾವರಿ ಯೋಜನೆಗಳ ಜಾರಿಗೆ ಆದ್ಯತೆ ನೀಡಲಾಗುವುದು, ಇನ್ನು ಪ್ರವಾಹ ಬಂದಗ ಆಗುವ ಸಮಸ್ಯೆಗಳ ಬಗ್ಗೆ ಗಮನ ಹರಿಸಲಾಗುವುದು ಎಂದರು.

ಸಂಸದರ ಕಚೇರಿಗೆ ಭೇಟಿ: ಚಿಕ್ಕೋಡಿಯಲ್ಲಿರುವ ಸಂಸದರ ಕಚೇರಿಗೆ ಭೇಟಿ ನೀಡಿ ಪರಿಶೀಲಿಸಿದ್ದೇನೆ. ಕಚೇರಿಗೆ ಸಂಬಂಧಿಸಿದಂತೆ ಕೆಲ ಸಣ್ಣ ಪುಟ್ಟ ಕೆಲಸಳು ಇವೆ. ಮೂರ್ನಾಲ್ಕು ದಿನಗಳಲ್ಲಿ ಕಚೇರಿ ಪೂರ್ಣಗೊಳ್ಳಲಿದ್ದು, ಮುಂದಿನ ದಿನಗಳಲ್ಲಿ ಅಲ್ಲಿಯೇ ಸಭೆಗಳನ್ನು ನಡೆಸಲಾಗುವುದು ಎಂದು ಹೇಳಿದರು.

ಕವಟಗಿಮಠ ನಗರದ ಸ್ವ-ಗ್ರಹದಲ್ಲಿ ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರು ಚಿಕ್ಕೋಡಿ ಕ್ಷೇತ್ರದ ವಿವಿಧಡೆಯಿಂದ ಆಗಮಿಸಿ ಜನರ ಮನವಿಗಳನ್ನು ಸ್ವೀಕರಿಸಿ, ಸಮಸ್ಯೆಗಳಿಗೆ ಸ್ಪಂದಿಸಿದರು.

ಈ ಸಂದರ್ಭದಲ್ಲಿ ಸತೀಶ್‌ ಶುಗರ್ಸ್‌ ನಿರ್ದೇಶಕ, ಯುವ ನಾಯಕ ರಾಹುಲ್‌ ಜಾರಕಿಹೊಳಿ ಸೇರಿದಂತೆ ಹಲವು ಮುಖಂಡರಿದ್ದರು.

Check Also

ಕೆಎಲ್ಇ ಡಾಕ್ಟರ್ ಗಳಿಗೆ ಯುದ್ಧ ಗೆದ್ದ ಸಂಭ್ರಮ

ಕೆಮ್ಮು ಮತ್ತು ಕಡಿಮೆ ರಕ್ತದೊತ್ತಡದೊಂದಿಗೆ ತೀವ್ರವಾದ ಉಸಿರಾಟದ ತೊಂದರೆ ಅನುಭವಿಸುತ್ತ ಜೀವನ್ಮರಣದ ನಡುವೆ ಹೋರಾಡುತ್ತಿದ್ದ ವ್ಯಕ್ತಿಗೆ ಪೆನುಂಬ್ರಾ ಡಿವೈಸ್ ಮೂಲಕ …

Leave a Reply

Your email address will not be published. Required fields are marked *