ಬೆಳಗಾವಿ-ಇಂದಿನಿಂದ ಬೆಳಗಾವಿಯಲ್ಲಿ ಪಿಯುಸಿ ದ್ವೀತಿಯ ವರ್ಷದ ಪಿಯುಸಿ ಪರೀಕ್ಷೆ ಆರಂಭವಾಗಿದ್ದು ಪರೀಕ್ಷಾ ಕೇಂದ್ರಗಳ ಸುತ್ತ ಮುತ್ತಲು ಬಿಗಿ ಪೋಲೀಸ್ ಬಂದೋಬಸ್ತಿಯನ್ನು ಏರ್ಪಡಿಸಲಾಗಿದೆ.
ಬೆಳಗಾವಿ ಜಿಲ್ಲೆಯಲ್ಲಿ ಪಿಯುಸಿ ದ್ವಿತೀಯ ವರ್ಷದ ಪರೀಕ್ಷೆಗಾಗಿ ಬೆಳಗಾವಿಯ ಶೈಕ್ಷಣಿಕ ಜಿಲ್ಲೆಯಲ್ಲಿ 34, ಪರೀಕ್ಷಾ ಕೇಂದ್ರಗಳನ್ನು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ 45 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 79 ಪರೀಕ್ಷಾ ಕೇಂದ್ರಗಳಲ್ಲಿ ತೆರೆಯಲಾಗಿದೆ. ಈ ಪರೀಕ್ಷಾ ಕೇಂದ್ರಗಳಲ್ಲಿ 52 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ.
ಎಲ್ಲ ಪರೀಕ್ಷಾ ಕೇಂದ್ರಗಳಿಗೆ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಪ್ರಶ್ನೆಪತ್ರಿಕೆ ಸಾಗಣೆ ವಾಹನಕ್ಕೆ ಜಿಪಿಎಸ್ ಅಳವಡಿಸಲಾಗಿದೆ. ಡಿಸಿ ಕಚೇರಿಯಲ್ಲಿ ಕಂಟ್ರೋಲ್ ರೂಂ ತೆರೆಯಲಾಗಿದೆ.
ಪಿಯುಸಿ ಪರೀಕ್ಷೆಯಲ್ಲಿ ನಕಲು ಹಾವಳಿ ತಡೆಯಲು ಜಿಲ್ಲಾಡಳಿತ ಎಲ್ಲ ರೀತಿಯ ಕ್ರಮಗಳನ್ನು ಕೈಗೊಂಡಿದೆ.ಇಂದು ಬೆಳಿಗ್ಗೆ ಬೆಳಗಾವಿಯ ಎಲ್ಲ ಪರೀಕ್ಷಾ ಕೇಂದ್ರಗಳಿಗೆ ಪಾಲಕರು ತಮ್ಮ ಮಕ್ಕಳನ್ನು ಬಿಟ್ಟು ,ಮಕ್ಕಳಿಗೆ ಪರೀಕ್ಷಾ ಕೇಂದ್ರಗಳ ಗೇಟ್ ನಲ್ಲಿಯೇ ಬಿಡಬೇಕಾಯಿತು,ಪರೀಕ್ಷಾ ಕೇಂದ್ರಗಳಲ್ಲಿ ಮಾದ್ಯಮ ಪ್ರತಿನಿಧಿಗಳಿಗೆ ಪ್ರವೇಶಕ್ಕೆ ಪೋಲೀಸರು ಅವಕಾಶ ನೀಡಲಿಲ್ಲ.