ಬೆಳಗಾವಿ- ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ ಪಿ.ವಿ ಮೋಹನ್ ಈಗ ಮೌನ ಮುರಿದಿದ್ದಾರೆ.ಪತ್ರಿಕಾಗೋಷ್ಠಿ ಕರೆದು ಬೆಳಗಾವಿ ಜಿಲ್ಲಾಡಳಿತ ಮತ್ತು ಆರ್ ಎಸ್ ಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬೆಳಗಾವಿಯ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಕೆಪಿಸಿಸಿ ಅದ್ಯಕ್ಷ ಡಿ ಕೆ ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮಕ್ಕೆ ಸರ್ಕಾರ ಅನುಮತಿ ಕೊಡದಿದ್ದರೂ ಕಾರ್ಯಮ ನಡೆಯುತ್ತದೆ ಎಂದು ಪಿ ವಿ ಮೋಹನ್ ರಾಜ್ಯಸರ್ಕಾರಕ್ಕೆ ಸವಾಲು ಹಾಕಿದ್ದು,ರಾಜ್ಯ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ರಾಜ್ಯಸಭಾ ಸದಸ್ಯರ ಆಯ್ಕೆಯ ಹಿಂದೆ,ಮತ್ತು ಮಲ್ಲಿಕಾರ್ಜುನ ಖರ್ಗೆ ಅವರ ಜೀವ ಬೆದರಿಕೆಯ ಹಿಂದೆ ಆರ್ ಎಸ್ ಎಸ್ ಕೈವಾಡವಿದೆ ಎಂದು ಗಂಭೀರ ಆರೋಪ ಮಾಡಿರುವ ಅವರು ರಾಜ್ಯದಲ್ಲಿರುವ ಬಿಜೆಪಿ ಸರ್ಕಾರವನ್ನು ಆರ್ ಎಸ್ ಎಸ್ ಚಲಾವಣೆ ಮಾಡುತ್ತಿದೆ ಎಂದು ಪಿ ವಿ ಮೋಹನ್ ಹೇಳಿದ್ದಾರೆ.
ಬೆಳಗಾವಿ ಜಿಲ್ಲಾ ಬಿಜೆಪಿ ನಾಯಕರ ಕಿತ್ತಾಟದಿಂದಲೇ ಬಿಜೆಪಿ ಸರ್ಕಾರ ಆರು ತಿಂಗಳಲ್ಲಿ ಪತನವಾಗುತ್ತದೆ ಎಂದು ಭವಿಷ್ಯ ನುಡಿದಿರುವ ಅವರು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಕೆಳಗಿಳಿಸಲು ಆರ್ ಎಸ್ ಎಸ್ ಹುನ್ನಾರ ನಡೆಸಿದೆ ಎಂದು ಆರೋಪಿಸಿದ್ದಾರೆ.
ಕೊರೋನಾ ಸೊಂಕಿತರ ಕುರಿತು ಜಿಲ್ಲಾಡಳಿತದ ಬಳಿ ಸಮಗ್ರ ಮಾಹಿತಿ ಇಲ್ಲ,ಮಹಾರಾಷ್ಟ್ರದಿಂದ ಬೆಳಗಾವಿಗೆ ಬಂದ ಶಂಕಿತರನ್ನು ಕ್ವಾರಂಟೈನ್ ಮಾಡದೇ ಮನೆಗೆ ಕಳುಹಿಸಿದ ಕಾರಣ ಬೆಳಗಾವಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ ಹೆಚ್ಚಾಗಿದೆ.ಬೆಳಗಾವಿಯಲ್ಲಿ ಹಲವಾರು ಜನ ಮಂತ್ರಿಗಳಿದ್ದರೂ ಕೊರೋನಾ ನಿಯಂತ್ರಿಸುವಲ್ಲಿ ವಿಫಲರಾಗಿದ್ದಾರೆ.ಸೊಂಕಿತರಿಗೆ ಸರಿಯಾದ ಸವಲತ್ತುಗಳನ್ನು ನೀಡುತ್ತಿಲ್ಲ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಪಿ ವಿ ಮೋಹನ್ ಆರೋಪಿಸಿದ್ದಾರೆ.
ಪತ್ರಿಕಾಗೋಷ್ಠಿ ಯಲ್ಲಿ ಕಾಂಗ್ರೆಸ್ ಜಿಲ್ಲಾದ್ಯಕ್ಷರಾದ ವಿನಯ ನಾವಲಗಟ್ಟಿ,ರಾಜು ಸೇಠ ,ಮಾಜಿ ಶಾಸಕ ಫಿರೋಜ್ ಸೇಠ ಜಯಶ್ರೀ ಮಾಳಗಿ ಸೇರಿದಂತೆ ಇತರ ನಾಯಕರು ಉಪಸ್ಥಿತರಿದ್ದರು.