ಬೆಳಗಾವಿ ಅಧಿವೇಶನದಲ್ಲಿ ವಿರೋಧಪಕ್ಷದ ನಾಯಕನ ವರಸೆ….

ಬೆಂಗಳೂರು: ಪದ್ಮನಾಭನಗರ ಬಿಜೆಪಿ ಶಾಸಕ ಆರ್ ಅಶೋಕ್ ಅವರನ್ನು ವಿಪಕ್ಷ ನಾಯಕನಾಗಿ ಆಯ್ಕೆ ಮಾಡಲಾಗಿದೆ.ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಇವರ ವರಸೆ ಶುರುವಾಗಲಿದೆ.good

ವಿಪಕ್ಷ ನಾಯಕನ ಆಯ್ಕೆ ವಿಚಾರವಾಗಿ ಪಕ್ಷದೊಳಗೆ ಅಸಮಾಧಾನ ಉಂಟಾಗಿರುವ ಹಿನ್ನೆಲೆಯಲ್ಲಿ ಇಂದು ಸಂಜೆ ನಡೆದ ಶಾಸಕಾಂಗ ಪಕ್ಷದ ಸಭೆಗೆ ವೀಕ್ಷಕರಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಶ್ಯಂತ್ ಕುಮಾರ್ ಗೌತಮ್ ಆಗಮಿಸಿದ್ದರು.

ಶಾಸಕರ ಅಭಿಪ್ರಾಯಗಳನ್ನು ಆಲಿಸಿದ ವೀಕ್ಷಕರು ವಿರೋಧದ ನಡುವೆಯೂ ವಿಪಕ್ಷ ನಾಯಕನಾಗಿ ಆರ್ ಅಶೋಕ್ ಅವರನ್ನು ನೇಮಿಸಿದ್ದಾರೆ. ಇನ್ನು ಇದೇ ವೇಳೆ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಆರ್ ಅಶೋಕ್ ಅವರು, ಪಕ್ಷ ದೊಡ್ಡ ಜವಾಬ್ದಾರಿಯನ್ನು ನೀಡಿದೆ. ಅದನ್ನು ಸರಿಯಾಗಿ ನಿಭಾಯಿಸುತ್ತೇನೆ.
ಸಾಮಾನ್ಯ ಕಾರ್ಯಕರ್ತನಾಗಿ 45 ವರ್ಷಗಳಿಂದ ಕೆಲಸ ಮಾಡಿದ್ದೇನೆ. ಕಾಂಗ್ರೆಸ್ ನ ದುರಾಳಿತವ್ನನು ಜನರ ಮುಂದಿಡಲು ಪ್ರಯತ್ನಿಸುತ್ತೇವೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ 28 ಸ್ಥಾನಗಳನ್ನು ಗೆಲ್ಲುವ ಗುರಿ ಹಾಕಿಕೊಳ್ಳತ್ತೇವೆ ಎಂದು ಹೇಳಿದರು.

ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಆಯ್ಕೆ ವಿಚಾರವಾಗಿ ಒಳಗೊಳಗೆ ಅಸಮಾಧಾನ ಭುಗಿಲೆದ್ದಿತ್ತು. ವಿಪಕ್ಷ ನಾಯಕ ಸ್ಥಾನ ಕೈತಪ್ಪಲಿದೆ ಎಂಬ ಸೂಚನೆ ಸಿಕ್ಕಿದ್ದರಿಂದ ಬಿಜೆಪಿ ಪಾಳಯದ ಅತೃಪ್ತ ನಾಯಕ, ಶಾಸಕ ಬಸನ ಗೌಡ ಪಾಟೀಲ ಯತ್ನಾಳ್ ಬಹಿರಂಗವಾಗಿಯೇ ಸಿಡಿದೆದ್ದಿದ್ದರು.

Check Also

ಅನಾಹುತ ಮಳೆಗೆ ಗೋಡೆ ಕುಸಿದು ಮಹಿಳೆ ಸಾವು

ಗೋಕಾಕ: ಗೋಕಾಕದ ಸಂಗಮ ನಗರದ ಫರೀದಾ ಎಂಬ ಮಹಿಳೆ ಗೋಡೆ ಕುಸಿದ ಪರಿಣಾಮ ಮೃತಪಟ್ಟಿದ್ದಾರೆ. ಇವರು ತಮ್ಮ ಮಗ ರಿಯಾಜ್ …

Leave a Reply

Your email address will not be published. Required fields are marked *