Breaking News

೧೭ ರಂದು ಬೆಳಗಾವಿಗೆ ರಾಹುಲ ಗಾಂಧಿ

ಬೆಳಗಾವಿ- ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ರಾಹುಲ ಗಾಂಧಿ ಅವರು ಡಿಸೆಂಬರ ೧೭ ರಂದು ಬೆಳಗಾವಿ ನಗರಕ್ಕೆ ಆಗಮಿಸುತ್ತಿದ್ದು ಅಂದು ನಗರದಲ್ಲಿ ಬೃಹತ್ತ ಕಾಂಗ್ರೆಸ್ ಸಮಾವೇಶ ನಡೆಯಲಿದೆ

ಅದಕ್ಕಾಗಿ ರಾಜ್ಯ ಕಾಂಗ್ರೆಸ ಅಧ್ಯಕ್ಷ ದಿನೇಶ ಗುಂಡೂರಾವ ಅವರು ಬೆಳಗಾವಿಗೆ ಆಗಮಿಸಿ ಈ ಕುರಿತು ಪೂರ್ವಭಾವಿ ಸಭೆ ನಡೆಸಿದರು

ಅದಕ್ಕು ಮೊದಲು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಆದರ್ಶ ಹೊಟೆಲ್ ನಲ್ಲಿ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಮುಖಂಡರ ಸಭೆ ನಡೆಸಿ ರಾಹುಲ ಗಾಂಧೀ ಅವರ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಕಾಂಗ್ರೆಸ್ ಮುಖಂಡರಲ್ಲಿ ಮನವಿ ಮಾಡಿಕೊಂಡರು

ಇದಾದ ಬಳಿಕ ದಿನೇಶ ಗಂಡೂರಾವ ಅವರು ನಗರ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಸಿ ಮಾತನಾಡಿದ ಅವರು ರಾಜ್ಯ ಸರ್ಕಾರ ಕಳೆದ ಮೂರುವರೆ ವರ್ಷದಲ್ಲಿ ಅನೇಕ ಜನಪರ ಕೆಲಸಗಳನ್ನು ಮಾಡಿದೆ ರೈತರಿಗೆ ಗ್ರಾಮೀಣ ಭಾಗದ ಅಭಿವೃದ್ಧಿ ನಗರಗಳ ಅಭಿವೃದ್ಧಿಗೆ ಆದ್ಯತೆ ನೀಡಿದೆ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ ನೂರಕ್ಕೆ ನೂರು ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ಗುಂಡೂರಾವ ವಿಶ್ವಾಸ ವ್ಯಕ್ತಪಡಿಸಿದರು

ಬಿಜೆಪಿ ಕೊಟ್ಟ ಮಾತಿಗೆ ತಪ್ಪಿದೆ ಪ್ರತಿ ವರ್ಷ ಎರಡು ಲಕ್ಷ ಉದ್ಯೋಗ ಸೃಷ್ಠಿಮಾಡಲು ಸಾಧ್ಯವಾಗಿಲ್ಲ ನೋಟು ರದ್ದತಿಯಿಂದ ದೇಶ ಬದಲಾಯಿಸುತ್ತೇವೆ ಎಂದು ದಿಶಾಬೂಲ ಮಾಡುತ್ತಿರುವ ಬಿಜೆಪಿಯಿಂದ ದೇಶದ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಆರೋಪಿಸಿದರು

ಚುನಾವಣೆಗೆ ಒಂದೂವರೆ ವರ್ಷ ಬಾಕಿ ಇದೇ ಕಾಂಗ್ರೆಸ್ ಮುಖಂಡರು ಒಗ್ಗಟ್ಟಾಗಿ ಪ್ರತಿಯೊಂದು ಬ್ಲಾಕ್ ಗಳಲ್ಲಿ ಕಾರ್ಯಕ್ರಮ ಹಮ್ಮಿಕೊಂಡು ರಾಜ್ಯ ಸರ್ಕಾರ ಮಾಡಿರುವ ಅಭಿವೃದ್ಧಿ ಕೆಲಸಗಳ ಬಗ್ಗೆ ಸರಕಾರದ ಸಾಧನೆಗಳನ್ನು ಜನರಿಗೆ ಮುಟ್ಡಿಸಬೇಕು ಎಂದು ಗುಂಡೂರಾವ ಕಾರ್ಯಕರ್ತರಿಗೆ ಕಿವಿಮಾತು ಹೇಳಿದರು

ವಾರ್ಡ ಮಟ್ಟದಲ್ಲಿ ಸಂಘಟನೆಯನ್ನು ಬಲಪಡಿಸಬೇಕು ಮುಖಂಡರು ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಬಲಪಡಿಸಬೇಕು ಪ್ರಚಾರಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಗುಂಡೂರಾವ ಕರೆ ನೀಡಿದರು

ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷ ಲಕ್ಷ್ಮೀ ಹೆಬ್ಬಾಳಕರ   ಶಾಸಕ ಫರೋಜ ಸೇಠ ನಗರ ಅಧ್ಯಕ್ಷ ರಾಜು ಸೇಠ ಗಣೇಶ ಹುಕ್ಕೇರಿ ಆಲೇದಿನ್ ಕಿಲ್ಲೇದಾರ ಜಯಶ್ರೀ ಮಾಳಗಿ ಮೊದಲಾದವರು ಉಪಸ್ಥಿತರಿದ್ದರು

Check Also

ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ರಮೇಶ್ ಕತ್ತಿ…

ಬೆಳಗಾವಿ-ಬೆಳಗಾವಿ ಜಿಲ್ಲೆಯ ಪಾಲಿಗೆ ಬ್ರೇಕಿಂಗ್ ಸುದ್ದಿ ಹೊರಬಿದ್ದಿದೆ.ಬೆಳಗಾವಿ ಡಿಸಿಸಿ ಬ್ಯಾಂಕ್ ನಲ್ಲಿ ನಡೆದ ಮಹತ್ತರ ಬೆಳವಣಿಗೆಯಿಂದಾಗಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ …

Leave a Reply

Your email address will not be published. Required fields are marked *

Sahifa Theme License is not validated, Go to the theme options page to validate the license, You need a single license for each domain name.