Breaking News

ತಂದೆಯ ಪರವಾಗಿ ಫೀಲ್ಡ್ ಗಿಳಿದ ಸುಪುತ್ರ ಯಮಕನಮರ್ಡಿಯಲ್ಲಿ ಎಲ್ಲವೂ ಸುಸೂತ್ರ!!

ಬೆಳಗಾವಿ- ತಂದೆ ಸೈದ್ಧಾಂತಿಕ ತಳಹದಿಯ ನಾಯಕ,ಕೆಪಿಸಿಸಿ ಕಾರ್ಯಾಧ್ಯಕ್ಷ, ತಂದೆ ಪಕ್ಷದ ಹೆಚ್ಚಿನ ಜವಾಬ್ದಾರಿ ನಿಭಾಯಿಸುವಲ್ಲಿ ಹೆಲಿಕಾಪ್ಟರ್ ಮೂಲಕ ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದರೆ,ಇತ್ತ ತಂದೆಯ ಕ್ಷೇತ್ರದಲ್ಲಿ ಮಗ ಫೀಲ್ಡ್ ಗೆ ಇಳಿದು ತಂದೆಯ ಪರವಾಗಿ ಮತಯಾಚಿಸುವ ಮೂಲಕ.ಎಲ್ಲರ ಗಮನ ಸೆಳೆಯುತ್ತಿದ್ದಾರೆ.

ಇದು ಯಮಕನಮರ್ಡಿ ಕ್ಷೇತ್ರದ ಶಾಸಕ ಕೆಪಿಸಿಸಿ ಕಾರ್ಯಾಧ್ಯಕ್ಷ,ಮಾಜಿ ಮಂತ್ರಿ,ಸತೀಶ್ ಜಾರಕಿಹೊಳಿ ಕ್ಷೇತ್ರದ ಪ್ರಸ್ತುತ ಕಹಾನಿ, ಸತೀಶ್ ಜಾರಕಿಹೊಳಿ ಪುತ್ರ ರಾಹುಲ್ ಕಳೆದ ಮೂರ್ನಾಲ್ಕು ವರ್ಷಗಳಿಂದ ಸಾಮಾಜಿಕ ಕ್ಷೇತ್ರದಲ್ಲಿ ಸಕ್ರೀಯವಾಗಿದ್ದು ಯಮಕನಮರ್ಡಿ ಕ್ಷೇತ್ರದಲ್ಲಿ ಈ ಬಾರಿ ತಂದೆ ಸತೀಶ್ ಅವರನ್ನು ಗೆಲ್ಲಿಸುವ ಜವಾಬ್ದಾರಿಯನ್ನು ವಹಿಸಿಕೊಂಡಿದ್ದು ಕ್ಷೇತ್ರದಲ್ಲಿ ಕಾಲಿಗೆ ಚಕ್ರ ಕಟ್ಟಿಕೊಂಡು ಓಡಾಡುತ್ತಿದ್ದಾರೆ.ಕೈಮುಗಿದು ತಂದೆಯ ಪರವಾಗಿ ಮತಯಾಚಿಸುವ ಮೂಲಕ ಮತದಾರರ ಗಮನಸೆಳೆಯುತ್ತಿದ್ದಾರೆ.

ಕಳೆದ ಬಾರಿ ಚುನಾವಣೆಯಲ್ಲಿ ಸತೀಶ್ ಜಾರಕಿಹೊಳಿ ಅವರು ಕ್ಷೇತ್ರದಲ್ಲಿ ಅಷ್ಟೊಂದು ಸಿರೀಯಸ್ ಆಗಿ ಸುತ್ತಾಡದ ಕಾರಣ ಅಲ್ಪ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.ಅವತ್ತಿನ ದಿನವೇ ಜಾಗೃತರಾಗಿದ್ದ ಸತೀಶ್ ಜಾರಕಿಹೊಳಿ ಯಮಕನಮರ್ಡಿ ಕ್ಷೇತ್ರದಲ್ಲಿ ಅಭಿವೃದ್ದಿಯ ಹೊಳೆ ಹರಿಸಿದ್ದಾರೆ.ನಿರಂತರವಾಗಿ ಕ್ಷೇತ್ರದಲ್ಲಿ ಸುತ್ತಾಡಿ ಕ್ಷೇತ್ರದ ಜನರ ಬೇಡಿಕೆಗಳನ್ನು ಈಡೇರಿಸಿದ್ದಾರೆ.ರಾಜಕೀಯ ವಿರೋಧಿಗಳ ಸಮಸ್ಯೆಗಳಿಗೂ ಸ್ಪಂದಿಸಿ ಅವರ ಮನಗೆದ್ದಿದ್ದಾರೆ, ಜೊತೆಗೆ ಪುತ್ರ ರಾಹುಲ್ ಕ್ಷೇತ್ರದ ಜನರ ಜೊತೆ ನಿರಂತರವಾಗಿ ಸಂಪರ್ಕ ಹೊಂದಿದ್ದು ತಂದೆಯ ಜವಾಬ್ದಾರಿಯನ್ನು ಅರ್ಥಪೂರ್ಣವಾಗಿ ನಿಭಾಯಿಸುತ್ತಿದ್ದು ಸುಪುತ್ರನ ಶ್ರಮ ಯಮಕನಮರ್ಡಿ ಕ್ಷೇತ್ರದಲ್ಲಿ ಎಲ್ಲವೂ ಸುಸೂತ್ರವಾಗಿದೆ ಎನ್ನುವ ಸಂಕೇತ ಈಗ ಕ್ಷೇತ್ರದಲ್ಲಿ ಕಾಣುತ್ತಿದೆ.

ರಾಹುಲ್ ಜಾರಕಿಹೊಳಿಯವರು ಯಮಕನಮರಡಿ ಮತಕ್ಷೇತ್ರದ ಕಾಕತಿ ಜಿ.ಪಂ ವ್ಯಾಪ್ತಿಯಲ್ಲಿ ಬರುವ ಸೋನಟ್ಟಿ ಗ್ರಾಮದಲ್ಲಿ ಬೂತ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ನಂತರ ಮಾತನಾಡಿ 15 ವರ್ಷಗಳ ಹಿಂದೆ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದ್ದ ಯಮಕನಮರಡಿ ಕ್ಷೇತ್ರದ ಪ್ರತಿಯೊಂದು ಗ್ರಾಮಗಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಮೂಲಕ ಶಾಸಕರು ಹಾಗೂ ತಂದೆಯವರಾದ ಸತೀಶ ಜಾರಕಿಹೊಳಿ ಅವರು ಅಭಿವೃದ್ಧಿಗೆ ಒತ್ತು ನೀಡಿದ್ದಾರೆ.‌ ಮುಂದೆಯೂ ಅವರ ನೇತೃತ್ವದಲ್ಲಿ ಅಭಿವೃದ್ಧಿಗೆ ಮತ್ತಷ್ಟು ಒತ್ತು ನೀಡಲಾಗುವುದು. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಅವರನ್ನು ಬೆಂಬಲಿಸುವ ಮೂಲಕ ಅವರ ಕೈಗಳನ್ನು ಮತ್ತಷ್ಟು ಬಲಪಡಿಸುವಂತೆ ಜನರಲ್ಲಿ ಮನವಿ ಮಾಡಿದರು
ಇದೆ ವೇಳೆ ಕಾಂಗ್ರೆಸ್ ಗ್ಯಾರಂಟಿ ಕಾರ್ಡುಗಳನ್ನು ಪ್ರತಿಯೊಂದು ಮನೆಗೆ ತಲುಪಿಸಬೇಕು ಎಂದು ಕಾರ್ಯಕರ್ತರಿಗೆ ತಿಳಿಸಿದರು
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು ಮತ್ತು ಮುಖಂಡರು ಯುವಕರು ಮಹಿಳಾ ಕಾರ್ಯಕರ್ತರು ಉಪಸ್ಥಿತರಿದ್ದರು

Check Also

ಸಂಘ ದೋಷ, ಗೆಳೆಯನ ಜೊತೆ ಸೇರಿ ಗಂಡನ ಮರ್ಡರ್ ಮಾಡಲು ಸುಫಾರಿ ಕೊಟ್ಟ ಹೆಂಡತಿ…..!!!

ಬೆಳಗಾವಿ-ಅದೊಂದು ಸುಖ ಸಂಸಾರವಾಗಿತ್ತು ಸಾಲಕ್ಕಾಗಿ ಆ ಸಂಘ ಈ ಸಂಘವೆಂದು ಅಲೆದಾಡಿದ ಮನೆಯ ಯಜಮಾನಿ ಯುವಕನ ಜೊತೆ ಗೆಳೆತನ ಮಾಡಿ …

Leave a Reply

Your email address will not be published. Required fields are marked *