ಬೆಳಗಾವಿ : ಖಾತಾ ವರ್ಗಾವಣೆಗೆ ಹಣ ಬೇಡಿಕೆಯಿಟ್ಟಿದ್ದ ತಹಶಿಲ್ದಾರರ ಹಾಗೂ ಕಚೇರಿ ಅಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.
ಜಿಲ್ಲೆಯ ಚನ್ನಮ್ಮ ಕಿತ್ತೂರು ತಹಶಿಲ್ದಾರರ
ಸೋಮಲಿಂಗಪ್ಪ ಹಾಲಗಿ ಹಾಗೂ ಕಚೇರಿ ಅಧಿಕಾರಿ ಪ್ರಸನ್ನ ಜಿ ಬಲೆಗೆ ಬಿದ್ದ ಅಧಿಕಾರಿಗಳಾಗಿದ್ದಾರೆ. ದೂರುದಾರ ರಾಜೇಂದ್ರ ಇನಾಂದಾರ ಅವರ ತಂದೆ ಹೆಸರಿನಲ್ಲಿದ್ದ 10 ಎಕರೆ ಭೂಮಿಯನ್ನು ರಾಜೇಂದ್ರ ಹೆಸರಿಗೆ ವರ್ಗಾಯಿಸಲು 5 ಲಕ್ಷ ರೂ ಹಣದ ಬೇಡಿಕೆಯಿಟ್ಟದ್ದರು.
ಮೊದಲ ಹಂತದಲ್ಲಿ ಎರಡು ಲಕ್ಷ ರೂ. ಪಡೆಯುತ್ತಿರುವುದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಲಂಚದ ಹಣ, ಚೆಕ್ ಹಾಗೂ ಅಧಿಕಾರಿಗಳನ್ನು ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ