ಬೆಳಗಾವಿ ಪೋಲೀಸರಿಂದ ಕೋಟಿ,ಕೋಟಿ ಕಾರ್ಯಾಚರಣೆ….

 

 

ಬೆಳಗಾವಿ-ಬೆಳಗಾವಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸುವ ಮೂಲಕ ಸೂಕ್ತ ದಾಖಲೆಗಳಿಲ್ಲದೇ ಸರಕು ಸಾಗಾಣಿಕೆ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ₹ 2.73 ಕೋಟಿ ಹಣವನ್ನು ಜಪ್ತಿ ಮಾಡಿದ್ದಾರೆ. ಈ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಮಹಾರಾಷ್ಟ್ರರಾಜ್ಯದ ಸಾಂಗಲಿ ಪಟ್ಟಣದ ಸಚೀನ ಮೇನಕುದುಳೆ ಮತ್ತು ಮಾರುತಿ ಮಾರಗುಡೆ ಬಂಧಿತ ಆರೋಪಿಗಳು. ಮಹಾರಾಷ್ಟ್ರ ರಾಜ್ಯದ ಸಾಂಗಲಿ‌ಯಿಂದ ಹುಬ್ಬಳ್ಳಿ ಕಡೆಗೆ ಬರುತ್ತಿದ್ದ ಸರಕು ಸಾಗಿಸುವ ವಾಹನದಲ್ಲಿ ಕೋಟಿ ಕೋಟಿ ಹಣ ಪತ್ತೆಯಾಗಿದೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ವಾಹನ ಚಾಲಕ ಹಾಗೂ ಹಣವನ್ನು ಮತ್ತು ವಾಹನವನ್ನು ಜಪ್ತಿ ಮಾಡಿಕೊಂಡಿದ್ದಾರೆ.

ಹಣ ಸಾಗಾಟ ಮಾಡುವುದಕ್ಕಾಗಿ ಖದೀಮರು ವಾಹನದಲ್ಲೇ ಕ್ಯಾಬಿನ್ ಮಾಡಿ ಫೈ ಮಾಡಿದ್ದರು. ಈ ಕುರಿತು ಮಾಳಮಾರುತಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Check Also

ತಂದೆಯ ಹುಟ್ಟು ಹಬ್ಬದ ಪ್ರಯುಕ್ತ ಸಿಂಹ ದತ್ತು ಪಡೆದ ರಾಹುಲ್ ಜಾರಕಿಹೊಳಿ

ಬೆಳಗಾವಿ: ಭೂತರಾಮನಹಟ್ಟಿಯಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿರುವ ‘ಬೃಂಗಾ’ ಎಂಬ ಸಿಂಹವನ್ನು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿಯವರ 63ನೇ …

Leave a Reply

Your email address will not be published. Required fields are marked *