ಮಳೆ ಇಲ್ಲದೆ ಸೊರಗಿದ್ದ ಕರ್ನಾಟಕದ ಜನರಿಗೆ ಮಳೆರಾಯ ಕಳೆದ ಒಂದು ತಿಂಗಳಿಂದ ಭಾರಿ ದೊಡ್ಡ ಕೊಡುಗೆ ನೀಡಿದ್ದಾನೆ. ಅದರಲ್ಲೂ ಭರ್ಜರಿ ಮಳೆಗೆ, ಕರ್ನಾಟಕದ ಪ್ರತಿಯೊಂದು ಜಿಲ್ಲೆ ಕೂಡ ತಂಪಾಗಿದೆ. ಹೀಗಿದ್ದಾಗಲೇ ಮುಂಗಾರು ಮಳೆಯ ಮೋಡಗಳು ಕರ್ನಾಟಕದ ಕಡೆಗೆ ಓಡೋಡಿ ಬರುತ್ತಿದ್ದು, ಇನ್ನೇನು ಕೆಲವೇ ಗಂಟೆಗಳಲ್ಲಿ ಕರ್ನಾಟಕ ಪ್ರವೇಶಿಸಲಿವೆ.
ಇನ್ನೇನು ನಾಳೆಯ ಒಳಗಾಗಿ ಮುಂಗಾರು ಮಳೆಯ ಮೋಡಗಳು ಕೇರಳ ರಾಜ್ಯ ಪ್ರವೇಶಿಸುವ ಸಾಧ್ಯತೆ ಇದೆ. ಹಾಗೇ ಮೊದಲು ಕೇರಳಕ್ಕೆ ಪ್ರವೇಶ ಮಾಡಿದ ನಂತರ ಕರ್ನಾಟಕದ ಕಡೆಗೆ ಮುಂಗಾರು ಮಾರುತಗಳು ಹೆಜ್ಜೆ ಹಾಕಲಿವೆ. ಈ ಮೂಲಕ ಜೂನ್ 1ರ ಬಳಿಕ ಕರ್ನಾಟಕದ ಕರಾವಳಿ ಭಾಗಕ್ಕೆ ಮುಂಗಾರು ಮಾರುತಗಳು ಎಂಟ್ರಿ ಕೊಡಲಿವೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ