ಬೆಂಗಳೂರು-ಆಮ್ ಆದ್ಮಿ ಪಕ್ಷದಿಂದ ಮೂರನೇ ಪಟ್ಟಿ ಬಿಡುಗಡೆಯಾಗಿದ್ದು ರಾಜ್ಯ 28 ಕ್ಷೇತ್ರಗಳಿಗೆ ಅಭ್ಯರ್ಥಿ ಪಟ್ಟಿ ಬಿಡುಗಡೆ ಮಾಡಿದೆ.
ಬೆಳಗಾವಿ ನಿಪ್ಪಾಣಿ ಮತಕ್ಷೇತ್ರದಿಂದ ರಾಜೇಶ ಅಣ್ಣಾಸಾಹೇಬ ಬಸವಣ್ಣ, ಬೆಳಗಾವಿ ಉತ್ತರ ಮತಕ್ಷೇತ್ರದಿಂದ ರಾಜಕುಮಾರ ಟೋಪಣ್ಣವರ ಹಾಗೂ ಸವದತ್ತಿ ಮತಕ್ಷೇತ್ರದಿಂದ ಬಾಪುಗೌಡ ಪಾಟೀಲ ಅವರಿಗೆ ಟಿಕೆಟ್ ಘೋಷಣೆ ಮಾಡಿದೆ.
ಬೆಳಗಾವಿ ಉತ್ತರ ಮತಕ್ಷೇತ್ರದಿಂದ ಆಮ್ ಆದ್ಮಿ ಪಕ್ಷ ಲಿಂಗಾಯತ ಸಮಾಜದ ಯುವ ನಾಯಕ ರಾಜೀವ ಟೋಪಣ್ಣವರ ಅವರಿಗೆ ಟಿಕೆಟ್ ನೀಡಿದೆ.ಲಿಂಗಾಯತ ಸಮಾಜ ಇವರ ಬೆಂಬಲಕ್ಕೆ ನಿಲ್ಲುವ ಎಲ್ಲ ಸಾಧ್ಯತೆಗಳಿವೆ.
ಯಾವ ಪಕ್ಷ ಲಿಂಗಾಯತ ಅಭ್ಯರ್ಥಿಗೆ ಟಿಕೆಟ್ ಕೊಡುತ್ತದೆ. ಆ ಪಕ್ಷಕ್ಕೆ ನಮ್ಮ ಬೆಂಬಲ ಇದೆ.ಎಂದು ಲಿಂಗಾಯತ ಸಂಘಟನೆಗಳ ನಾಯಕರು ಘೋಷಣೆ ಮಾಡಿದ್ದನ್ನು ನಾವಿಲ್ಲಿ ಸ್ಮರಿಸಬಹುದಾಗಿದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ