Breaking News

ವಿಕಲಚೇತನರಿಗೆ ಕಿಟ್ ಕೊಟ್ಟ ಕಾಂಗ್ರೆಸ್ ಮುಖಂಡ ರಾಜೇಂದ್ರ ಪಾಟೀಲ

ಬೆಳಗಾವಿ ಜಿಲ್ಲಾ ಕಾಂಗ್ರೆಸ್ ನಿಂದ ವಿಕಲಚೇತನರಿಗೆ ಆಹಾರ ಕಿಟ್ ವಿತರಣೆ

ಬೆಳಗಾವಿ: ಕೊರೊನಾದಿಂದ ತೊಂದರೆಗೀಡಾಗಿದ್ದ ವಿಕಲಚೇತನರಿಗೆ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಇಲ್ಲಿನ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಆಹಾರ ಕಿಟ್ ವಿತರಣೆ ಮಾಡಿದರು.

ನಂತರ ಮಾತನಾಡಿದ ಅವರು, ಕೊರೊನಾ ಲಾಕ್ ಡೌನ್ ನಿಂದ ಎಲ್ಲ ವರ್ಗದ ಜನರಿಗೂ ಸಮಸ್ಯೆಯಾಗಿದೆ. ಅದೇ ರೀತಿ ವಿಕಲಚೇತನರು ಕೂಡ ಸಾಕಷ್ಟು ಸಮಸ್ಯೆ ಅನುಭವಿಸುತ್ತಿದ್ದಾರೆ. ಹೀಗಾಗಿ, ಕಾಂಗ್ರೆಸ್ ವತಿಯಿಂದ ವಿಕಲಚೇತನರಿಗೆ ಆಹಾರ ಕಿಟ್ ವಿತರಣೆ ಮಾಡಿ, ನೆರವು ಕಲ್ಪಿಸಲಾಗಿದೆ ಎಂದು ಹೇಳಿದರು.

ಕೊರೊನಾ ಹಿನ್ನೆಲೆಯಲ್ಲಿ ಆರ್ಥಿಕವಾಗಿ ತೊಂದರೆಗೀಡಾಗಿದ್ದು, ಸಹಾಯ ಒದಗಿಸುವಂತೆ ಜಿಲ್ಲಾ ವಿಕಲಚೇತನರ ಸಂಘದ ಸದಸ್ಯರು ಕೆಲ ದಿನಗಳ ಹಿಂದೆ ಜಿಲ್ಲಾ ಕಾಂಗ್ರೆಸ್ ಸಮಿತಿಗೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕಿಸಾನ್ ಕಾಂಗ್ರೆಸ್ ರಾಜ್ಯ ಘಟಕದ ಸಂಚಾಲಕ ರಾಜೇಂದ್ರ ಪಾಟೀಲ ಅವರ ಪ್ರಾಯೋಜಕತ್ವದಲ್ಲಿ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಆಹಾರ ಕಿಟ್ ವಿತರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವಿನಯ ನಾವಲಗಟ್ಟಿ, ಚಿಕ್ಕೋಡಿ ಜಿಲ್ಲಾ ಸಮಿತಿ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಕಿಸಾನ್ ಕಾಂಗ್ರೆಸ್ ರಾಜ್ಯ ಘಟಕದ ಸಂಚಾಲಕ ರಾಜೇಂದ್ರ ಪಾಟೀಲ, ಮಾಜಿ ಸಚಿವ ವೀರಕುಮಾರ ಪಾಟೀಲ, ಎಐಸಿಸಿ ಗೋವಾ ವೀಕ್ಷಕ ಸುನೀಲ ಹನುಮಣ್ಣವರ, ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ (ಆಡಳಿತ) ಪ್ರದೀಪ ಎಂ.ಜೆ. ಸೇರಿ ಇನ್ನಿತರರು ಇದ್ದರು.

Check Also

ಮಂತ್ರಿಗಿರಿ ರೇಸ್ ನಲ್ಲಿ ಬೆಳಗಾವಿಯ ಜಾತ್ಯಾತೀತ ಕುಟುಂಬದ, ಶಾಸಕ!

ಬೆಳಗಾವಿ ಯಾರಿಗೆ ಸೇರಿದ್ದು ಎಂದು ವಿಚಾರಣೆ ಮಾಡಲು ಕೇಂದ್ರ ಸರ್ಕಾರಗಳು ರಚಿಸಿದ ಫಜಲ್ ಅಲಿ,ಆಯೋಗ,ಮಹಾಜನ್ ಆಯೋಗ ಬೆಳಗಾವಿಗೆ ಬಂದಾಗ ಎಲ್ಲ …

Leave a Reply

Your email address will not be published. Required fields are marked *