ಬೆಳಗಾವಿ- ಬೆಳಗಾವಿ ನಗರದ ಟ್ರಾಫಿಕ್ ಸಮಸ್ಯೆಗೆ ಜಿಲ್ಲಾ ಉಸ್ತುವಾರಿ,ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಸ್ಪಂದಿಸಿದ್ದು ನಗರದಲ್ಲಿ ಫ್ಲೈ ಓವರ್ ನಿರ್ಮಾಣಕ್ಕೆ ಮೊದಲ ಸಭೆಯಲ್ಲಿ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.
ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಫ್ಲೈ ಓವರ್ ನಿರ್ಮಾಣಕ್ಕೆ ನೀಲನಕ್ಷೆ ಸಿದ್ಧಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಸಭೆ ಮುಗಿಸಿ,ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ರಾಜು ಸೇಠ. ಬೆಳಗಾವಿ ಡಿಸಿ ನಿತೇಶ್ ಪಾಟೀಲ್,ನಗರ ಪೋಲಿಸ್ ಆಯುಕ್ತ ಡಾ.ಬೋರಲಿಂಗಯ್ಯ ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ನೇರವಾಗಿ ಸ್ಥಳ ಪರಶೀಲನೆ ಮಾಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯಿಂದ ಬೆಳಗಾವಿ ನಗರ ಪ್ರವೇಶಿಸುವ ಮಾರ್ಗದಲ್ಲಿ ಫ್ಲೈ ಓವರ್ ನಿರ್ಮಿಸುವ ಪ್ರಸ್ತಾವಿತ ಯೋಜನೆ ಹಾಗೂ ಸರ್ವಿಸ್ ರಸ್ತೆಗೆ ಸಂಬಂಧಿಸಿದಂತೆ ಶಾಸಕ ಆಸಿಫ್(ರಾಜು) ಸೇಠ್, ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಅಧಿಕಾರಿಗಳ ಜತೆ ಮಂಗಳವಾರ (ಜೂ.13) ಗಾಂಧೀನಗರ, ಮಹಾಂತೇಶ ನಗರದ ಬಳಿ ಸ್ಥಳ ಪರಿಶೀಲನೆ ನಡೆಸಿದರು. ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಇಲಾಖೆ ಮತ್ತು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ