ಸರ್ದಾರ್ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಿ ವಿಶೇಷ ಬಹುಮಾನ ಘೋಷಣೆ ಮಾಡಿದ ಶಾಸಕ ರಾಜು ಸೇಠ..!
ಬೆಳಗಾವಿ :
ಬೆಳಗಾವಿ ಉತ್ತರ ಮತಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜು ಸೇಠ ಅವರು ಬೆಳಗಾವಿಯ 150 ವರ್ಷಕ್ಕೂ ಹಳೆಯ ಸರದಾರ್ಸ್ ಪ್ರೌಢಶಾಲೆಗೆ ಭೇಟಿ ನೀಡಿ ಮಕ್ಕಳಿಗೆ ವಿಶೇಷ ಸೌಲಭ್ಯ ನೀಡುವ ಭರವಸೆ ನೀಡಿದರು.
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿಶೇಷ ಬಹುಮಾನ ಘೋಷಣೆ ಮಾಡಿದ ಅವರು ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ. 96 ರಷ್ಟು ಅಂಕಗಳಿಸುವ ವಿದ್ಯಾರ್ಥಿಗಳಿಗೆ ರೂಪಾಯಿ 25,000 ನೀಡಲಾಗುವುದು ಎಂದು ಅವರು ತಿಳಿಸಿದರು.
ಸರ್ದಾರ್ ಪ್ರೌಢಶಾಲೆಗೆ ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ವಿದ್ಯಾಭ್ಯಾಸ ಮಾಡುತ್ತಾರೆ ಅವರು ಉತ್ತಮವಾಗಿ ಓದಿ ಸಾಧನೆ ಮಾಡಬೇಕು ಎಂದು
ಹೇಳಿದರು.
ಸರ್ದಾರ್ ಪ್ರೌಢಶಾಲೆಯಲ್ಲಿ ಓದಿದ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. ಈಗ ಓದುತ್ತಿರುವ ವಿದ್ಯಾರ್ಥಿಗಳು ಉತ್ತಮ ಗುರಿ ಇಟ್ಟುಕೊಂಡು ಓದಬೇಕು ಎಂದು ಅವರು ತಿಳಿಸಿದರು.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ