Breaking News

ತೆಲಂಗಾಣದಲ್ಲಿ ರಾಜುಸೇಠ ಭರ್ಜರಿ ಪ್ರಚಾರ…!

ಬೆಳಗಾವಿ- ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ರಾಜು ಸೇಠ ಅವರು ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಭರ್ಜರಿ ಪ್ರಚಾರ ನಡೆಸಿದ್ದಾರೆ.

ತೆಲಂಗಾಣದ ಭೊಧಾನ್ ವಿಧಾನಸಭಾ ಕ್ಷೇತ್ರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಂಚರಿಸಿ ಸ್ಥಳೀಯ ನಾಯಕರ ಜೊತೆ ಚರ್ಚಿಸಿ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳಿಂದ ಜನರಿಗೆ ಆಗಿರುವ ಲಾಭಗಳ ಬಗ್ಗೆ ತಿಳಿಸಿ ರಾಜು ಸೇಠ ಕಾಂಗ್ರೆಸ್ ಪರವಾಗಿ ಮತಯಾಚಿಸಿದರು.

ಮೂರು ದಿನಗಳ ಕಾಲ ತೆಲಂಗಾಣದಲ್ಲಿ ಠಿಖಾನಿ ಹೂಡಿ, ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಮತ್ತು ನಾಯಕರ ಜೊತೆ ಸರಣಿ ಸಭೆಗಳನ್ನು ಮಾಡಿ,ಕಾಂಗ್ರೆಸ್ ಗೆಲುವಿಗಾಗಿ ಶ್ರಮಿಸಿದರು.ಎಐಸಿಸಿ ನಿರ್ದೇಶನದಂತೆ ಪಕ್ಷದ ನಾಯಕರು ನೀಡಿದ ಜವಾಬ್ದಾರಿಯನ್ನು ಶಾಸಕ ರಾಜುಸೇಠ ನಿಭಾಯಿಸಿದರು.

Check Also

ವೀಕ್ಲಿ ಮ್ಯಾರೇಜ್,ಇದು ಲಕ್ಷ ಲಕ್ಷ ರೂಗಳ ಪ್ಯಾಕೇಜ್ ಹುಡುಗರ ಲೈಫ್ ಡ್ಯಾಮೇಜ್ …..!!!

ಬೆಳಗಾವಿ – ಹೆಣ್ಣು ಮಕ್ಕಳ ಮಾರಾಟ ಆಯ್ತು,ಹನಿ ಟ್ರ್ಯಾಪ್ ಗೋಳಾಟ ಆಯ್ತು ಈಗ ಹೊಸದೊಂದ ಆಟ ಶುರುವಾಗಿದೆ ಇದು ಮದ್ಯ …

Leave a Reply

Your email address will not be published. Required fields are marked *