ಬೆಳಗಾವಿ- ನಾಳೆ ಸೋಮವಾರ ಬೆಳಗಾವಿಯಲ್ಲಿ ಬಿಜೆಪಿ ನಾಯಕರು ಬೆಳಗಾವಿಗೆ ಆಗಮಿಸುತ್ತಿದ್ದಾರೆ ಜಿಲ್ಲಾ ಮಂತ್ರಿ ರಮೇಶ ಜಾರಕಿಹೊಳಿ ಮತ್ತು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷೀ ಹೆಬ್ಬಾಳರ ಅವರ ರಾಜಿನಾಮೆ ಗೆ ಒತ್ತಯಿಸಿ ಬೃಹತ್ತ ಪ್ರತಿಭಟನೆ ನಡೆಯಲಿದೆ
ರಮೇಶ ಜಾರಕಿಹೊಳಿ ಮತ್ತು ಲಕ್ಷ್ಮೀ ಹೆಬ್ಬಾಳಕರ ಅವರ ಮನೆಯಲ್ಲಿ ನೂರು ಕೋಟಿಗೂ ಹೆಚ್ಚಿನ ಆಕ್ರಮ ಸಂಪತ್ತು ಪತ್ತೆಯಾಗಿದೆ ಅದಕ್ಕಾಗಿ ಇಬ್ಬರೂ ರಾಜಿನಾಮೆ ಕೊಡಬೇಕು ಎಂದು ಆಗ್ರಹಿಸಿ ಬಿಜೆಪಿ ನಾಯಕ ಈಶ್ವರಪ್ಪ ಮತ್ತುಜಗದೀಶ ಶೆಟ್ಟರ್ ಅವರ ನೇತ್ರತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಯಲಿದೆ
ಸೋಮವಾರದಂದೇ ಬೆಳಗಾವಿ ಜಿಲ್ಲಾ ಪಂಚಾಯತಿಯಲ್ಲಿ ಜಿಲ್ಲಾ ಮಂತ್ರಿ ರಮೇಶ ಜಾರಕಿಹೊಳಿ ಅವರು ಕೆಡಿಪಿ ಸಭೆ ನಡೆಸಲಿದ್ದಾರೆ
ಜಿಲ್ಲೆಯಲ್ಲಿ ಭೀಕರ ಬರಗಾಲವಿದ್ದು ಸೋಮವಾರ ನಡೆಯಲಿರುವ ಕೆಡಿಪಿ ಸಭೆಯಲ್ಲಿ ಬರ ನಿರ್ವಣೆಯ ಕುರಿತು ಚರ್ಚೆ ನಡೆಯಲಿದೆ ಜೊತೆಗೆ ಮಹಾರಾಷ್ರದ ಕೋಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುವಂತೆ ಆಗ್ರಹಿಸಿ ಮಹಾರಾಷ್ಟ್ರಕ್ಕೆ ನಿಯೋಗ ಕೊಂಡೊಯ್ಯುವ ದಿನಾಂಕ ಕೆಡಿಪಿ ಸಭೆಯಲ್ಲಿ ನಿರ್ಧಾರವಾಗಲಿದೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ