ಬೆಳಗಾವಿ- ನನ್ನ ಮನೆಯ ಮೇಲೆ ದಾಳಿ ಮಾಡಿದ ಸಂಧರ್ಭದಲ್ಲಿ ಮೂರು ಲಕ್ಷ ಏಳು ಸಾವಿರ ಹಣ ಸಿಕ್ಕಿದೆ ಇದಕ್ಕಿಂತ ಹೆಚ್ಚಿನ ಹಣ ಸಿಕ್ಕಿರುವದು ಸಾಭೀತಾದರೆ ನಾನು ಯಡಿಯೂರಪ್ಪನ ಮನೆಯಲ್ಲಿ ಜೀತದ ಆಳಾಗಿ ಕೆಲಸ ಮಾಡುವೆ ಎಂದು ರಮೇಶ ಜಾರಕಿಹೊಳಿ ಹೇಳಿದ್ದಾರೆ
ಕೆಡಿಪಿ ಸಭೆಯ ಬಳಿಕ ಮಾದ್ಯಮಗಳ ಜೊತೆ ಮಾತನಾಡಿದ ಅವರು ಐಟಿ ದಾಳಿಯ ಕುರಿತು ಮಾದ್ಯಮಗಳ ಜೊತೆ ಮಾತನಾಡಬಾರದು ಎಂದು ನಮ್ಮ ವಕೀಲರು ಸೂಚನೆ ನೀಡಿದ್ದಾರೆ ಆದಾಗ್ಯು ನಾನು ಈ ಬಗ್ಗೆ ಪ್ರತಿಕ್ರಿಯೆ ನೀಡುತ್ತದ್ದೇನೆ ಎಂದರು ನನ್ನ ಹೇಳಿಕೆಗೆ ನಾನು ಈಗಲೂ ಭದ್ಧನಾಗಿದ್ದೇನೆ ಎಂದರು
ಜಿಲ್ಲೆಯಲ್ಲಿ ಭೀಕರ ಬರಗಾಲ ಇದೆ ಅದಕ್ಕಾಗಿ ಪ್ರತಿ ಹದಿನೈದು ದಿನಕ್ಕೊಮ್ಮೆ ಅಧಿಕಾರಿಗಳ ಸಭೆ ಮಾಡುತ್ತೇವೆ ನೀರು ಮೇವಿಗೆ ಕೊರತೆ ಆಗದಂತೆ ನೋಡಿಕೊಳ್ಳುತ್ತೇವೆ ಮಹಾರಾಷ್ಟ್ರದಿಂದ ಕೃಷ್ಣಾ ನದಿಗೆ ನೀರು ಬಿಡುವ ವಿಷಯದಲ್ಲಿ ಕೂಡಲೇ ರಾಜ್ಯದಿಂದ ಮಹಾರಾಷ್ಟ್ರಕ್ಕೆ ನಿಯೋಗ ಕೊಂಡೊಯ್ಯುತ್ತೇವೆ ಎಂದು ರಮೇಶ ಜಾರಕಿಹೊಳಿ ತಿಳಿಸಿದರು
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ