ಬೆಳಗಾವಿ ಜಿಲ್ಲೆಯ ರಸ್ತೆ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನಾ ಸಭೆಯು ಮಾನ್ಯ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ನಡೆಯಿತು.
PRAMCS, SHDP ಮತ್ತು ಲೋಕೋಪಯೋಗಿ ಇಲಾಖೆಯ ಉನ್ನತ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡು, ನಡೆಯುತ್ತಿರುವ ರಸ್ತೆ ಕಾಮಗಾರಿಗಳು ಮತ್ತು ಈಗ ಕೈಗೊಳ್ಳಬೇಕಾದ ಕಾಮಗಾರಿಗಳ ಮಂಜೂರಾತಿ ಕುರಿತು ಚರ್ಚಿಸಿದರು. ಸದರಿ ಕಾಮಗಾರಿಗಳನ್ನು ಕಾಲಮಿತಿಯೊಳಗೆ ತುರ್ತಾಗಿ ಪೂರ್ಣಗೊಳಿಸಲು ಸಚಿವರು ಸೂಚಿಸಿದರು. ಸಭೆಯಲ್ಲಿ, ಲೋಕೋಪಯೋಗಿ ಇಲಾಖೆಯ ಕಾರ್ಯದರ್ಶಿ ಗುರುಪ್ರಸಾದ್, SHDP ಮುಖ್ಯ ಯೋಜನಾಧಿಕಾರಿ ಪ್ರಭಾಕರ ಚೀಣಿ, ಮುಖ್ಯ ಅಭಿಯಂತರರಾದ ಬಿಕೆ ಪವಿತ್ರ ಮುಂತಾದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ