ಬೆಳಗಾವಿ, ದೇಶಾದ್ಯಂತ ಕೊರೋನಾ ವೈರಸ್ ನ ಭೀತಿ ಎದುರಾಗಿರುವ ಈ ಸಂದರ್ಭದಲ್ಲಿ ಸನ್ಮಾನ್ಯ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ನಾಳೆ, ಮಾರ್ಚ್ 22ರ ಭಾನುವಾರದಂದು ಜನತಾ ಕರ್ಫ್ಯೂ ಆಚರಿಸುವಂತೆ ಕರೆ ನೀಡಿದ್ದು, ಭಾರತದ ಒಬ್ಬ ಜಾಗೃತ ಪ್ರಜೆಯಾಗಿ, ಸಂಕಲ್ಪ ಹಾಗೂ ಸಂಯಯದಿಂದ ಈ ’ಜನತಾ ಕರ್ಫ್ಯೂ’ ಪಾಲಿಸುವದು ನಮ್ಮೆಲ್ಲರ ಆದ್ಯ ಕರ್ತವ್ಯ. ನಾಳೆ ಸ್ವಯಂ ಪ್ರೇರಣೆಯಿಂದ ನಡೆಯಲಿರುವ ’ಜನತಾ ಕರ್ಫ್ಯೂ’ವನ್ನು ಬೆಂಬಲಿಸೋಣ ಎಂದು ಮಾನ್ಯ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿಯವರು ಜನತೆಗೆ ಕರೆ ನೀಡಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು,ಈ ಸಂದಿಗ್ಧ ಪರಿಸ್ಥಿತಿಯನ್ನು ಎಲ್ಲರೂ ಒಟ್ಟಾಗಿ, ಧೈರ್ಯದಿಂದ ಎದುರಿಸೋಣ ಮತ್ತು ಭಾರತವನ್ನು ಕೊರೋನಾ ಮುಕ್ತ ರಾಷ್ಟ್ರವಾಗಿ ಮಾಡೋಣ ಎಂದು ತಿಳಿಸಿದ್ದಾರೆ.
ನಾವು ಸ್ವಸ್ಥರಾಗಿದ್ದರೆ, ರಾಷ್ಟ್ರವು ಸ್ವಸ್ಥವಾಗಲಿದೆ. ಕೊರೋನಾ ವೈರಸ್ ತಡೆಗೆ ಆಂತರಿಕ ಸಮುದಾಯ ಹರಡುವಿಕೆಯಿಂದ ಅದನ್ನು ತಡೆಗಟ್ಟುವುದು ನಮ್ಮ ಕರ್ತವ್ಯ. ಈ ಹಂತದಲ್ಲಿ ‘ಸಾಮಾಜಿಕ ಅಂತರ ‘ ತುಂಬಾ ಪ್ರಾಮುಖ್ಯ. ಆದ್ದರಿಂದ ಜನತಾ ಕರ್ಫ್ಯೂ ಬೆಂಬಲಿಸಬೇಕು ಎಂದು ಸಚಿವ ರಮೇಶ್ ಜಾರಕಿಹೊಳಿ ಮನವಿ ಮಾಡಿಕೊಂಡಿದ್ದಾರೆ.
****
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ