Breaking News

ಬೆಂಗಳೂರಲ್ಲಿ ನೀರಾವರಿ ಮಂತ್ರಿಗಳ ಮೀಟೀಂಗ್…..

ಬೆಂಗಳೂರು-
ರಾಜ್ಯದ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಬೇಕಾಗಿರುವ ವಿಸ್ತೃತ ಯೋಜನಾ ವರದಿಗಳನ್ನು ಮತ್ತು ದಾಖಲಾತಿಗಳನ್ನು ತುರ್ತಾಗಿ ಸಿದ್ದಪಡಿಸಿಕೊಳ್ಳುವಂತೆ *ಜಲಸಂಪನ್ಮೂಲ ಸಚಿವ ರಾದ ಶ್ರೀ ರಮೇಶ್ ಜಾರಕಿಹೊಳಿ‌* ಅವರು ಸೂಚಿಸಿದ್ದಾರೆ.
ವಿಧಾನಸೌಧದ ಜಲಸಂಪನ್ಮೂಲ ಸಚಿವರ ಕಛೇರಿಯಲ್ಲಿ ನಡೆದ ನೀರಾವರಿ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಮತ್ತು ಜಲಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸಚಿವರು, ಬೇಸಿಗೆಯಲ್ಲಿ ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ತೊಂದರೆ ಆಗಬಾರದು. ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸಚಿವರು ಸೂಚಿಸಿದರು.
ಎಲ್ಲೆಡೆ ಕೊರೋನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಮಾನ್ಯ ಪ್ರಧಾನಮಂತ್ರಿಗಳ ಕರೆಯಂತೆ ಸಾಮಾಜಿಕ ಅಂತರ ಕಾಯ್ದುಕೊಂಡು, *ಆರೋಗ್ಯ ಸೇತು ಮೊಬೈಲ್ ಆ್ಯಪ್* ಡೌನ್‌ಲೋಡ್ ಮಾಡಿಕೊಳ್ಳಲು ಇಲಾಖೆಯ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.
ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜನರಿಗೆ ಅಗತ್ಯ ಮಾಹಿತಿಗಳನ್ನು ತಿಳಿಸುವ ಕೆಲಸ ಮಾಡಿ ಸಾಮಾಜಿಕ ಜವಾಬ್ದಾರಿ ಮೆರೆಯಬೇಕು ಎಂದು ಸಚಿವರು ಕರೆ‌ ನೀಡಿದರು.
ಲಾಕ್ ಡೌನ್ ಮುಗಿದ ಬಳಿಕ ತುರ್ತಾಗಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು. ನೀರು ನಿರ್ವಹಣೆ ಮತ್ತು ರಾಜ್ಯದ ಎಲ್ಲಾ ನೀರಾವರಿ ಯೋಜನೆಗಳ ಪ್ರಗತಿ ಬಗ್ಗೆ ಯಾವುದೇ ಸಂದರ್ಭದಲ್ಲಿ ಮಾಹಿತಿ ದೊರೆಯುವಂತೆ ಇರಬೇಕು. ಈ‌‌ ಪ್ರಸಕ್ತ ವರ್ಷದಲ್ಲಿ ಪ್ರಾರಂಭಿಸಲಾಗುವ ಯೋಜನೆಗಳ *ಡಿಪಿಆರ್ ವರದಿಗಳು* ಮತ್ತು ದಾಖಲಾತಿ ಪತ್ರಗಳನ್ನು ತುರ್ತಾಗಿ ಸಿದ್ದಪಡಿಸಿ ಕೊಳ್ಳಲು ಅಧಿಕಾರಿಗಳಿಗೆ *ಜಲಸಂಪನ್ಮೂಲ ಸಚಿವರು* ಸೂಚಿಸಿದರು.

Check Also

ವೆಲ್ಡಿಂಗ್ ಕಾರ್ಮಿಕನ ಮಗ ಲಕ್ ಪತಿ ಆಗಿದ್ದು ಹೇಗೆ ಎಲ್ಲಿ ಗೊತ್ತಾ…??

ಬಾಗಲಕೋಟೆ-ಸಾಧನೆಗೆ ಬಡತನ ಎಂದಿಗೂ ಅಡ್ಡಿಯಾಗದು. ಸತತ ಪ್ರಯತ್ನ, ಪರಿಶ್ರಮವಿದ್ದರೆ ಬೌದ್ಧಿಕ ಮಟ್ಟ ವೃದ್ಧಿಸಿಕೊಂಡು, ಎಂಥವರು ಸಾಧನೆ ಮಾಡಬಹುದು. ಜ್ಞಾನಕ್ಕೆ ಬೆಲೆ …

Leave a Reply

Your email address will not be published. Required fields are marked *