ಬೆಳಗಾವಿ- ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿ ಗ್ರಾಮಸ್ಥರಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಶುಕ್ರವಾರ ದಿನಸಿ ಕಿಟ್ ಗಳನ್ನು ವಿತರಿಸಿದರು.
ರೈಲ್ವೆ ಇಲಾಖೆಯ ರಾಜ್ಯ ಸಚಿವರಾದ ಸುರೇಶ್ ಅಂಗಡಿ, ಶಾಸಕರಾದ ಲಕ್ಷ್ಮೀ ಹೆಬ್ಬಾಳಕರ್, ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಮಹೇಶ್ ಕುಮಠಳ್ಳಿ, ಜಿಲ್ಲಾಧಿಕಾರಿ ಡಾ.ಎಸ್. ಬಿ.ಬೊಮ್ಮನಹಳ್ಳಿ ಮತ್ತಿತರರು ಉಪಸ್ಥಿತರಿದ್ದರು.
ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಳಿಕ ಮೊದಲ ಬಾರಿಗೆ ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೆ ಭೇಟಿ ನೀಡಿದ ರಮೇಶ್ ಜಾರಕಿಹೊಳಿ ಹಿರೇಬಾಗೇವಾಡಿ ಗ್ರಾಮದ ಕಾರ್ಮಿಕರಿಗೆ ಸರ್ಕಾರದ ವತಿಯಿಂದ ಸಿದ್ಧಪಡಿಸಲಾದ ಆಹಾರ ಸಾಮುಗ್ರಿಗಳ ಕಿಟ್ ವಿತರಣೆ ಮಾಡಿದರು.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ