Breaking News

ಸೋಮವಾರ ಬೆಳಗಾವಿಯಲ್ಲಿ ನಡೆಯುವ ಸಭೆಯಲ್ಲಿ ಲಾಕ್ ಡೌನ್ ನಿರ್ಧಾರ ಹೊರಬೀಳಬಹುದೇ ?

ಭಳಗಾವಿ- ಸೋಮವಾರ ಬೆಳಗಾವಿಗೆ ಜಿಲ್ಲಾ ಉಸ್ತುವಾರಿ ಸಚಿವ ಬೆಳಗಾವಿಯಲ್ಲಿ ಕೊರೋನಾ ಕುರಿತು ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳ ಕುರಿತು ಪ್ರಗತಿ ಪರಶೀಲನೆ ಮಾಡಲಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಸೊಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.ಬೆಳಗಾವಿ ಜಿಲ್ಲೆಯ ಐದು ತಾಲ್ಲೂಕುಗಳಲ್ಲಿ ಈಗಾಗಲೇ ಲಾಕ್ ಡೌನ್ ಜಾರಿಯಲ್ಲಿದೆ.ಇಡೀ ಜಿಲ್ಲೆಯಲ್ಲಿ ಲಾಕ್ ಡೌನ್ ಮಾಡಬೇಕು ಎನ್ನುವ ಕೂಗು ಕೇಳಿಬಂದಿದೆ.

ಬೆಳಗಾವಿ ನಗರದ ಗಲ್ಲಿ,ಗಲ್ಲಿಗೆ ಮಹಾಮಾರಿ ಕೊರೋನಾ ನುಗ್ಗುತ್ತಿದೆ ಬಹುತೇಕ ನಗರದ ಎಲ್ಲ ಪ್ರದೇಶಗಳಿಗೂ ಕೊರೋನಾ ಹಬ್ಬಿದೆ.ದಿನನಿತ್ಯ ಸಾವು ನೋವು ಸಂಭವಿಸುತ್ತಲೇ ಇದೆ.

ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಸೋಮವಾರ ಬೆಳಗಾವಿ ನಗರದಲ್ಲಿ ಮಹತ್ವದ ಸಭೆ ನಡೆಸಲಿದ್ದಾರೆ,ಈ ಸಭೆಯಲ್ಲಿ,ಸಂಪೂರ್ಣ ಬೆಳಗಾವಿ ಜಿಲ್ಲೆಯನ್ನು ಲಾಕ್ ಡೌನ್ ಮಾಡುವ ನಿರ್ಧಾರ ಕೈಗೊಳ್ಳಬಹುದೇ ಎನ್ನುವ ನಿರೀಕ್ಷೆ ಎಲ್ಲರಿಗೂ ಇದೆ.

ಬೆಳಗಾವಿ ಜಿಲ್ಲೆಯಲ್ಲಿ ಪರಿಸ್ಥಿತಿ ವಿಕೋಪಕ್ಕೆ ಹೋಗಿದೆ,ಕೊರೋನಾ ಭೀತಿ ಹೆಚ್ಚಾಗಿದೆ.ಖಾಸಗಿ ಆಸ್ಪತ್ರೆಗಳಲ್ಲಿ ಸಣ್ಣ ಪುಟ್ಟ ಕಾಯಿಲೆಗಳಿಗೆ ಚಿಕಿತ್ಸೆ ಸಿಗದೇ ಜನ ಪರದಾಡುತ್ತಿದ್ದಾರೆ,ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ನಡೆಯುತ್ತಿರುವ ಘಟನೆಗಳು ಬೆಳಗಾವಿ ಜಿಲ್ಲೆಯ ಮಾನ ಕಳೆಯುತ್ತಿವೆ,ಅಥಣಿಯಲ್ಲಿ ತಳ್ಳುವ ಗಾಡಿಯಲ್ಲಿ ಶವ ಸಾಗಿಸಿದ ಘಟನೆ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ.

ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅವರು ಸೋಮವಾರ ನಡೆಯುವ ಸಭೆಯಲ್ಲಿ ಸಾರ್ವಜನಿಕರು ಅನುಭವಿಸುತ್ತಿರುವ ಸಂಸ್ಯೆಗಳಿಗೆ ಪರಿಹಾರ ಕಂಡು ಹಿಡಿಯಬೇಕು,ಜಿಲ್ಲಾ ಆಸ್ಪತ್ರೆಯ ವ್ಯೆವಸ್ಥೆಯನ್ನು,ಖುದ್ದಾಗಿ ಪರಶೀಲನೆ ಮಾಡಬೇಕು,ಎನ್ನುವದು ಎಲ್ಲರ ಒತ್ತಾಯವಾಗಿದೆ.

Check Also

ಇಂದು ಶ್ರೀ ರೇಣುಕಾ ಯಲ್ಲಮ್ಮದೇವಿ ದರ್ಶನ,ನಾಳೆ ಬೆಳಗಾವಿ ದರ್ಶನ….!!!

ಬೆಳಗಾವಿ – ಮಾಜಿ ಸಚಿವ ಹಾಲಿ ವಿಧಾನಪರಿಷತ್ತ್ ಸದಸ್ಯ ಸಿಟಿ ರವಿ ಇಂದು ಸಂಜೆ ಸವದತ್ತಿ ಯಲ್ಲಮ್ಮದೇವಿಯ ದರ್ಶನ ಪಡೆದು …

Leave a Reply

Your email address will not be published. Required fields are marked *