Breaking News

ನೀರಾವರಿ ಇಲಾಖೆಯಿಂದ ಬೆಳಗಾವಿ ಜಿಲ್ಲೆಗೆ ಬಂಪರ್ ಲಾಟರಿ….!

ಬೆಳಗಾವಿ ಜಿಲ್ಲೆಗೆ ಹದಿನೆಂಟು ನೀರಾವರಿ ಯೋಜನೆಗಳು* – *ಡಿಪಿಆರ್ ತಯಾರಿಸಲು ಅನುಮತಿಸಿದ ಸಚಿವ ರಮೇಶ್ ಜಾರಕಿಹೊಳಿ‌.*

ಬೆಳಗಾವಿ ಜಿಲ್ಲೆಗೆ *11 ಹೊಸ ಏತ ನೀರಾವರಿ ಯೋಜನೆ* ಗಳನ್ನು ಜಾರಿಗೊಳಿಸುವ ಜಲಸಂಪನ್ಮೂಲ ಸಚಿವರಾದ  ರಮೇಶ್ ಜಾರಕಿಹೊಳಿ‌* ಅವರ ಪ್ರಸ್ತಾಪಗಳಿಗೆ ವಿಸ್ತೃತ ಯೋಜನಾ ವರದಿ ತಯಾರಿಸಲು ಕರ್ನಾಟಕ ನೀರಾವರಿ ನಿಗಮ ನಿಯಮಿತವು ಅನುಮತಿ ನೀಡಿದೆ.

ನಿನ್ನೆ ನಡೆದ ನಿಗಮದ ಅಂದಾಜು ಪರಿಶೀಲನಾ ಸಭೆಯಲ್ಲಿ ಈ *11 ಏತ ನೀರಾವರಿ ಯೋಜನೆ* ಗಳ ಅನುಷ್ಠಾನಕ್ಕೆ ಸಂಬಂಧಿಸಿ ಚರ್ಚೆ ನಡೆಸಿ, ಈ ಯೋಜನೆಗಳಿಗೆ ಅವಶ್ಯವಿರುವ *9.91 ಟಿಎಂಸಿ ನೀರನ್ನು ಹಂಚಿಕೆ‌ ಮಾಡಲು* ಸಹಾ ಅನುಮೋದನೆ ನೀಡಲಾಗಿದೆ.

ಹಾಗೆಯೇ, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲ್ಲೂಕುಗಳಲ್ಲಿ ಅನುಷ್ಠಾನಕ್ಕೆ ತರಲಾಗುವ ವಿವಿಧ *ಏಳು ನೀರಾವರಿ ಯೋಜನೆ* ಗಳಿಗೂ ಸಹಾ ವಿಸ್ತೃತ ಯೋಜನಾ ವರದಿ ತಯಾರಿಸಲು ಕರ್ನಾಟಕ ನೀರಾವರಿ ನಿಗಮದ ಅಂದಾಜು ಪರಿಶೀಲನಾ ಸಭೆ ಅನುಮತಿ ನೀಡಿದೆ.
————————–

Check Also

ಅವರು ಶುರು ಮಾಡಿದ್ದಾರೆ.ನೀವೂ ಅದನ್ನೇ ಮಾಡೋದು ಒಳ್ಳೆಯದು…!!!

ಬೆಂಗಳೂರು-ಕನ್ನಡ ಉಳಿಯಬೇಕು ಬೆಳೆಯಬೇಕು,ಡಾಕ್ಟರ್ ಬರೆದಿದ್ದು ರೋಗಿಗೆ ತಿಳಿಯಬೇಕು ತಪಾಸಣೆ ಮಾಡಿದ ಬಳಿಕ ಡಾಕ್ಟರ್ ಸಾಹೇಬ್ರು ಔಷಧಿ ಬರೆದು ಕೊಡ್ತಾರೆ ಅದು …

Leave a Reply

Your email address will not be published. Required fields are marked *

Sahifa Theme License is not validated, Go to the theme options page to validate the license, You need a single license for each domain name.