Breaking News

ಡಿಕೆಶಿ ನನ್ನ ಹಳೆಯ ಮಿತ್ರ,ಕಾನೂನು ಹೋರಾಟದಲ್ಲಿ ಶುಭವಾಗಲಿ ಎಂದ ರಮೇಶ್ ಸಾಹುಕಾರ್

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನನ್ನ ಹಳೆಯ ಗೆಳೆಯ. ಅವರು ಕಾನೂನು ಹೋರಾಟದಲ್ಲಿ ಗೆದ್ದು ಬರಲಿ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಶುಭಕೋರಿದ್ದಾರೆ.

ಬೆಂಗಳೂರಿನಲ್ಲಿ ಮಾನತಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮನೆ ಮೇಲೆನ ಸಿಬಿಐ ದಾಳಿ ರಾಜಕೀಯ ಪ್ರೇರಿತವಾಗಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದಾರೆ. ಇದೇ ವೇಳೆ ರಮೇಶ್ ಜಾರಕಿಹೊಳಿ ಶುಭ ಹಾರೈಸಿದ್ದಾರೆ.

ವೈಯಕ್ತಿಕವಾಗಿ ಡಿಕೆ ಶಿವಕುಮಾರ್ ನನಗೆ ಹಳೆಯ ಮಿತ್ರ. ಅವರು ಕಾನೂನು ಹೋರಾಟದಲ್ಲಿ ಜಯಶೀಲರಾಗಿ ಬರಲಿ ಎಂದು ಹಾರೈಸುತ್ತೇನೆ.

ಉದ್ಯೋಗದಲ್ಲಿ ಅವನು ಸರಿಯಾಗಿ ಇದ್ದರೆ ಹೆದರುವ ಅವಶ್ಯಕತೆ ಇಲ್ಲ. ಉಪ ಚುನಾವಣೆ ವೇಳೆ ರಾಜಕೀಯ ಉದ್ದೇಶದಿಂದ ಈ ದಾಳಿ ಎಂಬುದರ ಬಗ್ಗೆ ಈಗ ಚರ್ಚೆ ಬೇಡ. ಆತನಿಗೆ ಒಳ್ಳೆಯದಾಗಲಿ ಎಂದು ಹೇಳಿದ್ದಾರೆ.

Check Also

ಇಂದು ಬೆಳಗಾವಿಯಲ್ಲಿ ಬೃಹತ್ ಮೌನ ಮೆರವಣಿಗೆ ಹತ್ತು ಸಾವಿರ ರೇನ್ ಕೋಟ್ ವಿತರಣೆ

ಇಂದು ಬೆಳಗಾವಿಯಲ್ಲಿ ಬೃಹತ್ ಮೌನ ಮೆರವಣಿಗೆ ಹತ್ತು ಸಾವಿರ ರೇನ್ ಕೋಟ್ ವಿತರಣೆ ಬೆಳಗಾವಿ- ಪುಣ್ಯಕ್ಷೇತ್ರ ಧರ್ಮಸ್ಥಳದ ಕುರಿತು ಸರ್ಕಾರ …

Leave a Reply

Your email address will not be published. Required fields are marked *