ಬೆಳಗಾವಿ- ಖಾನಾಪೂರ ವಿಧಾಸಭೆ ಮತ ಕ್ಷೇತ್ರದಲ್ಲಿ ಸ್ಥಳೀಯರು ಸ್ಪರ್ದೆ ಮಾಡಿದರೆ ಕಾಂಗ್ರೆಸ್ ಪಕ್ಷಕ್ಕೆ ಅನಕೂಲ ಆಗಬಹುದು ಎನ್ನುವ ಅಭಿಪ್ರಾಯ ಇದೆ ಆದ್ರೆ ಅಂಜಲಿ ನಿಂಬಾಳ್ಕರ್ ಅವರಿಗೆ ಕಾಂಗ್ರೆಸ್ ಟಿಕೇಟ್ ಸಿಗೋದು ಡೌಟು ಎನ್ನುವ ಸುಳಿವನ್ನು ಸ್ವತಹ ರಮೇಶ ಜಾರಕಿಹೊಳಿ ನೀಡಿದ್ದಾರೆ
ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ರಮೇಶ ಜಾರಕಿಹೊಳಿ ಅಂಜಲಿ ನಿಂಬಾಳ್ಕರ್ ಅವರು ಖಾನಾಪೂರದಲ್ಲಿ ಮನೆ ಮಾಡಿಕೊಂಡಿದ್ದಾರೆ ಆದರೂ ಕಾಂಗ್ರೆಸ್ ಹೈಕಮಾಂಡ್ ಯಾರಿಗೆ ಟಿಕೆಟ್ ಕೊಡುತ್ತದೆ ಎನ್ನುವುದನ್ನು ಅಲ್ಲಿಯ ಪರಿಸ್ಥಿತಿ ನೋಡಿ ನಿರ್ಧಾರ ಕೈಗೊಳ್ಳುತ್ತದೆ ಎಂದು ರಮೇಶ ಜಾರಕಿಹೊಳಿ ಹೇಳಿದರು
ಬೆಳಗಾವಿ ಜಿಲ್ಲೆಯ ಜಾಂಗ್ರೆಸ್ ವಲಯದಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಸಮಸುದ್ಧಿ ಮತ್ತು ಹೆಬ್ಬಾಳಕರ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಇವರಿಬ್ಬರ ನಡುವೆ ಯಾವುದೇ ವಿವಾದ ನಡೆದಿಲ್ಲ ಅಂತ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ತಿಳಿಸಿದರು
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ