Breaking News

ಸುರೇಶ ಅಂಗಡಿ ಅವರ ಕುಟುಂಬದವರಿಗೆ ಟಿಕೆಟ್ ಕೊಡಲಿ

ಗೋಕಾಕ : ಬೆಳಗಾವಿ ಲೋಕಸಭಾ ಉಪಚುನಾವಣಾ ಬಿಜೆಪಿ ಟಿಕೆಟ್ ದಿ.ಸುರೇಶ ಅಂಗಡಿ ಕುಟುಂಬದವರಿಗೆ ನೀಡಬೇಕು ಎಂಬುವುದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ ಅಂತಾ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಪಟ್ಟಣದಲ್ಲಿ ಭಾನುವಾರ ನಡೆದ ಬಿಜೆಪಿ ಬೆಂಬಲಿತ ನೂತನ ಗ್ರಾ.ಪಂ. ಸದಸ್ಯರಿಗೆ ಸತ್ಕಾರ್ ಸಮಾರಂಭ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಜೆಪಿ ಟಿಕೆಟ್ ಅಂಗಡಿ ಕುಟುಂಬದವರಿಗೆ ನೀಡಬೇಕು ಎನ್ನುವುದು ನನ್ನ ಅಭಿಪ್ರಾಯ. ಆದ್ರೆ ವರಿಷ್ಠರು ಏನೇ ನಿರ್ಧಾರ ತೆಗೆದುಕೊಂಡರು ಅದಕ್ಕೆ ನಾನು ಬದ್ಧನಾಗಿರುತ್ತೇನೆ ಎಂದಿದ್ದಾರೆ.

ಬೆಳಗಾವಿ ಜಿಲ್ಲೆಯ ಮೂಲೆ ಮೂಲೆಯಲ್ಲಿ ಬಿಜೆಪಿ ಪಕ್ಷವನ್ನು ಗಟ್ಟಿಗೊಳಿಸುವ ಎಲ್ಲ ಪ್ರಯತ್ನವನ್ನು ಮಾಡಲು ಸಿದ್ಧರಿದ್ದೇವೆ. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಆಯ್ಕೆಯಾದ ನೂತನ ಸದಸ್ಯರು ಗ್ರಾಮ ಮಟ್ಟದಲ್ಲಿ ಸಮಸ್ಯೆಗಳನ್ನು ಸವಾಲಾಗಿ ಸ್ವೀಕರಿಸಿ, ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ಸಚಿವರು, ಶಾಸಕರು ಮಾಡದಂತ ಕೆಲಸಗಳನ್ನು ಗ್ರಾಪ. ಸದಸ್ಯರು ಮಾಡಬಹುದು. ಯಾಕಂದ್ರೆ, ಗ್ರಾಮದಲ್ಲಿ ಪ್ರತಿ ದಿನ ಇರುವವರು ತಾವಾಗಿರುತ್ತಿರಾ, ಇದರಿಂದ ಗ್ರಾಮದ ಸಮಸ್ಯೆಗಳು ನಿಮಗೆ ಗೊತ್ತಿರುತ್ತವೆ. ಆದ ಕಾರಣ ತಾವು ಜನರ ಧ್ವನಿಯಾಗಿ, ಗ್ರಾಮದ ಅಭಿವೃದ್ಧಿಗೆ ಕೆಲಸ ಮಾಡಬೇಕು. ನಿಮಗೆ ಎಲ್ಲ ರೀತಿಯ ಸಹಕಾರವನ್ನು ನೀಡಲಾಗುತ್ತದೆ ಎಂದು ಭರವಸೆ ನೀಡಿದರು.

ಯಾರು ಗ್ರಾಮದ ಅಭಿವೃದ್ಧಿಗೆ ಹಾಗೂ ಜನರ ಧ್ವನಿಯಾಗಿ ಕೆಲಸ ಮಾಡುತ್ತಿರೋ, ಅಂತವರು ಒಳ್ಳೆಯ ನಾಯಕರಾಗಲು ಸಾಧ್ಯ. ನಿಮಗೆ ರಾಜಕೀಯವಾಗಿ ಗುರುತಿಸಿಕೊಳ್ಳಲು ಒಳ್ಳೆಯ ಅವಕಾಶವಾಗಿದೆ ಎಂದು ನೂತನ ಸದಸ್ಯರಿಗೆ ಕಿವಿ ಮಾತು ಹೇಳಿದರು.

Check Also

ಇವರು ನೀಡಿದ ಚಿಕಿತ್ಸೆ ಅದ್ಭುತ , ಬೆಳಗಾವಿಯ ವ್ಯಕ್ತಿ ಇವರ ಔಷಧಿಯಿಂದ ಬದುಕಿದ್ದು ಪವಾಡ…!!

ನಾಟಿ ವೈದ್ಯ ಲೋಕೇಶ್ ಟೇಕಲ್ ಅವರು ನೀಡಿದ ಚಿಕಿತ್ಸೆ ನೋಡಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಈ …

Leave a Reply

Your email address will not be published. Required fields are marked *