Breaking News

ಕೇಂದ್ರದ ರಕ್ಷಣಾ ಸಚಿವರನ್ನು ಸಾಹುಕಾರ್ ಭೇಟಿಯಾಗಿದ್ದು ಯಾಕೆ ಗೊತ್ತಾ…?

ಬೆಳಗಾವಿಯಲ್ಲಿ ಸೈನಿಕ ಶಾಲೆ‌ ಪ್ರಾರಂಭಿಸಲು ಸಚಿವ ರಮೇಶ್ ಜಾರಕಿಹೊಳಿ‌ ಒತ್ತಾಯ*

ಬೆಳಗಾವಿ-ಕೇಂದ್ರ ರಕ್ಷಣಾ ಸಚಿವ ಮತ್ತು ಭಾರತೀಯ ಜನತಾ ಪಾರ್ಟಿಯ ಮಾಜಿ ರಾಷ್ಟ್ರೀಯ ಅಧ್ಯಕ್ಷ  ರಾಜನಾಥ ಸಿಂಗ್* ಅವರನ್ನು ರಾಜ್ಯದ ಜಲಸಂಪನ್ಮೂಲ ಸಚಿವರಾದ  ರಮೇಶ್ ಜಾರಕಿಹೊಳಿ‌ ಅವರು ಭೇಟಿ ಮಾಡಿ ಚರ್ಚೆ ನಡೆಸಿದರು.

ನಿನ್ನೆಯ ಕೇಂದ್ರ ಬಜೆಟ್ ನಲ್ಲಿ ಘೋಷಿಸಿದಂತೆ ದೇಶದಾದ್ಯಂತ ಸೈನಿಕ ಶಾಲೆಗಳನ್ನು ಪ್ರಾರಂಭಿಸುವ ಪ್ರಸ್ತಾವನೆಗೆ ಹರ್ಷ ವ್ಯಕ್ತಪಡಿಸಿದ ಸಚಿವ *ರಮೇಶ್ ಜಾರಕಿಹೊಳಿ‌*, ಕಿತ್ತೂರು ರಾಣಿ ಚೆನ್ನಮ್ಮ ಅವರ ಹೆಸರಿನಲ್ಲಿ ಹೆಣ್ಣು ಮಕ್ಕಳಿಗೆ ಮತ್ತು ಸಂಗೊಳ್ಳಿ ರಾಯಣ್ಣ ಹೆಸರಿನಲ್ಲಿ ಗಂಡು ಮಕ್ಕಳಿಗೆ ಬೆಳಗಾವಿ ಭಾಗದಲ್ಲಿ ಆದ್ಯತೆಯ ಮೇರೆಗೆ ಸೈನಿಕ ಶಾಲೆ ಪ್ರಾರಂಭಿಸಬೇಕೆಂದು ಕೇಂದ್ರ ರಕ್ಷಣಾ ಸಚಿವರಿಗೆ ಮನವಿ‌ ಮಾಡಿದರು. ಈ ಕುರಿತು ಸನ್ಮಾನ್ಯ ಪ್ರಧಾನಮಂತ್ರಿಗಳಿಗೂ ಪತ್ರ ಬರೆದು ಮನವಿ ಸಲ್ಲಿಸಲಾಗುವುದು ಎಂದು ಸಚಿವ *ರಮೇಶ್ ಜಾರಕಿಹೊಳಿ‌* ಹೇಳಿದರು.

Check Also

ದುಬಾರಿ ಐಫೋನ್ ತಂದಿದ್ದನ್ನು ತಂದೆ ಪ್ರಶ್ನಿಸಿದ್ದಕ್ಕೆ ಯುವಕನ ಆತ್ಮಹತ್ಯೆ

ಬೆಳಗಾವಿ-70 ಸಾವಿರ ಬೆಲೆಯ,ದುಬಾರಿ ಐಫೋನ್ ತಂದಿದ್ದನ್ನು ತಂದೆ ಪ್ರಶ್ನಿಸಿದ್ದಕ್ಕೆ ಮಗ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಇಷ್ಟೊಂದು ದುಬಾರಿ ಐಪೋನ್ …

Leave a Reply

Your email address will not be published. Required fields are marked *