ಬೆಳಗಾವಿ- ಇಂದು ಬೆಳ್ಳಂ ಬೆಳಗ್ಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಗೋಕಾಕ್ ಕ್ಷೇತ್ರದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಪ್ರವಾಹ ಪರಿಸ್ಥಿತಿಯನ್ನು ಪರಶೀಲಿಸಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದರು.
ಗೋಕಾಕ್ ಲೋಳಸೂರು ಸೇತುವೆ ಸೇರಿದಂತೆ ಅನೇಕ ಜಲಾವ್ರತ ಪ್ರದೇಶಗಳಿ ಭೇಟಿ ನೀಡಿದ ರಮೇಶ್ ಜಾರಕಿಹೊಳಿ ನೆರೆಹಾವಳಿಯಿಂದ ಸಾರ್ವಜನಿಕರು ಹೆದರುವ ಅಗತ್ಯವಿಲ್ಲ, ನಾನು ನಿಮ್ಮ ಜೊತೆಗೆ ಇದ್ದೇನೆ.ಯಾವುದೇ ರೀತಿಯ ತೊಂದರೆ ಆಗದಂತೆ ಅಧಿಕಾರಿಗಳಿಗೆ ಎಲ್ಲ ರೀತಿಯ ನೆರವು ನೀಡುವಂತೆ ಸೂಚನೆ ಕೊಡುತ್ತೇನೆ ಎನ್ನುವ ಭರವಸೆ ನೀಡಿದರು.
ಗೋಕಾಕಿನ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿದ ರಮೇಶ್ ಜಾರಕಿಹೊಳಿ ಸಂತ್ರಸ್ತರಿಗೆ ಗುಣಮಟ್ಟದ ಆಹಾರವನ್ನು ನಿಗದಿತ ಸಮಯದಲ್ಲಿ ನೀಡಬೇಕು ಊಟ,ಮತ್ತು ವಸತಿ ವ್ಯವಸ್ಥೆಯಲ್ಲಿ ಯಾವುದೇ ರೀತಿಯ ಲೋಪ ಆಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ರಮೇಶ್ ಜಾರಕಿಹೊಳಿ ತಾಕೀತು ಮಾಡಿದರು.
ಗೋಕಾಕ್ ಕ್ಷೇತ್ರದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಬಳಿಕ ರಮೇಶ್ ಜಾರಕಿಹೊಳಿ ಅಧಿಕಾರಿಗಳ ಸಭೆ ನಡೆಸಿ ಘಟಪ್ರಭಾ,ಹಿರಣ್ಯಕೇಶಿ,ಜೊತೆಗೆ ಬಳ್ಳಾರಿ ನಾಲೆಯ ನದಿ ನೀರಿನಿಂದ ಜಲಾವ್ರತಗೊಳ್ಳುವ ಪ್ರದೇಶಗಳ ಮೇಲೆ ಅಧಿಕಾರಿಗಳು ನಿಗಾ ವಹಿಸಬೇಕು.ಅಲ್ಲಿಯ ನಿವಾಸಿಗಳನ್ನು ಮನವೊಲಿಸಿ ಕಾಳಜಿ ಕೇಂದ್ರಕ್ಕೆ ಶಿಪ್ಟ್ ಮಾಡಬೇಕು, ಸಾರ್ವಜನಿಕರಿಗೆ ಯಾವುದೇ ರೀತಿಯಿಂದ ತೊಂದರೆ ಆಗದಂತೆ ನೋಡಿಕೊಳ್ಳಬೇಕು,ಈ ವಿಚಾರದಲ್ಲಿ ನಿರ್ಲಕ್ಷ್ಯ ಮಾಡಿದ್ರೆ ಶಿಸ್ತಿನ ಕ್ರಮ ಕೈಗೊಳ್ಳಲಾಗುವದು ಎಂದು ರಮೇಶ್ ಜಾರಕಿಹೊಳಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.