Breaking News

ಬೆಳಗಾವಿ ಬಿಜೆಪಿ ಕಚೇರಿಗೆ ರಮೇಶ್ ಜಾರಕಿಹೊಳಿ ಭೇಟಿ……

 

ಬೆಳಗಾವಿ- ಮಾಜಿ ಸಚಿವ ರಮೇಶ್ ಜಾರಕಿಹೊಳಿ ಗುರುವಾರ ಬೆಳಗಾವಿ ಗ್ರಾಮಾಂತರ ಜಿಲ್ಲೆಯ ಬಿಜೆಪಿ ಕಚೇರಿಗೆ ಭೇಟಿ ನೀಡಿದರು.

ಬೆಳಗಾವಿ ಗ್ರಾಮಾಂತರ ಜಿಲ್ಲೆಯ ಬಿಜೆಪಿ ಅಧ್ಯಕ್ಷ ಸುಭಾಷ್ ಪಾಟೀಲ ರಮೇಶ್ ಜಾರಕಿಹೊಳಿ ಅವರನ್ನು ಬರಮಾಡಿಕೊಂಡು ಸತ್ಕರಿಸಿದರು. ಬೆಳಗಾವಿಯ ಧರ್ಮನಾಥ ಸರ್ಕಲ್ ನಲ್ಲಿರುವ ಕಟ್ಟಡದಲ್ಲಿ ಬಿಜೆಪಿ ಕಚೇರಿಯನ್ನು ಇತ್ತೀಚಿಗಷ್ಟೆ ಆರಂಭಿಸಲಾಗಿದೆ.ಧರ್ಮನಾಥ ಸರ್ಕಲ್ ಹತ್ತಿರ ಹತ್ತು ಗುಂಟೆ ಖುಲ್ಲಾ ಜಾಗೆಯಲ್ಲಿ ಬಿಜೆಪಿ ಕಚೇರಿಯನ್ನು ನಿರ್ಮಿಸಲಾಗುತ್ತಿದೆ.ಈ ಜಾಗೆಯ ಹತ್ತಿರವೇ ಈಗ ಬಿಜೆಪಿ ಕಚೇರಿಯ ಕಾರ್ಯಾರಂಭ ಆಗಿದೆ.

ಬಿಜೆಪಿ ಕಚೇರಿಗೆ ಭೇಟಿ ನೀಡಿದ ರಮೇಶ್ ಜಾರಕಿಹೊಳಿ ಆದಷ್ಟು ಬೇಗ ಕಟ್ಟಡ ಕಾಮಗಾರಿಯನ್ನು ಆರಂಭಿಸಬೇಕು ಈ ಕಾರ್ಯದಲ್ಲಿ ನಾನೂ ಕೈ ಜೋಡಿಸುವೆ ತ್ವರಿತಗತಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸುವ ಸಂಕಲ್ಪ ಮಾಡಬೇಕು ಎಂದು ಹೇಳಿದ ರಮೇಶ್ ಜಾರಕಿಹೊಳಿ,ಕಾರ್ಯಕರ್ತರು ಬರುವ ತಾಲ್ಲೂಕು ಪಂಚಾಯತಿ ಮತ್ತು ಜಿಲ್ಲಾ ಪಂಚಾಯತಿ ಚುನಾವಣೆಗೆ ಸನ್ನದ್ಧರಾಗಬೇಕು ಎಂದು ಹೇಳುದರು

ಈ ಸಂಧರ್ಭದಲ್ಲಿ ಮಾಜಿ ಶಾಸಕ ಸಂಜಯ ಪಾಟೀಲ, ಮುರುಘೇಂದ್ರ ಪಾಟೀಲ ಸೇರಿದಂತೆ ಹಲವಾರು ಜನ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Check Also

ವೀರ ಮದಕರಿ ಪುತ್ಥಳಿ ಸ್ಥಾಪನೆ- ಸ್ಥಳ ಪರಿಶೀಲಿಸಿ ವರದಿ ನೀಡಲು ಸೂಚನೆ:

ಪರಿಶಿಷ್ಟರ ದೂರು ನಿವಾರಣೆಗೆ ತ್ವರಿತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ಬೆಳಗಾವಿ, -: ಪರಿಶಿಷ್ಟ ಜಾತಿ/ವರ್ಗಗಳ ದೌರ್ಜನ್ಯ …

Leave a Reply

Your email address will not be published. Required fields are marked *