ವಕ್ಫ್ ಭೂಕಬಳಿಕೆ ವಿರೋಧಿಸಿ ಡಿಸೆಂಬರ್ 1 ರಂದು ಬೆಳಗಾವಿಯಲ್ಲಿ ಜನಜಾಗೃತಿ ಹೋರಾಟ
ಬೆಳಗಾವಿ- ವಕ್ಫ್ ಭೂ ಕಬಳಿಕೆ ವಿರೋಧಿಸಿ ಬಿಜೆಪಿ ಪಕ್ಷ ರಾಜ್ಯಾದ್ಯಂತ ಹೋರಾಟ ನಡೆಸಿದ್ದು ಡಿಸೆಂಬರ್ 1 ರಂದು ಬೆಳಗಾವಿಯಲ್ಲಿ ಬೃಹತ್ ಜನಜಾಗೃತಿ ಹೋರಾಟ ನಡೆಯಲಿದ್ದು ಈ ಹೋರಾಟದಲ್ಲಿ ರಾಜ್ಯದ ಬಿಜೆಪಿ ನಾಯಕರು ಭಾಗವಹಿಸಲಿದ್ದಾರೆ.
ಈ ಕುರಿತು ಬೆಳಗಾವಿಯ ಹೊಟೇಲ್ ಒಂದರಲ್ಲಿ ಪೂರ್ವಭಾವಿ ಸಭೆ ನಡೆಸಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬೆಳಗಾವಿಯಲ್ಲಿ ನಡೆಯಲಿರುವ ಹೋರಾಟದಲ್ಲಿ ಮುತವರ್ಜಿವಹಿಸಿ ಜವಾಬ್ದಾರಿ ನಿಭಾಯಿಸುವಂತೆ ಮನವಿ ಮಾಡಿಕೊಂಡರು. ಬಸನಗೌಡ ಪಾಟೀಲ ಯತ್ನಾಳ,,ಪ್ರತಾಪ ಸಿಂಹ,ಸಿಎಂ ಸಿದ್ದೇಶ್ ಅರವಿಂದ್ ಲಿಂಬಾವಳಿ,ಕುಮಾರ್ ಬಂಗಾರಪ್ಪ,ಬಿಪಿ ಹರೀಶ್ ,ಎನ್ ಆರ್ ಸಂತೋಷ ಸೇರಿದಂತೆ ರಾಜ್ಯದ ಪ್ರಮುಖ ಬಿಜೆಪಿ ನಾಯಕರು ಭಾಗವಹಿಸಲಿದ್ದಾರೆ ಎಂದು ಪೂರ್ವಭಾವಿ ಸಭೆಯಲ್ಲಿ ರಮೇಶ್ ಜಾರಕಿಹೊಳಿ ಮಾಹಿತಿ ನೀಡಿದರು.
ಡಿಸೆಂಬರ್ 1 ರಂದು ಬೆಳಗಾವಿಯ ಸರ್ದಾರ್ ಮೈದಾನದಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡಿ,ಪಕ್ಕದ ಗಾಂಧಿಭವನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಮಾವೇಶಗೊಳ್ಳಬೇಕು, ಬೆಳಗಾವಿ ಜಿಲ್ಲೆಯ ಎಲ್ಲ ತಾಲ್ಲೂಕುಗಳಿಂದ ಜನ ಸೇರುವಂತೆ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು.ಸಾವಿರಾರು ಸಂಖ್ಯೆಯಲ್ಲಿ ಸೇರುವ ಮೂಲಕ ಬೆಳಗಾವಿಯ ಹೋರಾಟ ಯಶಸ್ವಿಗೊಳಿಸಬೇಕು ಎಂದು ರಮೇಶ್ ಜಾರಕಿಹೊಳಿ ಪೂರ್ವಭಾವಿ ಸಭೆಯಲ್ಲಿ ಮನವಿ ಮಾಡಿಕೊಂಡರು
ಬೆಳಗಾವಿಯ ಗಾಂಧಿ ಭವನದಲ್ಲಿ ಬೆಳಗ್ಗೆ 11-00 ಗಂಟೆಯಿಂದ ಸಂಜೆ ,5 ಗಂಟೆಯವರೆಗೆ ವಕ್ಫ್ ಭೂ ಕಬಳಿಕೆ ವಿರೋಧಿಸಿ ಕಾರ್ಯಕ್ರಮ ನಡೆಯಲಿದೆ ಎಂದು ರಮೇಶ್ ಜಾರಕಿಹೊಳಿ ಮಾಹಿತಿ ನೀಡಿದ್ರು.ಪೂರ್ವಭಾವಿ ಸಭೆಯಲ್ಲಿ ಬಿಜೆಪಿ ಮುಖಂಡ ಕಿರಣ ಜಾಧವ, ಮುರುಘೇಂದ್ರಗೌಡ ಪಾಟೀಲ ಸೇರಿದಂತೆ ಹಲವಾರು ಜನ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ