Breaking News

ಯತ್ನಾಳಗೆ ನೋಟೀಸ್, ರಮೇಶ್ ಜಾರಕಿಹೊಳಿ ರಿಯಾಕ್ಷನ್

ಬೆಳಗಾವಿ-ಬಸನಗೌಡ ಯತ್ನಾಳಗೆ ಬಿಜೆಪಿ ಕೇಂದ್ರ ಶಿಸ್ತು ಸಮೀತಿಯಿಂದ ಶೋಕಾಸ್ ನೋಟಿಸ್ ಹೊರಡಿಸಲಾಗಿದ್ದು ಈ ವಿಚಾರವಾಗಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬೆಳಗಾವಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಗುಡುಗಿದ ರಮೇಶ್ ಜಾರಕಿಹೊಳಿ,ಯತ್ನಾಳ‌ಗೆ ಶೋಕಾಸ್ ನೋಟಿಸ್ ಇಂದು ಬಂದಿದ್ದಲ್ಲ, ಎರಡು ದಿನಗಳ ಹಿಂದೆಯೇ ಬಂದಿದೆ,ಮಾಧ್ಯಮಗಳಲ್ಲಿ ಇಂದು ಪ್ರಚಾರ ಆಗಿದೆ.ವಿಜಯೇಂದ್ರಗೆ ರಾಜ್ಯಾದ್ಯಕ್ಷ ಸ್ಥಾನ ನಿಭಾಯಿಸಲು ಆಗುವುದಿಲ್ಲ,ತಕ್ಷಣವೇ ಅವರನ್ನು ಬದಲಾವಣೆ ಮಾಡಬೇಕೆಂದ ರಮೇಶ್ ಜಾರಕಿಹೊಳಿ ಒತ್ತಾಯಿಸಿದ್ದಾರೆ.

ಬಿ.ಎಸ್. ಯಡಿಯೂರಪ್ಪ ಹುಟ್ಟು ಹೋರಾಟಗಾರ,ಆದರೆ ವಿಜಯೇಂದ್ರ ಬಿಎಸ್‌ವೈ ಅವರ ಕಾಲಿನ ಧೂಳಿವೂ ಸಮನಲ್ಲ,ಜೀನ್ಸ್ ಪ್ಯಾಂಟ್- ಟೀಶರ್ಟ್ ಹಾಕಿ ಅಡ್ಡಾಡುವ ವಯಸ್ಸು ಅವರದ್ದು,ಇನ್ನೂ ನಾಲ್ಕು ವರ್ಷಗಳ ಬಳಿಕ ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಹುದ್ದೆ ನೀಡಬೇಕಿತ್ತು,ನಾವು ಯತ್ನಾಳ ಬೆನ್ನಿಗೆ ನಿಲ್ತಿವಿ, ಕೇಂದ್ರ ‌ನಾಯಕರ ಮನವೊಲಿಸುತ್ತೇವೆ. ಎಂದು ರಮೇಶ್ ಜಾರಕಿಹೊಳಿ ಹೇಳಿದರು.

ನನ್ನ ಬೆನ್ನಿಗೆ ನಿಲ್ಲುವಂತೆ ವಿಜಯೇಂದ್ರ ಹಿಂದುಳಿದ ನಾಯಕರಿಗೆ ಬೆದರಿಸುತ್ತಿದ್ದಾರೆ,ವಿಜಯೇಂದ್ರ ಜೊತೆಯಲ್ಲಿರುವ ಬಹುತೇಕರು ಹಿಂದುಳಿದ‌ ಸಮುದಾಯದವರು,ಲಿಂಗಾಯತ, ಒಕ್ಕಲಿಗರು ಯಾರೂ ಇಲ್ಲ,ಪಾಪ ರೇಣುಕಾಚಾರ್ಯ ರಾಜಕೀಯ ‌ಅಸ್ತಿತ್ವಕ್ಕಾಗಿ ಅವರ ಜೊತೆಗಿದ್ದಾರೆ.ಬಿಜೆಪಿ ರಾಜ್ಯಾಧ್ಯಕ್ಷ ಯಾರಾಗಬೇಕು ಎಂದು ನಾನು ಬಹಿರಂಗವಾಗಿ ಹೇಳಲ್ಲ,ಇನ್ ಡೋರ್ ಸಭೆ ಮಾಡಿ ಕೇಳಲಿ ನಾನು ಹೇಳ್ತಿನಿ ಎಂದ ರಮೇಶ್ ‌ಜಾರಕಿಹೊಳಿ ಹೇಳಿದ್ದಾರೆ.

Check Also

ಈಜಲು ಹೋದ ಬಾಲಕ ನೀರು ಪಾಲು

ಬೆಳಗಾವಿ ಕೆರೆಯಲ್ಲಿ ಈಜಲು ಹೋದ ಬಾಲಕನೋರ್ವ ನೀರು ಪಾಲಾದ ಘಟನೆ ಬೆಳಗಾವಿ ತಾಲೂಕಿನ ವಾಘವಡೆ ಗ್ರಾಮದಲ್ಲಿ ನಡೆದಿದೆ.ಬೆಳಗಾವಿ ತಾಲೂಕಿನ ವಾಘವಡೆ …

Leave a Reply

Your email address will not be published. Required fields are marked *