ಬೆಳಗಾವಿ: ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತವು ಬೆಳಗಾವಿಯ ದೇಸೂರಿನಲ್ಲಿ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಪಾರ್ಕ್ ನಿರ್ಮಿಸಲು 41.34 ಎಕರೆ ಜಮೀನನ್ನು 2006-07ನೇ ಸಾಲಿನಲ್ಲಿ ಭೂಸ್ವಾಧೀನ ಮಾಡಿಕೊಂಡಿದೆ. ಇಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ದಿಪಡಿಸಲು ಸರ್ಕಾರ ಬದ್ಧವಾಗಿದೆ ಎಂದು ಸಣ್ಣ ಕೈಗಾರಿಕಾ ಸಚಿವ ರಮೇಶ ಜಾರಕಿಹೊಳಿ ಹೇಳಿದರು.
ವಿಧಾನ ಪರಿಷತ್ತಿನಲ್ಲಿ ಸದಸ್ಯ ಮಹಾಂತೇಶ ಮಲ್ಲಿಕಾರ್ಜುನ ಕವಟಗಿಮಠ ಅವರು ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸುತ್ತ ಸಚಿವರು ಈ ಮಾಹಿತಿ ನೀಡಿದರು.
ಬೆಳಗಾವಿ ಐ.ಟಿ.ಬಿ.ಟಿ. ಪಾರ್ಕಿನಲ್ಲಿ ಮೂಲಭೂತ ಸೌಕರ್ಯಗಳಾದ ಕಾಂಕ್ರೀಟ್ ರಸ್ತೆ, ಒಳಚರಂಡಿ ವ್ಯವಸ್ಥೆ, ನೀರು ಸರಬರಾಜು, ವಿದ್ಯುತ್ ಸರಬರಾಜು ಸೇರಿ ಮತ್ತಿತರ ಸೌಕರ್ಯಗಳನ್ನು 2010ರಲ್ಲಿಯೇ ಒದಗಿಸಲಾಗಿದೆ. ಗೋವಾ ಮತ್ತು ಬೆಳಗಾವಿಯಲ್ಲಿ ಅನೇಕ ಬಾರಿ ರೋಡ್ ಶೋ ಮೂಲಕ ಪ್ರಚಾರ ಕೈಗೊಳ್ಳಲಾಗಿದೆ. ಆದರೂ ಸಹ ಇಲ್ಲಿ ಉದ್ದಿಮೆ ಸ್ಥಾಪನೆಗೆ ಐ.ಟಿ.ಬಿ.ಟಿ. ಸಂಸ್ಥೆಗಳು ಮುಂದೆ ಬರುತ್ತಿಲ್ಲ. ವಿವಿಧ ಅಳತೆಯ 65 ನಿವೇಶನಗಳು ಈ ಪಾರ್ಕಿನಲ್ಲಿವೆ. ಸಾಕಷ್ಟು ಬೇಡಿಕೆ ಇಲ್ಲದ ಕಾರಣ ಮಾಹಿತಿ ತಂತ್ರಜ್ಞಾನ ಸಂಬಂಧಿತ ಇತರೆ ಮಾಲಿನ್ಯ ರಹಿತ ಕೈಗಾರಿಕಾ ಘಟಕಗಳಿಗೆ ಈ ನಿವೇಶನಗಳನ್ನು ಹಂಚಿಕೆ ಮಾಡಲು ಸರ್ಕಾರ ಅನುಮೋದನೆ ಪಡೆದು ಪ್ರಕಟಣೆ ನೀಡಲಾಗುತ್ತಿದೆ. ಈ ಐ.ಟಿ. ಪಾರ್ಕಿಗೆ ನಿಗಮದ ವತಿಯಿಂದ ಇನ್ನಷ್ಟು ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಸರ್ಕಾರ ಸಿದ್ಧವಿದೆ ಎಂದು ಸಚಿವ ಜಾರಕಿಹೊಳಿ ತಿಳಿಸಿದರು.
Check Also
ವೀಕ್ಲಿ ಮ್ಯಾರೇಜ್,ಇದು ಲಕ್ಷ ಲಕ್ಷ ರೂಗಳ ಪ್ಯಾಕೇಜ್ ಹುಡುಗರ ಲೈಫ್ ಡ್ಯಾಮೇಜ್ …..!!!
ಬೆಳಗಾವಿ – ಹೆಣ್ಣು ಮಕ್ಕಳ ಮಾರಾಟ ಆಯ್ತು,ಹನಿ ಟ್ರ್ಯಾಪ್ ಗೋಳಾಟ ಆಯ್ತು ಈಗ ಹೊಸದೊಂದ ಆಟ ಶುರುವಾಗಿದೆ ಇದು ಮದ್ಯ …