ಬೆಳಗಾವಿ –
ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ನಾಯಕರನ್ನೇ ಟಾರ್ಗೆಟ್ ಮಾಡಿರುವ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳಕರ,ಜಿಲ್ಲಾ ಯುಥ್ ಕಾಂಗ್ರೆಸ್ ಅಧ್ಯಕ್ಷ ಜಾವೇದ ಮುಲ್ಲಾ ಹಾಗು ಲಖನ್ ಜಾರಕಿಹೊಳಿ ನಿವಾಸದ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ
ಬೆಳಗಾವಿ ನಗರದ ಕುವೆಂಪು ನಗರದಲ್ಲಿರುವ ಲಕ್ಷ್ಮೀ ಹೆಬ್ಬಾಳಕರ ಮನೆ, ಜೊತೆಗೆ ಗೋಕಾಕಿನಲ್ಲಿರುವ ಯುಥ್ ಕಾಂಗ್ರೆಸ್ ಅಧ್ಯಕ್ಷ ಜಾವೇದ ಮುಲ್ಲಾ ಅವರ ನಿವಾಸ ಹಾಗು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ,ಲಖನ್ ಜಾರಕಿಹೊಳಿ ಅವರ ನಿವಾಸದ ಮೇಲೆ ಐಟಿ ರೇಡ್ ಬಿದ್ದಿದೆ
ಏಕಕಾಲಕ್ಕೆ ಜಿಲ್ಲೆಯ ಕಾಂಗ್ರೆಸ್ ನಾಯಕರ ನಿವಾಸದ ಮೇಲೆ ದಾಳಿ ಮಾಡಿರುವ ಐಟಿ ಅಧಿಕಾರಿಗಳು ಮನೆಯಲ್ಲಿರುವ ಮತ್ತು ಅವರ ಕಚೇರಿಯಲ್ಲಿರುವ ದಾಖಲೆಗಳನ್ನು ಪೆಶೀಲನೆ ಮಾಡುತ್ತಿದ್ದಾರೆ
ಬೆಳಿಗ್ಗೆ ದಾಳಿ ಮಾಡಿರುವ ಅಧಿಕಾರಿಗಳು ನಿವಾಸದ ಎದುರು ಪೋಲೀಸರನ್ನು ನಿಯೋಜಿಸಿ ಒಳಗಡೆ ದಾಖಲೆಗಳ ಪರಶೀಲನೆ ನಡೆಯುತ್ತಿದೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ