ಬೆಳಗಾವಿ:
ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಬರ ಪರಿಸ್ಥಿತಿ ಉಂಟಾಗುವ ಸಾಧ್ಯತೆಯಿದ್ದು, ಬರ ಪರಿಹಾರ ಕಾಮಗಾರಿಗಳ ಅನುಷ್ಠಾನದಲ್ಲಿ ಪಿ.ಡಿ.ಓ ಸೇರಿದಂತೆ ಯಾವುದೇ ಅಧಿಕಾರಿ ರಾಜಕೀಯ ಮಾಡಿದರೆ ತಕ್ಷಣವೆ ಅವರ ಮೇಲೆ ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಎಚ್ಚರಿಕೆ ನೀಡಿದರು.
ಸೋಮವಾರ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಬೆಳಗಾವಿ ತಾಲೂಕಿನ ಬರಗಾಲ ಪರಿಸ್ಥಿತಿ ಬಗೆಗೆ ಅಧಿಕಾರಿಗಳ ಸಭೆ ನಡೆಸಿ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದರು.
ಬರದ ಸಮರ್ಪಕ ನಿರ್ವಹಣೆಗಾಗಿ ಸರ್ಕಾರದಿಂದ ಅನೇಕ ಕ್ರಮಗಳನ್ನು ತೆಗೆದುಕೊಂಡಿದ್ದು, ಅವು ಜನರಿಗೆ ತಲುಪಿ ಬರದ ಪರಿಸ್ಥಿತಿಯಲ್ಲಿ ಕುಡಿಯಲ್ಲು ನೀರು, ಧನಗಳಿಗೆ ಮೇವು ಮತ್ತು ಬೆಳೆವಿಮೆ ಕುರಿತು ಮುಂಜಾಗೃತಾ ಕ್ರಮಗಳನ್ನು ಅಧಿಕಾರಿಗಳು ತೆಗೆದುಕೊಳ್ಳಬೇಕು. ಯಾವುದೇ ರೀತಿ ರಾಜಕೀಯ ಮಾಡಿ ಜನರಿಗೆ ತೊಂದರೆ ಉಂಟಾದಲ್ಲಿ ಸಹಿಸುವುದಿಲ್ಲ. ಅಂತವರ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವರು ಎಚ್ಚರಿಸಿದರು.
ಸಭೆಯಲ್ಲಿ ಕೃಷಿ, ಪಶುವೈದ್ಯಕೀಯ, ಹೆಸ್ಕಾಂ ಹಾಗೂ ಕುಡಿಯುವ ನೀರು ಸರಬರಾಜು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದುರು. ಬರ ಎದುರಿಸಲು ಕೈಗೊಂಡ ಕ್ರಮಗಳನ್ನುಕುರಿತು ಸಚಿವರು ವಿವರಿಸಿದರು.
ಅಧಿಕಾರಿಗಳು ಸ್ಥಳೀಯವಾಗಿ ಯಾವುದೇ ಅಭಿವೃದ್ದಿ ಕಾಮಗಾರಿಯನ್ನು ಮಾಡುವಾಗ ಸ್ಥಳೀಯ ಜನಪ್ರತಿನಿಧಿಗಳನ್ನು ಸಂಪರ್ಕಿಸಿ ವಿಸ್ವಾಸ ತೆಗೆದುಕೊಳ್ಳಬೇಕು. ಈ ಕುರಿತು ಸಾರ್ವಜನಿಕ ಹಿತದೃಷ್ಟಿಯಿಂದ ಕ್ರಮಕೈಗೊಳ್ಳಲು ಉಪವಿಭಾಗಾಧಿಕಾರಿಗಳಿಗೆ ಸೂಚಿಸಿದರು. ಎಲ್ಲ ಪಿ.ಡಿ.ಓ ಗಳಿಗೆ ಮಾಹಿತಿ ಕಳುಹಿಸುವಂತೆ ತಿಳಿಸಿದರು.
ಬೆಳಗಾವಿ ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಯ ಕಾರ್ಯವೈಖರಿಯ ಬಗ್ಗೆ ಅಸಮಾದಾನ ವ್ಯಕ್ತಪಡಿಸಿದ ಸಚಿವರು, ಜನಪ್ರತಿನಿಧಿಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸದೆ, ರಾಜಕೀಯ ಮಾಡಿದರು ಸೂಕ್ತ ಕ್ರಮ ಜರಿಗಿಸಬೇಕಾಗುತ್ತದೆ ಎಂದು ಅಧಿಕಾರಿಗಳಿಗೆ ಎಚ್ಚರಿಸಿದರು.
ಮುಂದಿನ ದಿನಗಳಲ್ಲಿ ಬರ ಪರಿಹಾರ ಕಾಮಗಾರಿಗಳ ಕುರಿತು ನಿರಂತರ ಪರಿಶೀಲನಾ ಸಭೆಗಳನ್ನು ನಡಸಿ ಪ್ರಗತಿ ಪರಿಶೀಲಿಸಲಾಗುವುದು. ಅಧಿಕಾರಿಗಳು ಸ್ಥಳೀಯವಾಗಿ ಜನರಿಗೆ ಲಭ್ಯವಿದ್ದು, ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕೆಂದು ಸಚಿವರು ಅಧಿಕಾರಿಗಳಿಗೆ ತಿಳಿಸಿದರು.
ವೇದಿಕೆಯಲ್ಲಿ ಉಪವಿಭಾಗಾಧಿಕಾರಿ ರಾಜಶ್ರೀ ಜೈನಾಪೂರ, ಜಿಲ್ಲಾ ಪಂಚಾಯತ ಅಧ್ಯಕೆ ಆಶಾ ಐಹೊಳೆ, ಉಪಾಧ್ಯಕ್ಷ ಅರುಣ ಕಟಾಂಬಳೆ, ತಾಲೂಕು ಪಂಚಾಯತ ಅಧ್ಯಕ್ಷ ಶ್ರೀ ಶಂಕರಗೌಡ ಪಾಟೀಲ, ಉಪಾಧ್ಯಕ್ಷ ಮಾರುತಿ ಸನದಿ, ಕೃಷಿ ಇಲಾಖೆ ಉಪ ನಿರ್ದೇಶಕರು, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಎಸ್.ಬಿ.ಮುಳ್ಳಳಿ ಉಪಸ್ಥಿತರಿದ್ದರು.
Check Also
ವೀಕ್ಲಿ ಮ್ಯಾರೇಜ್,ಇದು ಲಕ್ಷ ಲಕ್ಷ ರೂಗಳ ಪ್ಯಾಕೇಜ್ ಹುಡುಗರ ಲೈಫ್ ಡ್ಯಾಮೇಜ್ …..!!!
ಬೆಳಗಾವಿ – ಹೆಣ್ಣು ಮಕ್ಕಳ ಮಾರಾಟ ಆಯ್ತು,ಹನಿ ಟ್ರ್ಯಾಪ್ ಗೋಳಾಟ ಆಯ್ತು ಈಗ ಹೊಸದೊಂದ ಆಟ ಶುರುವಾಗಿದೆ ಇದು ಮದ್ಯ …