ಬೆಳಗಾವಿ-ಪ್ರಸಕ್ತ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲು ಕಾಲಿಗೆ ಚಕ್ರ ಕಟ್ಟಿಕೊಂಡು ಬೆಳಗಾವಿ ಜಿಲ್ಲೆಯಲ್ಲಿ ಓಡಾಡುತ್ತಿರುವ ಹಠಮಾರಿ ಸಾಹುಕಾರ್ ರಮೇಶ್ ಜಾರಕಿಹೊಳಿ ಅವರನ್ನು ದೆಹಲಿಗೆ ಕರೆಯಿಸಿಕೊಂಡಿದ್ದ ಅಮೀತ್ ಶಾ ಸಾಹುಕಾರ್ ಜೊತೆ ಮಹತ್ವದ ಚರ್ಚೆ ನಡೆಸಿದ್ದಾರೆ.
ದೆಹಲಿಯಲ್ಲಿ ಸುಮಾರು ಮುಕ್ಕಾಲು ಗಂಟೆ ರಮೇಶ್ ಜಾರಕಿಹೊಳಿ ಅವರ ಜೊತೆ ಸುಧೀರ್ಘ ಚರ್ಚೆ ಮಾಡಿರುವ ಅಮೀತ್ ಶಾ ಬೆಳಗಾವಿ ಜಿಲ್ಲೆಯಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಫೀಡ್ ಬ್ಯಾಕ್ ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ವಿಧಾನಸಭೆ ಚುನಾವಣೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಅತೀ ಹೆಚ್ಚು ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲು ದೆಹಲಿಯಲ್ಲಿ ಮಾಸ್ಟರ್ ಪ್ಲ್ಯಾನ್ ಸಿದ್ಧವಾಗಿದೆ ಎಂದು ಹೇಳಲಾಗುತ್ತಿದ್ದು ರಮೇಶ್ ಜಾರಕಿಹೊಳಿ ಅವರಿಗೆ ಹೆಚ್ಚಿನ ಜವಾಬ್ದಾರಿ ಕೊಡಲಾಗಿದೆ,ಈ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಮಾಸ್ಟರ್ ಸ್ಟ್ರೋಕ್ ಹೊಡೆಯಲು ಅಮೀತ್ ಶಾ ರಮೇಶ್ ಜಾರಕಿಹೊಳಿ ಅವರಿಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.
ಬೆಳಗಾವಿ ಜಿಲ್ಲೆಯ ರಾಜಕೀಯ ವಿದ್ಯಮಾನಗಳ ಕುರಿತು,ಬೆಳಗಾವಿ ಜಿಲ್ಲೆಯ ಬಿಜೆಪಿ ನಾಯಕರ ಪಕ್ಷದ ಚಟುವಟಿಕೆಗಳ ಕುರಿತು,ರಮೇಶ್ ಜಾರಕಿಹೊಳಿ ಅಮೀತ್ ಶಾ ಅವರಿಗೆ ಮಾಹಿತಿ ನೀಡಿದ್ದು, ಬೆಳಗಾವಿ ಜಿಲ್ಲೆಯಲ್ಲಿ ಮತ್ತೊಮ್ಮೆ ಬಿಜೆಪಿ ಬಾವುಟ ಹಾರಿಸಲು ತಾವು ರೂಪಿಸಿರುವ ತಂತ್ರಗಳ ಬಗ್ಗೆಯೂ ಅಮೀತ್ ಶಾ ಅವರಿಗೆ ರಮೇಶ್ ಜಾರಕಿಹೊಳಿ ಅವರು ಮಾಹಿತಿ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.
ಜಿದ್ದಿಗೆ ಇನ್ನೊಂದು ಹೆಸರೇ ರಮೇಶ್ ಜಾರಕಿಹೊಳಿ, ಈ ಹಿಂದೆ ಬಿಜೆಪಿ ಸರ್ಕಾರ ರಚಿಸುವಾಗ ರಮೇಶ್ ಪಾತ್ರದ ಬಗ್ಗೆ ಪ್ರತ್ಯಕ್ಷ ಸಾಕ್ಷಿಯಾಗಿರುವ ಅಮೀತ್ ಶಾ ಅವರು ರಮೇಶ್ ಜಾರಕಿಹೊಳಿ ಅವರ ಬಗ್ಗೆ ಹೆಚ್ಚಿನ ವಿಶ್ವಾಸ ಹೊಂದಿದ್ದು, ಬೆಳಗಾವಿ ಜಿಲ್ಲೆಯ ಹದಿನೆಂಟು ವಿಧಾನಸಭಾ ಕ್ಷೇತ್ರಗಳ ಜವಾಬ್ದಾರಿಯನ್ನು ರಮೇಶ್ ಜಾರಕಿಹೊಳಿ ಅವರಿಗೆ ಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಈ ಕುರಿತು ಬೆಳಗಾವಿ ಸುದ್ದಿ ಡಾಟ್ ಕಾಮ್ ಜೊತೆ ಮಾತನಾಡಿದ ರಮೇಶ್ ಜಾರಕಿಹೊಳಿ,ಅಮೀತ್ ಶಾ ಅವರನ್ನು ಭೇಟಿ ಮಾಡಿದ್ದೇನೆ.ಪಕ್ಷದ ಗೆಲುವಿನ ಕುರಿತು ಅವರು ನನ್ನ ಜೊತೆ ಚರ್ಚೆ ಮಾಡಿದ್ದಾರೆ.ಅಮೀತ್ ಶಾ ಭೇಟಿಯ ನಂತರ ಹೆಚ್ಚಿನ ಸ್ಪೂರ್ತಿ ಸಿಕ್ಕಿದೆ.ಪಕ್ಷದ ಗೆಲುವಿಗೆ ಅಮೀತ್ ಶಾ ಅವರು ನೀಡಿರುವ ಸೂಚನೆಗಳನ್ನು ಅನುಸರಿಸಿ ಬಿಜೆಪಿ ಗೆಲುವಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದು ರಮೇಶ್ ಜಾರಕಿಹೊಳಿ ಹೇಳಿದರು.
ಸಭೆಯಲ್ಲಿ ಯಾವ ಯಾವ ವಿಷಯಗಳ ಮೇಲೆ ಚರ್ಚೆ ನಡೆಯಿತು ಅಮೀತ್ ಶಾ ಅವರು ನೀಡಿರುವ ಸೂಚನೆಗಳು ಏನು ಎಂದು ಪ್ರಶ್ನಿಸಿದಾಗ ಅದಕ್ಕೆ ಉತ್ತರಿಸಿದ ಅವರು ಚರ್ಚೆ ಫಲಪ್ರದವಾಗಿದೆ ಸಭೆಯಲ್ಲಿ ಚರ್ಚೆಯಾದ ವಿಚಾರಗಳ ಬಗ್ಗೆ ಮಾತನಾಡುವದಿಲ್ಲ,ಇದು ನಮ್ಮ ಪಕ್ಷದ ಸಿಕ್ರೇಟ್ ಪ್ಲ್ಯಾನ್ ಅದರ ಬಗ್ಗೆ ಮಾಹಿತಿ ಕೊಡುವದಿಲ್ಲ ಸ್ವಾರಿ ಎಂದು ರಮೇಶ್ ಜಾರಕಿಹೊಳಿ ಫೋನ್ ಕಟ್ ಮಾಡಿದ್ರು.