ಬೆಳಗಾವಿ- ಕಳಸಾ ಬಂಡೂರಿ ನಾಲಾ ಯೋಜನೆಯ ಕಾನೂನು ತೊಡಕುಕುಗಳು ನಿವಾರಣೆಯಾದ ಬಳಿಕ ,ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಈಗ ಅಲಮಟ್ಟಿ ಜಲಾಶಯದ ಎತ್ತರ ಹೆಚ್ಚಿಸುವ ಮಹತ್ವದ ಕಾರ್ಯಕ್ಕೆ ಕೈ ಹಾಕಿದ್ದಾರೆ
ಆಲಮಟ್ಟಿ ಜಲಾಶಯದ ನೀರಿನ ಸಂಗ್ರಹಣಾ ಮಟ್ಟವನ್ನು ಏರಿಸುವ ವಿಷಯಕ್ಕೆ ಸಂಬಂಧಿಸಿದಂತೆ ನಾಳೆ ದಿ. 17.03.2020 ಮಂಗಳವಾರ ರಾಜ್ಯದ ಜಲಸಂಪನ್ಮೂಲ ಸಚಿವರಾದ ಶ ರಮೇಶ್ ಜಾರಕಿಹೊಳಿಯವರು ಕೇಂದ್ರದ ಜಲಶಕ್ತಿ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, ಕೂಡಲೇ ರಾಜ್ಯದ ಈ ಪ್ರಸ್ತಾಪಕ್ಕೆ ಅನುಮೋದನೆ ನೀಡುವಂತೆ ಮನವಿ ಮಾಡಲಿದ್ದಾರೆ.
ನಾಳೆ ಬೆಳಗ್ಗೆ 10 ಗಂಟೆಗೆ
ಕೇಂದ್ರ ಜಲಶಕ್ತಿ ಸಚಿವರ ಕಚೇರಿ, ನವದೆಹಲಿಯಲ್ಲಿ ರಮೇಶ್ ಜಾರಕಿಹೊಳಿ ಅವರು ಕೇಂದ್ರ ಜಲಸಂಪನ್ಮೂಲ ಸಚಿವರ ಜೊತೆ ಸಮಾಲೋಚನೆ ನಡೆಸಲಿದ್ದು ಇದೇ ಸಂಧರ್ಭದಲ್ಲಿ ಕಳಸಾ ಬಂಡೂರಿ ನಾಲಾ ಯೋಜನೆಯ ಅನುಷ್ಠಾನದ ಕುರಿತು ಚರ್ಚೆ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.