*ಮಹಾರಾಷ್ಟ್ರ ರಾಜಕಾರಣ ; ಮಾಜಿ ಸಿಎಂ & ರಮೇಶ್ ಜಾರಕಿಹೊಳಿ ಮಹತ್ವದ ಭೇಟಿ*
ಕಿರುತೆರೆ ಮತ್ತು ಹಿರಿತೆರೆಯ ಪ್ರಖ್ಯಾತ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಸುತ್ತ ಸೃಷ್ಟಿಯಾದ ಗೊಂದಲ ಮತ್ತು ತನ್ನ ವೈಫಲ್ಯಗಳಿಂದ ಜನರ ನಂಬಿಕೆ ಕಳೆದುಕೊಳ್ಳುತ್ತಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆಗೆ ಚಳಿಬಿಡಿಸುವ ಕೆಲಸವನ್ನು ಭಾರತೀಯ ಜನತಾ ಪಾರ್ಟಿಯ ಹೈಕಮಾಂಡ್ ಮಾಡುತ್ತಿದೆ.
ಇದಕ್ಕೆ ಪೂರಕವಾಗಿ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ *ಶ್ರೀ ದೇವೇಂದ್ರ ಫಡ್ನವಿಸ್* ಮತ್ತು ಗಡಿ ಜಿಲ್ಲೆ ಬೆಳಗಾವಿಯ ಪ್ರಭಾವಿ ಮುಖಂಡರಾದ ಕರ್ನಾಟಕದ ಜಲಸಂಪನ್ಮೂಲ ಸಚಿವ *ಶ್ರೀ ರಮೇಶ್ ಜಾರಕಿಹೊಳಿ* ಅವರ ಮಧ್ಯೆ ಒಂದು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆದಿದೆ.
ನವದೆಹಲಿಯ ಗೌಪ್ಯಸ್ಥಳದಲ್ಲಿ ಸಚಿವ *ರಮೇಶ್ ಜಾರಕಿಹೊಳಿ* ಮತ್ತು *ದೇವೇಂದ್ರ ಫಡ್ನವಿಸ್* ಮಧ್ಯೆ ಮಾತುಕತೆ ನಡೆದಿದ್ದು, ಭಾಜಪ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಸೂಚನೆಯಂತೆಯೇ ಹಲವಾರು ವಿಷಯಗಳನ್ನು ಈ ಉಭಯ ನಾಯಕರು ಚರ್ಚಿಸಿದ್ದಾರೆ.
ಕರ್ನಾಟಕದಲ್ಲಿ ಮೈತ್ರಿ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಿ, ಭಾಜಪ ಸರ್ಕಾರ ಅಧಿಕಾರಕ್ಕೆ ಬರುವಂತೆ ಮಾಡಿದ *ರಮೇಶ್ ಜಾರಕಿಹೊಳಿ*, ಮಹಾರಾಷ್ಟ್ರದಲ್ಲೂ ತಮ್ಮ ಹಿಡಿತ ಹೊಂದಿದ್ದು, ಪ್ರಭಾವಿ ನಾಯಕರ ಮಧ್ಯದ ಭೇಟಿ ಶಿವಸೇನಾ ಮತ್ತು ಕಾಂಗ್ರೆಸ್ ವಲಯದಲ್ಲಿ ಭೀತಿ ಸೃಷ್ಟಿಸಿದೆ.