Breaking News

ಕಳಸಾ ಬಂಡೂರಿ ನಾಳೆ ಬೆಳಗಾವಿಯಲ್ಲಿ ಮಹತ್ವದ ಸಭೆ…

ಬೆಳಗಾವಿ- ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಕಳಸಾ ಬಂಡೂರಿ ಯೋಜನೆಯ ಅನುಷ್ಠಾನಕ್ಕೆ ನಿರಂತರ ಪ್ರಯತ್ನ ನಡೆಸಿದ್ದು ಆದಷ್ಟು ಬೇಗನೆ ಈ ಯೋಜನೆಯ ಪೂರ್ಣಗೊಳಿಸುವ ಸಂಕಲ್ಪ ಮಾಡಿದ್ದು ನಾಳೆ ಸೋಮವಾರ ಈ ಯೋಜನೆಯ ಕುರಿತು ಮಹತ್ವದ ಸಭೆ ನಡೆಸಲಿದ್ದಾರೆ.

ಕಳಸಾ ಬಂಡೂರ ಮತ್ತು ಗಟ್ಟಿ ಬಸವಣ್ಣ ಕುಡಿಯುವ ನೀರಿನ ಯೋಜನೆಗಳ ಅನುಷ್ಠಾನ ಮತ್ತು ಇತರೆ ನೀರಾವರಿ ಯೋಜನೆಗಳಿಗೆ ಅರಣ್ಯ ಇಲಾಖೆಯ ತೀರುವಳಿ ಪಡೆಯುವ ಕುರಿತು ಉನ್ನತ ಮಟ್ಟದ ಸಭೆ ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ‌* ಅವರ ಅಧ್ಯಕ್ಷತೆಯಲ್ಲಿ ನಾಳೆ ಸೋಮವಾರ ನಡೆಯಲಿದೆ.

ಬೆಳಗಾವಿ,ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ*ಮಧ್ಯಾಹ್ನ 12 ಗಂಟೆಗೆ ಸಭೆ ಆರಂಭವಾಗಲಿದ್ದು,ಸಭೆಯಲ್ಲಿ ಜಿಲ್ಲಾಧಿಕಾರಿಗಳು, ಜಲಸಂಪನ್ಮೂಲ ಮತ್ತು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.

Check Also

ನಿವೃತ್ತ ರಾಜ್ಯ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಮರ್ಡರ್…

ಬೆಂಗಳೂರು-ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರ ಮೃತದೇಹ ರಕ್ತದ ಮಡುವಿನಲ್ಲಿ ಪತ್ತೆಯಾಗಿದೆ. ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನ ಮನೆಯಲ್ಲಿ …

Leave a Reply

Your email address will not be published. Required fields are marked *