ರಮೇಶ ಜಿಗಜಿಣಗಿ ಆರೋಗ್ಯ ಸ್ಥಿತಿ ಗಂಭೀರ , ಬೆಳಗಾವಿ ಆಸ್ಪತ್ರೆಗೆ ದಾಖಲು

ಬೆಳಗಾವಿ :ವಿಜಯಪುರದ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಅವರ ಆರೋಗ್ಯದಲ್ಲಿ ಏರು ಪೇರಾಗಿದ್ದು, ಅವರನ್ನು ಬೆಳಗಾವಿಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರಿಗೆ ಮೆದುಳಿನ ರಕ್ತ ಸ್ರಾವ ಸಂಭವಿಸಿದೆ ಎಂದು ವರದಿಯಾಗಿದೆ. ಜಿಗಜಿಣಗಿ ಅವರನ್ನು ಬೆಳಗಾವಿಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಸ್ಥಿತಿಗಂಭೀರವಾಗಿದೆ ಎಂದು ವರದಿಯಾಗಿದೆ.

71 ವರ್ಷದ ರಮೇಶ ಜಿಗಜಿಣಗಿ ಕರ್ನಾಟಕದ ರಾಜ್ಯದ ಶಾಸಕ, ಸಂಸದ, ರಾಜ್ಯ ಮತ್ತು ಕೇಂದ್ರದ ಸಚಿವರಾಗಿದ್ದರು.
ಈ ಮೊದಲು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಲೋಕಸಭಾ ಮತಕ್ಷೇತ್ರವನ್ನು ಮೂರು ಸಲ ಗೆಲುವು ಸಾಧಿಸಿದ್ದರು.

ರಮೇಶ್ ಜಿಗಜಿಣಗಿ ಅವರು 1998, 1999 ಮತ್ತು 2004ರಲ್ಲಿ ಚಿಕ್ಕೋಡಿ (ಲೋಕ ಸಭೆ ಚುನಾವಣಾ ಕ್ಷೇತ್ರ)ದಿಂದ ಆಯ್ಕೆಯಾಗಿದ್ದರು. 2009, 2014 ಮತ್ತು 2019ರಲ್ಲಿ ನಡೆದ ಚುನಾವಣೆಯಲ್ಲಿ ವಿಜಯಪುರ ಲೋಕ ಸಭಾ ಕ್ಷೇತ್ರದಿಂದ ಸಂಸದರಾಗಿ ಲೋಕಸಭೆಗೆ ಆಯ್ಕೆಯಾಗಿದ್ದರು. 1983 ರಿಂದ 98ರ ತನಕ ಬಳ್ಳೊಳ್ಳಿ ವಿಧಾನಸಭಾ ಕ್ಷೇತ್ರದಿಂದ 3 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *